ಸಾರಾಂಶ
ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು
ರಾಜ್ಯದಲ್ಲಿ ಅಪರಾಧ ಮತ್ತು ಅಪರಾಧಿಗಳ ಸಂಖ್ಯೆ ಜಾಸ್ತಿ ಆಗ್ತಾ ಇದೆ. ಲವ್ ಜಿಹಾದ್ ಕೇಸ್‌ಗಳು ಹೆಚ್ಚಾಗಿವೆ. ಸಿದ್ದರಾಮಯ್ಯ ಹಾಗೂ ಸರ್ಕಾರದ ನಡವಳಿಕೆ ಅಪರಾಧಗಳಿಗೆ ಭಯ ಇಲ್ಲದೆ ಓಡಾಡುವ ಸ್ಥಿತಿ ರಾಜ್ಯದಲ್ಲಿ ನಿರ್ಮಾಣ ವಾಗಿದೆ ಎಂದು ಕೇಂದ್ರದ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಆರೋಪಿಸಿದರು.ಸೋಮವಾರ ಜಿಲ್ಲಾ ಕಾರಾಗೃಹಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಪರಾಧಿಗಳಿಗೆ ನಿರಂತರವಾಗಿ ಕುಮ್ಮಕ್ಕು ನೀಡುತ್ತಿರುವ ಮತ್ತು ಅಲ್ಪಸಂಖ್ಯಾತರ ಓಲೈಕೆ ರಾಜಕಾರಣದಿಂದ ಅಲ್ಪಸಂಖ್ಯಾತರಿಗೆ ಕಾನೂನಿನ ಭಯ ಇಲ್ಲ. ಈ ಕಾರಣಕ್ಕಾಗಿ ರಾಜ್ಯದಲ್ಲಿ ಚಿಕ್ಕ ಚಿಕ್ಕ ಮಕ್ಕಳಿಗೆ ಪುಸಲಾಯಿಸಿ, ಕೆಲವೆಡೆ ಬಲವಂತದಿಂದ ಲವ್ ಜಿಹಾದ್‌ಗೆ ಬೀಳಿಸುವ ಕೆಲಸ ಮಾಡುತ್ತಿದ್ದಾರೆ ಎಂದರು.
ಅಪ್ರಾಪ್ತ ಹುಡುಗಿಯನ್ನು ಪುಸಲಾಯಿಸಿ, ಆಕೆಯನ್ನು ಬೇರೆ ಬೇರೆ ಹೋಟೆಲ್‌ಗಳಲ್ಲಿ ಇಟ್ಟು, ದೈಹಿಕವಾಗಿ ಶೋಷಣೆ ಮಾಡಿ, ಹೀಗೆ ಹತ್ತಾರು ಹುಡುಗಿಯರ ಬೇರೆ ಬೇರೆ ರೀತಿಯ ವಿಡಿಯೋದಲ್ಲಿ ಇದ್ದ ಕಾರಣಕ್ಕಾಗಿ ನಮ್ಮ ಹುಡುಗರು ಆ ಹುಡುಗನನ್ನು ಎಸ್ಪಿಗೆ ಒಪ್ಪಿಸಲು ಬರುತ್ತಿದ್ದರು. ಅವರನ್ನು ಜೈಲಿಗೆ ಹಾಕಲಾಗಿದೆ. ಅವರಿಗೆ ನ್ಯಾಯ ಸಿಗಬೇಕು ಎಂದು ಹೇಳಿದರು.ಹತ್ತಾರು ಹಿಂದೂ ಹುಡುಗಿಯರ ಪೋಟೋ ಹಿಡಿದುಕೊಂಡು ಬ್ಲಾಕ್ ಮೇಲ್ ಮಾಡುತ್ತಿರುವ ಯುವಕನನ್ನು ಸರ್ಕಾರ ರಕ್ಷಣೆ ಮಾಡಲು ಹೊರಟಿದೆ. ಈ ರೀತಿಯ ಪ್ರಕರಣಗಳು ರಾಜ್ಯದಲ್ಲಿ ಹೆಚ್ಚಾಗುತ್ತಿವೆ. ರಾಜ್ಯದಲ್ಲಿ ಸರ್ಕಾರ ಎಚ್ಚೆತ್ತುಕೊಳ್ಳಬೇಕು ನಮ್ಮ ಯುವಕರು, ಬೀದಿಗೆ ಇಳಿಯುವ ಮೊದಲು ರಾಜ್ಯ ಸರ್ಕಾರ ಇದಕ್ಕೆ ಕೊನೆ ಹಾಡಬೇಕು, ಅಪ್ರಾಪ್ತ ಬಾಲಕಿಯನ್ನು ಹೀಗೆ ಮಾಡಿದರೆ ಸಮಾಜದಲ್ಲಿ ಸ್ವಾಸ್ಥ್ಯ ಉಳಿಯಲು ಸಾಧ್ಯವಿಲ್ಲ. ಸರ್ಕಾರ ಅಲ್ಪಸಂಖ್ಯಾತರ ವೋಟ್ ಬ್ಯಾಂಕ್ ಕಡೆ ನೋಡಿದರೆ ಸಮಾಜಕ್ಕೆ ರಕ್ಷಣೆ ಕೊಡುವವರು ಯಾರು ಎಂಬ ಪ್ರಶ್ನೆ ಉದ್ಭವವಾಗಿದೆ ಎಂದರು.