ಆರೋಗ್ಯ ಸೇವೆಯಲ್ಲಿ ದಾದಿಯರ ಪಾತ್ರ ಮಹತ್ವದ್ದು

| Published : May 13 2025, 01:21 AM IST

ಸಾರಾಂಶ

ಆಸ್ಪತ್ರೆಗೆ ಚಿಕಿತ್ಸೆಗಾಗಿ ಬರುವಂತಹಗಳಿಗೆ ರೋಗಿಗಳಿಗೆ ನಗುಮುಖದ ಸೇವೆ ನೀಡುವ ಮೂಲಕ ಆರೋಗ್ಯ ಸೇವೆ ಉತ್ತಮವಾಗಿ ನೀಡಿ ಆರೋಗ್ಯವಂತ ಸಮಾಜ ನಿರ್ಮಾಣ ಮಾಡುವುದರಲ್ಲಿ ದಾದಿಯರ ಪಾತ್ರ ಮಹತ್ವದ್ದು ಎಂದು ದ್ವಾರನ ಕುಂಟೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗೌರಮ್ಮ ನಾಗರಾಜ್ ಹೇಳಿದರು.

ಕನ್ನಡಪ್ರಭ ವಾರ್ತೆ ಶಿರಾ ಆಸ್ಪತ್ರೆಗೆ ಚಿಕಿತ್ಸೆಗಾಗಿ ಬರುವಂತಹಗಳಿಗೆ ರೋಗಿಗಳಿಗೆ ನಗುಮುಖದ ಸೇವೆ ನೀಡುವ ಮೂಲಕ ಆರೋಗ್ಯ ಸೇವೆ ಉತ್ತಮವಾಗಿ ನೀಡಿ ಆರೋಗ್ಯವಂತ ಸಮಾಜ ನಿರ್ಮಾಣ ಮಾಡುವುದರಲ್ಲಿ ದಾದಿಯರ ಪಾತ್ರ ಮಹತ್ವದ್ದು ಎಂದು ದ್ವಾರನ ಕುಂಟೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗೌರಮ್ಮ ನಾಗರಾಜ್ ಹೇಳಿದರು. ತಾಲೂಕಿನ ಹುಲಿಕುಂಟೆ ಹೋಬಳಿಯ ದ್ವಾರನಕುಂಟೆ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ವಿಶ್ವದಾದಿಯರ ದಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಸ್ವಚ್ಛತೆಗೆ ಹೆಚ್ಚು ಆದ್ಯತೆ ನೀಡಿ, ಆರೋಗ್ಯ ಇಲಾಖೆ ನೀಡುವ ಸಲಹೆಯನ್ನು ಎಲ್ಲರೂ ಪಾಲಿಸಿದಾಗ ಗ್ರಾಮಗಳಲ್ಲಿ ಯಾವುದೇ ರೋಗ ರುಜಿನಗಳು ಹರಡಲು ಸಾಧ್ಯವಾಗುವುದಿಲ್ಲ ಎಂದರು. ವೈದ್ಯಾಧಿಕಾರಿ ಡಾ. ತಿಮ್ಮರಾಜು ಮಾತನಾಡಿ ವೈದ್ಯ, ಆರೋಗ್ಯ ಕಾರ್ಯಕರ್ತರು, ಆಶಾ ಕಾರ್ಯಕರ್ತರು, ಸಾರ್ವಜನಿಕರ ಬಾಂಧವ್ಯ ಉತ್ತಮವಾಗಿದ್ದಾಗ ಆರೋಗ್ಯ ಕ್ಷೇತ್ರ ಸುಸ್ಥಿರವಾಗಿರಲಿದೆ. ದಾದಿಯರ ಸೇವೆ ಆರೋಗ್ಯ ಇಲಾಖೆ ಎಂದು ಮರೆಯಲು ಸಾಧ್ಯವಿಲ್ಲ ಎಂದರು. ಇದೇ ಸಂದರ್ಭದಲ್ಲಿ ಉತ್ತಮ ಸೇವೆ ಸಲ್ಲಿಸಿ ಜನ ಮೆಚ್ಚುಗೆ ಪಡೆದ ತಾಯಿ ಮಕ್ಕಳ ಆಸ್ಪತ್ರೆಯ ಶುಶ್ರೂಷಕಿ ಬಿ.ಸಿ.ಮಮತಾ, ಶಿರಾ ಸಾರ್ವಜನಿಕ ಆಸ್ಪತ್ರೆಯ ಶುಶ್ರೂಷಕಿ ಸೀಮಾ ಫಿರ್ದೋಸ್, ದೊಡ್ಡ ಹುಲಿಕುಂಟೆ ಪ್ರಾಥಮಿಕ ಆರೋಗ್ಯ ಕೇಂದ್ರದ ಶುಶ್ರೂಷಕಿ ಸೌಮ್ಯ ರವರನ್ನು ಸನ್ಮಾನಿಸಿ ಗೌರವಿಸಲಾಯಿತು. ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಲಕ್ಷ್ಮಿಕಾಂತ್, ಆರೋಗ್ಯ ಕೇಂದ್ರದ ನಿರಂಜನ್, ರಘು, ಫಾತಿಮಾ, ಕವಿತಾ, ಸವಿತಾ, ರೋಜಾ, ಲಲಿತಮ್ಮ ನರಸಿಂಹಮೂರ್ತಿ ಸೇರಿದಂತೆ ಆಶಾ ಕಾರ್ಯಕರ್ತರು ಸಾರ್ವಜನಿಕರು ಹಾಜರಿದ್ದರು.