ಸಾರಾಂಶ
ಮೂಡುಬಿದಿರೆ ಶ್ರೀ ಮಹಾವೀರ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ ದ.ಕ.ಜಿಂ.ಪ.ಹಿ. ಪ್ರಾಥಮಿಕ ಶಾಲೆ ಪಡ್ಡಂದಡ್ಕದಲ್ಲಿ ನಡೆಯಿತು. ಕಾಲೇಜಿನ ಪ್ರಾಂಶುಪಾಲ ಡಾ. ರಾಧಾಕೃಷ್ಣ ಅಧ್ಯಕ್ಷತೆ ವಹಿಸಿದ್ದರು.
ಕನ್ನಡಪ್ರಭ ವಾರ್ತೆ ಮೂಡುಬಿದಿರೆ
ಇಲ್ಲಿನ ಶ್ರೀ ಮಹಾವೀರ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ ದ.ಕ.ಜಿಂ.ಪ.ಹಿ. ಪ್ರಾಥಮಿಕ ಶಾಲೆ ಪಡ್ಡಂದಡ್ಕದಲ್ಲಿ ನಡೆಯಿತು.ಶ್ರೀ ಮಹಾವೀರ ಪದವಿ ಕಾಲೇಜಿನ ಪ್ರಾಂಶುಪಾಲ ಡಾ. ರಾಧಾಕೃಷ್ಣ ಅಧ್ಯಕ್ಷ ವಹಿಸಿದ್ದರು.
ಹೊಸಂಗಡಿ ಗ್ರಾಮ ಪಂಚಾಯಿತಿ ಸದಸ್ಯ ಹಾಗೂ ಸಮಾಜ ಸೇವಕ ಹರಿಪ್ರಸಾದ್ ಸಮಾರೋಪ ಭಾಷಣ ಮಾಡಿ, ವಿದ್ಯಾರ್ಥಿಗಳು ಈ ಊರಿನ ರಸ್ತೆ ಸ್ವಚ್ಛತಾ ಅಬಿಯಾನ, ಕಿಚನ್ ಗಾರ್ಡನ್, ಅಂಗನವಾಡಿಯ ಸ್ವಚ್ಛತೆ ಮುಂತಾದ ಚಟುವಟಿಕೆಗಳನ್ನು ಮಾಡಿ ಉತ್ತಮ ಸೇವೆಯನ್ನು ಈ ಗ್ರಾಮಕ್ಕೆ ನೀಡಿರುತ್ತಾರೆ. ವಿದ್ಯಾರ್ಥಿಗಳು ಯಾವುದೇ ಭೇದ ಭಾವವಿಲ್ಲದೆ ಸಮಾಜ ಸೇವೆಯಲ್ಲಿ ಇನ್ನು ಮುಂದೆಯೂ ಪಾಲ್ಗೊಳ್ಳಿ ಎಂದರು. ಹರಿಪ್ರಸಾದ್ ಇವರು ೭ ದಿನಗಳ ಕಾಲ ಶಿಬಿರಕ್ಕೆ ನೀಡಿದ ಸಹಕಾರಕ್ಕಾಗಿ ಕಾಲೇಜು ಹಾಗೂ ಎನ್.ಎಸ್.ಎಸ್ ಘಟಕದ ಪರವಾಗಿ ಸನ್ಮಾನಿಸಲಾಯಿತು.ಪೆರಿಂಜೆ ಹಾಲು ಉತ್ಪಾದಕರ ಸಂಘ ಅಧ್ಯಕ್ಷ ಸುಧಾಕರ ಪಿ. ಪೂಜಾರಿ, ಕಾಲೇಜಿನ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಅಬ್ದುಲ್ ರೆಹಮಾನ್, ಶಾಲೆಯ ಮುಖ್ಯೋಪಾಧ್ಯಾಯಿನಿ ಕಮಲಮ್ಮ , ಪಂಚಾಯಿತಿ ಸದಸ್ಯ ಪ್ರಕಾಶ್, ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೊ.ಹರೀಶ್, ಎನ್.ಎಸ್.ಎಸ್ ಕಾರ್ಯದರ್ಶಿಗಳಾದ ಪೂಜಾ ಹಾಗೂ ಶಿವಾನಂದ್, ಎನ್.ಎಸ್.ಎಸ್ ಕಾರ್ಯಕ್ರಮಾಧಿಕಾರಿ ರಶ್ಮಿತಾ ಇದ್ದರು. ಉಪನ್ಯಾಸಕಿ ಪೂರ್ಣಿಮಾ ಸ್ವಾಗತಿಸಿದರು. ರಶ್ಮಿತಾ ವಂದಿಸಿದರು. ಸುಜಾತಾ ನಿರೂಪಿಸಿದರು.