ಇಂದಿನಿಂದ ಎನ್‌ಎಸ್‌ಎಸ್‌ ರಾಜ್ಯಮಟ್ಟದ ಯುವಜನೋತ್ಸವ

| Published : Jun 15 2024, 01:10 AM IST

ಇಂದಿನಿಂದ ಎನ್‌ಎಸ್‌ಎಸ್‌ ರಾಜ್ಯಮಟ್ಟದ ಯುವಜನೋತ್ಸವ
Share this Article
  • FB
  • TW
  • Linkdin
  • Email

ಸಾರಾಂಶ

ರಾಷ್ಟ್ರೀಯ ಸೇವಾ ಯೋಜನಾ ಕೋಶ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ದಾವಣಗೆರೆ ವಿಶ್ವವಿದ್ಯಾನಿಲಯ ಸಹಯೋಗದಲ್ಲಿ ಜೂ.15 ರಿಂದ 19ರವರೆಗೆ ವಿ.ವಿ.ಯಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ರಾಜ್ಯ ಮಟ್ಟದ ಯುವಜನೋತ್ಸವ-2024 ಏರ್ಪಡಿಸಲಾಗಿದೆ.

ಕನ್ನಡಪ್ರಭ ವಾರ್ತೆ, ದಾವಣಗೆರೆ

ರಾಷ್ಟ್ರೀಯ ಸೇವಾ ಯೋಜನಾ ಕೋಶ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ದಾವಣಗೆರೆ ವಿಶ್ವವಿದ್ಯಾನಿಲಯ ಸಹಯೋಗದಲ್ಲಿ ಜೂ.15 ರಿಂದ 19ರವರೆಗೆ ವಿ.ವಿ.ಯಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ರಾಜ್ಯ ಮಟ್ಟದ ಯುವಜನೋತ್ಸವ-2024 ಏರ್ಪಡಿಸಲಾಗಿದೆ.

ಯುವಜನೋತ್ಸವದಲ್ಲಿ ರಾಜ್ಯದ 100ಕ್ಕೂ ಹೆಚ್ಚು ಕಾಲೇಜುಗಳ 500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. ಉತ್ಸವದಲ್ಲಿ ವಿದ್ಯಾರ್ಥಿಗಳಿಗಾಗಿ ವೈವಿಧ್ಯಮಯ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಪ್ರಬಂಧ ಸ್ಪರ್ಧೆ, ಚರ್ಚಾ ಸ್ಪರ್ಧೆ, ರಸಪ್ರಶ್ನೆ, ಪ್ರಹಸನ, ಚಿತ್ರಕಲಾ, ನೃತ್ಯ, ವಸ್ತು ಪ್ರದರ್ಶನ, ಸುಗಮ ಸಂಗೀತ, ಸಮೂಹ ಗಾಯನ ಸ್ಪರ್ಧೆಗಳು ನಡೆಯಲಿವೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ, ನೈತಿಕತೆ, ಜನಪರ ಕಾಳಜಿಯ ಜೊತೆಗೆ ಸೌಹಾರ್ದಯುತ ಸಂಬಂಧವನ್ನು ಬೆಳೆಸುವ ಉದ್ದೇಶದಿಂದ ನಡೆಯುವ ಕಾರ್ಯಕ್ರಮ ಇದಾಗಿದೆ.

ಜೂ.15ರಂದು ವಿಶ್ವವಿದ್ಯಾನಿಲಯದ ಎಂಬಿಎ ಸಭಾಂಗಣದಲ್ಲಿ ನಡೆಯುವ ಯುವಜನೋತ್ಸವವನ್ನು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಉದ್ಘಾಟಿಸಲಿದ್ದಾರೆ. ಕುಲಪತಿ ಪ್ರೊ. ಬಿ.ಡಿ.ಕುಂಬಾರ ಅಧ್ಯಕ್ಷತೆ ವಹಿಸಲಿದ್ದಾರೆ. ಚಲನಚಿತ್ರ ನಟ ನೀರ್ನಳ್ಳಿ ರಾಮಕೃಷ್ಣ ವಿಶೇಷ ಆಹ್ವಾನಿತರಾಗಿ ಆಗಮಿಸುವರು. ಎನ್‌ಎಸ್‌ಎಸ್ ಪ್ರಾಂತೀಯ ನಿರ್ದೇಶಕ ಡಿ.ಕಾರ್ತಿಕೇಯನ್, ರಾಜ್ಯ ಅಧಿಕಾರಿ ಡಾ.ಪ್ರತಾಪ್ ಲಿಂಗಯ್ಯ, ಪರೀಕ್ಷಾಂಗ ಕುಲಸಚಿವ ಪ್ರೊ.ಸಿ.ಕೆ.ರಮೇಶ, ಹಣಕಾಸು ಅಧಿಕಾರಿ ದ್ಯಾಮನಗೌಡ ಮುದ್ದನಗೌಡ ಅತಿಥಿಗಳಾಗಿ ಭಾಗವಹಿಸುವರು.

ಜೂ.19ರಂದು ನಡೆಯುವ ಸಮಾರೋಪ ಸಮಾರಂಭದಲ್ಲಿ ಡಾ.ಪ್ರತಾಪ್ ಲಿಂಗಯ್ಯ, ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯ ಹಾಗೂ ಕಾಲೇಜು ಅಧ್ಯಾಪಕರ ಸಂಘಗಳ ಒಕ್ಕೂಟದ ಮಾಜಿ ಅಧ್ಯಕ್ಷ ಪ್ರೊ. ಸಿ.ಎಚ್. ಮುರಿಗೇಂದ್ರಪ್ಪ ಅತಿಥಿಗಳಾಗಿ ಭಾಗವಹಿಸುವರು. ಪರೀಕ್ಷಾಂಗ ಕುಲಸಚಿವ ಪ್ರೊ. ಸಿ.ಕೆ. ರಮೇಶ, ಹಣಕಾಸು ಅಧಿಕಾರಿ ದ್ಯಾಮನಗೌಡ ಮುದ್ದನಗೌಡರ ಉಪಸ್ಥಿತರಿರುವರು ಎಂದು ಕುಲಸಚಿವ ಪ್ರೊ. ಯು.ಎಸ್. ಮಹಾಬಲೇಶ್ವರ ಮತ್ತು ಕಾರ್ಯಕ್ರಮ ಸಂಯೋಜನಾಧಿಕಾರಿ ಡಾ.ಅಶೋಕಕುಮಾರ ಪಾಳೇದ ತಿಳಿಸಿದ್ದಾರೆ.