ಬ್ರಹ್ಮಾವರ ಕೃಷಿ ಸಂಶೋಧನಾ ಕೇಂದ್ರದಲ್ಲಿ ನಡೆದಿದೆ ಎನ್ನಲಾದ ಅಕ್ರಮ ಮರ ಕಡಿತ ಹಾಗೂ ಮರ ಸಾಗಣೆ ಯತ್ನದ ಗಂಭೀರ ಪ್ರಕರಣವನ್ನು ಸಂಪೂರ್ಣ ಮತ್ತು ನಿಷ್ಪಕ್ಷಪಾತ ತನಿಖೆಗೆ ಒಳಪಡಿಸಬೇಕು ಎಂದು ಉಡುಪಿ ಜಿಲ್ಲಾ ಎನ್‌ಎಸ್‌ಯುಐ ಸರ್ಕಾರವನ್ನು ಆಗ್ರಹಿಸಿದೆ.

ಬ್ರಹ್ಮಾವರ: ಇಲ್ಲಿನ ಕೃಷಿ ಸಂಶೋಧನಾ ಕೇಂದ್ರದಲ್ಲಿ ನಡೆದಿದೆ ಎನ್ನಲಾದ ಅಕ್ರಮ ಮರ ಕಡಿತ ಹಾಗೂ ಮರ ಸಾಗಣೆ ಯತ್ನದ ಗಂಭೀರ ಪ್ರಕರಣವನ್ನು ಸಂಪೂರ್ಣ ಮತ್ತು ನಿಷ್ಪಕ್ಷಪಾತ ತನಿಖೆಗೆ ಒಳಪಡಿಸಬೇಕು ಎಂದು ಉಡುಪಿ ಜಿಲ್ಲಾ ಎನ್‌ಎಸ್‌ಯುಐ ಸರ್ಕಾರವನ್ನು ಆಗ್ರಹಿಸಿ ಕೇಂದ್ರದ ಆವರಣದಲ್ಲಿ ಮೌನ ಪ್ರತಿಭಟನೆ ನಡೆಸಿತು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ಅಧಿಕಾರ ದುರುಪಯೋಗಪಡಿಸಿದ ಶಂಕೆ ಇದ್ದು, ಸರ್ಕಾರಿ ಆಸ್ತಿ ಹಾಗೂ ಸಾರ್ವಜನಿಕ ಹಿತಾಸಕ್ತಿಗೆ ಧಕ್ಕೆಯಾಗುವ ರೀತಿಯಲ್ಲಿ ಈ ದುಷ್ಕೃತ್ಯ ನಡೆದಿದೆ, ಇದಕ್ಕೆ ಕಾರಣರಾದವರ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ. ಪ್ರತಿಭಟನೆಯಲ್ಲಿ ಎನ್‌ಎಸ್‌ಯುಐ ರಾಜ್ಯ ಕಾರ್ಯದರ್ಶಿ ಸೈಯ್ಯದ್ ಫುರ್ಕಾನ್ ಯಾಸಿನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಮಂತ್ ಶೆಟ್ಟಿ, ಕುಂದಾಪುರ ತಾಲೂಕು ಅಧ್ಯಕ್ಷ ಶೋಜನ್ ಶೆಟ್ಟಿ, ಪ್ರಮುಖರಾದ ಸೈಯ್ಯದ್ ಅದ್ನಾನ್, ಮೊಹಮ್ಮದ್ ಅವಾಫ್, ಸುಮುಖ್ ಶೇರಿಗಾರ್, ಆದರ್ಶ್ ಶೇರಿಗಾರ್, ಮೊಹಮ್ಮದ್ ಸಮ್ಮಿ ಉಪಸ್ಥಿತರಿದ್ದರು.