ಎನ್‌ಎಸ್‌ಯುಐನಿಂದ ‘ವಿದ್ಯಾರ್ಥಿ ನ್ಯಾಯ ಯಾತ್ರೆ’

| Published : Apr 04 2025, 12:48 AM IST

ಎನ್‌ಎಸ್‌ಯುಐನಿಂದ ‘ವಿದ್ಯಾರ್ಥಿ ನ್ಯಾಯ ಯಾತ್ರೆ’
Share this Article
  • FB
  • TW
  • Linkdin
  • Email

ಸಾರಾಂಶ

ರಾಜ್ಯದ ವಿದ್ಯಾರ್ಥಿಗಳ ಹಕ್ಕುಗಳನ್ನು ರಕ್ಷಿಸಲು ಹಾಗೂ ಅವರ ಸಮಸ್ಯೆಗಳನ್ನು ಆಲಿಸಿ ಪರಿಹಾರ ಒದಗಿಸಲು ಎನ್‌ಎಸ್‌ಯುಐ ತಂಡವು ‘ವಿದ್ಯಾರ್ಥಿ ನ್ಯಾಯ ಯಾತ್ರೆ’ ಎಂಬ ಮಹತ್ವಾಕಾಂಕ್ಷಿ ಪ್ರಯತ್ನವನ್ನು ಆರಂಭಿಸಿದೆ.

ಕನ್ನಡಪ್ರಭ ವಾರ್ತೆ ಉಡುಪಿ

ರಾಜ್ಯದ ವಿದ್ಯಾರ್ಥಿಗಳ ಹಕ್ಕುಗಳನ್ನು ರಕ್ಷಿಸಲು ಹಾಗೂ ಅವರ ಸಮಸ್ಯೆಗಳನ್ನು ಆಲಿಸಿ ಪರಿಹಾರ ಒದಗಿಸಲು ಎನ್‌ಎಸ್‌ಯುಐ ತಂಡವು ‘ವಿದ್ಯಾರ್ಥಿ ನ್ಯಾಯ ಯಾತ್ರೆ’ ಎಂಬ ಮಹತ್ವಾಕಾಂಕ್ಷಿ ಪ್ರಯತ್ನವನ್ನು ಆರಂಭಿಸಿದೆ.ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ರಾಜ್ಯ ಪ್ರಧಾನ ಕಾರ್ಯದರ್ಶಿ ಅನ್ವಿತ್ ಕಟೀಲ್, ಈ ಪ್ರಯತ್ನದ ಭಾಗವಾಗಿ ಮಂಗಳೂರು ವಿಶ್ವವಿದ್ಯಾಲಯದ ಕುಲಪತಿ, ಕುಲಸಚಿವರು ಹಾಗೂ ಉಡುಪಿ ಜಿಲ್ಲಾಧಿಕಾರಿ ಅವರನ್ನು ಭೇಟಿ ಮಾಡಿ ವಿದ್ಯಾರ್ಥಿಗಳು ಎದುರಿಸುತ್ತಿರುವ ಪ್ರಮುಖ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿದ್ದೇವೆ ಎಂದರು.ಶೈಕ್ಷಣಿಕ ವ್ಯವಸ್ಥೆಯಲ್ಲಿ ಬದಲಾವಣೆ, ಸಮರ್ಪಕ ವಿದ್ಯಾರ್ಥಿವೇತನ ವಿತರಣಾ ವ್ಯವಸ್ಥೆ, ಹಾಸ್ಟೆಲ್ ವ್ಯವಸ್ಥೆಯ ಸುಧಾರಣೆ, ವೃತ್ತಿ ಮಾರ್ಗದರ್ಶನ ಮತ್ತು ಉದ್ಯೋಗಾವಕಾಶಗಳ ಹೆಚ್ಚಳ, ಡ್ರಗ್ಸ್ ಮತ್ತು ಬ್ಯಾಗಿಂಗ್ ಪಿಡುಗು ನಿರ್ಮೂಲನೆ, ವಿದ್ಯಾರ್ಥಿನಿಯರ ಸುರಕ್ಷತೆ, ಸರ್ಕಾರಿ ವಿದ್ಯಾಸಂಸ್ಥೆಗಳ ಬಲವರ್ಧನೆ, ಕರ್ನಾಟಕ ವಿದ್ಯಾರ್ಥಿ ಹಿತ ಮಸೂದೆ ಜಾರಿಗೆ ತರುವಿಕೆ, ಪೇಪರ್ ಲೀಕ್ ತಡೆಗಟ್ಟುವಿಕೆ ಈ ಎಲ್ಲ ವಿಷಯಗಳನ್ನು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು, ತ್ವರಿತ ಕ್ರಮ ತೆಗೆದುಕೊಳ್ಳುವಂತೆ ಮನವಿ ಮಾಡಲಾಗಿದೆ ಎಂದು ಹೇಳಿದರು.ಸುದ್ದಿಗೋಷ್ಠಿಯಲ್ಲಿ ಎನ್ಎಸ್‌ಯುಐ ರಾಜ್ಯ ಪ್ರಧಾನ ಕಾರ್ಯದರ್ಶಿ ಸೈಯ್ಯದ್ ಫಾರೂಕನ್, ಅನೀಶ್ ಪೂಜಾರಿ, ಉಡುಪಿ ಜಿಲ್ಲಾಧ್ಯಕ್ಷ ಸೌರಭ್ ಬಲ್ಲಾಳ್, ಉಪಾಧ್ಯಕ್ಷರಾದ ಶೇರಿತ್ ಕುಂದರ್, ಸುಜೆನ್ ಶೆಟ್ಟಿ ಉಪಸ್ಥಿತರಿದ್ದರು.