ಶಿಶು ಅಭಿವೃದ್ಧಿ ಯೋಜನಾಧಿಕಾರಿ ದೀಪ ಹೆಬ್ಬಳ್ಳಿ ಪ್ರಾಸ್ತಾವಿಕವಾಗಿ ಮಾತನಾಡುತ್ತಾ ಒಂಬತ್ತನೇ ರಾಷ್ಟ್ರೀಯ ಪೋಷಣ್ ಮಾಸಾಚರಣೆ ಯನ್ನು ಪ್ರತಿವರ್ಷ ಪ್ರತಿಯೊಂದು ಅಂಗನವಾಡಿ ಕೇಂದ್ರಗಳಲ್ಲಿ ಸೆಪ್ಟೆಂಬರ್-ಅಕ್ಟೋಬರ್ ೮ರವರೆಗೆ ದೇಶದಾದ್ಯಂತ ಆಚರಿಸಲಾಗುತ್ತಿದ್ದು ಇದರ ಮಹತ್ವ ಬಗ್ಗೆ ಅರಿವು ಮೂಡಿಸಲಾಗುತ್ತದೆ ಎಂದು ಮಾಹಿತಿ ನೀಡಿದರು.
ಕನ್ನಡಪ್ರಭವಾರ್ತೆ ತಿಪಟೂರು
ಪೋಷಣ್ ಅಭಿಯಾನ "ಸದೃಢ ಮಗು ದೇಶದ ಸಂಪತ್ತು " ಎಂಬ ಮಹತ್ವದ ಆಶಯದೊಂದಿಗೆ ಮಕ್ಕಳಲ್ಲಿ ಪೌಷ್ಟಿಕತೆ, ಆರೋಗ್ಯ, ಸ್ವಚ್ಛತೆ ಹಾಗೂ ಉತ್ತಮ ಜೀವನ ಶೈಲಿ ಕುರಿತು ಅರಿವು ಮೂಡಿಸುವ ಉದ್ದೇಶ ಹೊಂದಿದೆ ಎಂದು ೫ನೇ ಅಧಿಕ ಜಿಲ್ಲಾ ಸತ್ರ ನ್ಯಾಯಾಧೀಶ ಹಾಗೂ ತಾಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷರಾದ ನ್ಯಾ. ಹೇಮಂತ್ ಕುಮಾರ್ ಸಿ.ಆರ್. ಹೇಳಿದರು.ನಗರ ಟೌನ್ ವ್ಯಾಪ್ತಿ ಬಿಆರ್‌ಸಿ ಕೇಂದ್ರದಲ್ಲಿ ಆಯೋಜಿಸಿದ್ದ ೯ನೇ ಪೋಷಣ್ ಮಾಸಾಚರಣೆ ಕಾರ್ಯಕ್ರಮ "ನಮ್ಮ ಅಂಗನವಾಡಿ ನಮ್ಮ ಜವಾಬ್ದಾರಿ " ಧ್ಯೇಯ ವಾಕ್ಯದೊಂದಿಗೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಶಿಶು ಅಭಿವೃದ್ಧಿ ಯೋಜನೆ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ತಾಲೂಕು ಕಾನೂನು ಸೇವಾ ಸಮಿತಿ ಸಹಯೋಗದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿ, ಪೋಷಣ್ ಅಭಿಯಾನ ಕಾರ್ಯಕ್ರಮವು ದೇಶದ ಪ್ರಗತಿಗೆ ನಾಂದಿಯನ್ನು ಪ್ರತಿಬಿಂಬಿಸುತ್ತದೆ ಎಂದು ಮಾಹಿತಿ ನೀಡಿದರು.
ಶಿಶು ಅಭಿವೃದ್ಧಿ ಯೋಜನಾಧಿಕಾರಿ ದೀಪ ಹೆಬ್ಬಳ್ಳಿ ಪ್ರಾಸ್ತಾವಿಕವಾಗಿ ಮಾತನಾಡುತ್ತಾ ಒಂಬತ್ತನೇ ರಾಷ್ಟ್ರೀಯ ಪೋಷಣ್ ಮಾಸಾಚರಣೆ ಯನ್ನು ಪ್ರತಿವರ್ಷ ಪ್ರತಿಯೊಂದು ಅಂಗನವಾಡಿ ಕೇಂದ್ರಗಳಲ್ಲಿ ಸೆಪ್ಟೆಂಬರ್-ಅಕ್ಟೋಬರ್ ೮ರವರೆಗೆ ದೇಶದಾದ್ಯಂತ ಆಚರಿಸಲಾಗುತ್ತಿದ್ದು ಇದರ ಮಹತ್ವ ಬಗ್ಗೆ ಅರಿವು ಮೂಡಿಸಲಾಗುತ್ತದೆ ಎಂದು ಮಾಹಿತಿ ನೀಡಿದರು.ಎಲ್.ಎ.ಡಿ.ಸಿ .ವಕೀಲರಾದ ಎಂ.ಸಿ. ನಟರಾಜು ಮಾತನಾಡಿ, ಸಾವಿರ ದಿನಗಳ ಗರ್ಭಿಣಿ ಆರೈಕೆ ಕುರಿತು ಶಿಶು ಅಭಿವೃದ್ಧಿ ಯೋಜನೆಯ ಅಂಗನವಾಡಿ ಕಾರ್ಯಕರ್ತೆಯರ ಮೂಲಕ ಪೌಷ್ಟಿಕ ಆಹಾರ ''''''''''''''''ಎಲ್ಲರಿಗೂ ಎಲ್ಲಡೆಯೂ'''''''''''''''' ಸಿಗುವಂತಹ ಪೋಷಕಾಂಶಗಳ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸುವ ಕಾರ್ಯಕ್ರಮವನ್ನು ಹಾಗೂ ಐಸಿಡಿಎಸ್ ಸೇವೆಗಳನ್ನು ಸಮರ್ಪಕವಾಗಿ ಒದಗಿಸುತ್ತಿರುವ ಕುರಿತು ಇಲಾಖೆಯನ್ನು ಶ್ಲಾಘಿಸಿದರು.
ಬದುಕು ಸಂಸ್ಥೆಯ ನಂದಕುಮಾರ್ ಮಾತನಾಡುತ್ತಾ ಇತ್ತೀಚಿನ ದಿನಗಳಲ್ಲಿ ಬಾಲ್ಯ ವಿವಾಹ, ಬಾಲ ಗರ್ಭಿಣಿಯರ ಸಂಖ್ಯೆ ಹೆಚ್ಚಾಗುತ್ತಿದ್ದು ಹದಿಹರೆಯದ ಹೆಣ್ಣು ಮಕ್ಕಳಲ್ಲಿ ಇದರ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸುವಲ್ಲಿ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸುವುದು ತುಂಬಾ ಮುಖ್ಯ ಎಂದು ಮಾಹಿತಿ ನೀಡಿದರು.ಸಂರಕ್ಷಣಾಧಿಕಾರಿ ಕುಸುಮ, ನಗರವೃತ್ತದ ಹಿರಿಯ ಮೇಲ್ವಿಚಾರಕರು ಹಾಗೂ ಪ್ರಭಾರ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಗೌರವ ಎಣ್ಣಿ, ಕಿರಿಯ ಮೇಲ್ವಿಚಾರಕಿ ಡಾ. ಸುಮಂಗಲ ಬದಾಮಿ. ಜಿ.ಎಂ.ಎಚ್.ಪಿ.ಎಸ್. ಶಾಲೆ ಶಿಕ್ಷಕರು ಹಾಗೂ ವಿದ್ಯಾರ್ಥಿನಿಯರು ಹಾಜರಿದ್ದರು.
ಆರ್ಥಿಕ ಸಾಕ್ಷರತಾ ಕೇಂದ್ರದ ರೇಖಾ, ತಾಲೂಕು ಸೇವಾ ಕಾನೂನು ಸಮಿತಿ ಆಡಳಿತ ಸಹಾಯಕ ಡಾ. ಅಶೋಕ್ ಹಾಜರಿದ್ದರು. ಪೋಷಣ್ ಅಭಿಯಾನ ಸಂಯೋಜಕರಾದ ಲತಾ ಹಾಗೂ ಅಂಗನವಾಡಿ ಕಾರ್ಯಕರ್ತರು, ಮಕ್ಕಳ ತಾಯಂದಿರು ಹಾಜರಿದ್ದರು.