ಗಿಡ ಮರಗಳ ಪೋಷಣೆ ನಮ್ಮೆಲ್ಲರ ಜವಾಬ್ದಾರಿ

| Published : Jun 07 2024, 12:32 AM IST

ಗಿಡ ಮರಗಳ ಪೋಷಣೆ ನಮ್ಮೆಲ್ಲರ ಜವಾಬ್ದಾರಿ
Share this Article
  • FB
  • TW
  • Linkdin
  • Email

ಸಾರಾಂಶ

ಕನ್ನಡಪ್ರಭ ವಾರ್ತೆ ಬಾಗಲಕೋಟೆ ವೃಕ್ಷಗಳನ್ನು ನಾವು ರಕ್ಷಿಸಿದರೆ, ಅವು ನಮಗೆ ಉತ್ತಮ ಪರಿಸರ ನೀಡುವದರ ಮೂಲಕ ನಮ್ಮನ್ನು ರಕ್ಷಿಸುತ್ತವೆ ಎಂದು ಕಾಲೇಜು ಉಪವಿಭಾಗದ ಅಧ್ಯಕ್ಷ ಡಾ.ಪಿ.ಆರ್‌.ಜೋಶಿ ಹೇಳಿದರು.

ಕನ್ನಡಪ್ರಭ ವಾರ್ತೆ ಬಾಗಲಕೋಟೆ

ವೃಕ್ಷಗಳನ್ನು ನಾವು ರಕ್ಷಿಸಿದರೆ, ಅವು ನಮಗೆ ಉತ್ತಮ ಪರಿಸರ ನೀಡುವದರ ಮೂಲಕ ನಮ್ಮನ್ನು ರಕ್ಷಿಸುತ್ತವೆ ಎಂದು ಕಾಲೇಜು ಉಪವಿಭಾಗದ ಅಧ್ಯಕ್ಷ ಡಾ.ಪಿ.ಆರ್‌.ಜೋಶಿ ಹೇಳಿದರು.

ನಗರದ ವಿದ್ಯಾ ಪ್ರಸಾರಕ ಮಂಡಳದ ಎಸ್.ಆರ್.ನರಸಾಪೂರ ಕಲಾ ಹಾಗೂ ಎಂ.ಬಿ.ಶಿರೂರ ವಾಣಿಜ್ಯ ಮಹಾವಿದ್ಯಾಲಯದ ಎನ್.ಎಸ್.ಎಸ್.ಘಟಕ 1 ಮತ್ತು 2 ಬುಧವಾರ ಆಯೋಜಿಸಿದ್ದ ವಿಶ್ವ ಪರಿಸರ ದಿನಾಚರಣೆಯಲ್ಲಿ ಅವರು ಮಾತನಾಡಿದರು.

ಗಿಡ ಮರಗಳ ಪೋಷಣೆ ಹಾಗೂ ರಕ್ಷಣೆ ಮಾಡುವುದು ಎಲ್ಲರ ಜವಾಬ್ದಾರಿ. ವಿದ್ಯಾರ್ಥಿಗಳು ಉದ್ಯಾನದಲ್ಲಿ ನೆಟ್ಟ ಸಸಿಗಳ ಮೇಲ್ವಿಚಾರಣೆಯನ್ನು ಮಾಡಿ, ಅವು ಉತ್ತಮ ರೀತಿಯಲ್ಲಿ ಬೆಳೆಯುವಂತೆ ನೋಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಪ್ರಾಚಾರ್ಯ ಶ್ರೀನಿವಾಸ ನರಗುಂದ ಮಾತನಾಡಿ, ಜಾಗತಿಕ ತಾಪಮಾನ, ಹವಾಮಾನ ಬದಲಾವಣೆ, ಅರಣ್ಯನಾಶ ಮುಂತಾದ ವಿಷಯಗಳಿಗೆ ಸಂಬಂಧಿಸಿದಂತೆ ಜನರಲ್ಲಿ ಜಾಗೃತಿ ಮೂಡಿಸುವುದರ ಸಲುವಾಗಿ ವಿಶ್ವ ಪರಿಸರ ದಿನ ಆಚರಿಸಲಾಗುತ್ತಿದೆ. ಯುವಕರು ಇಂತಹ ದಿನಾಚರಣೆಗಳ ಆಶಯವನ್ನು ಈಡೇರಿಸುವ ಪ್ರಯತ್ನ ಮಾಡಬೇಕು ಎಂದು ಹೇಳಿದರು.

ಮನುಷ್ಯನಿಗೆ ಬೇಕಾಗುವ ಎಲ್ಲ ಸಂಪನ್ಮೂಲಗಳನ್ನು ಉದಾರವಾಗಿ ನೀಡುವ ಭೂಮಿತಾಯಿಯನ್ನು ರಕ್ಷಿಸುವ ಜವಾಬ್ದಾರಿ ನಮ್ಮದು. ವಿದ್ಯಾರ್ಥಿಗಳು ಪರಿಸರದ ಬಗ್ಗೆ ಕಾಳಜಿ ವಹಿಸಬೇಕು. ಪರಿಸರ ಉಳಿಸಿ-ಬೆಳೆಸುವಲ್ಲಿ ಮಹತ್ವದ ಪಾತ್ರವನ್ನು ವಹಿಸಬೇಕು. ಉಳಿದವರಿಗೂ ಈ ವಿಷಯದ ಬಗ್ಗೆ ಮನವರಿಕೆ ಮಾಡಿಕೊಡಬೇಕು ಎಂದು ತಿಳಿಸಿದರು.

ಎನ್ಎಸ್ಎಸ್‌ ಅಧಿಕಾರಿ ಎನ್‌.ಎಚ್.ಹಸಬಿ, ಐ.ಕ್ಯೂ.ಎ.ಸಿ ಸಂಯೋಜಕ ಎಚ್.ಎಸ್.ಗಿಡಗಂಟಿ, ಶಿಕ್ಷಕರು,ವಿದ್ಯಾರ್ಥಿಗಳು ಇದ್ದರು.