ಪೌಷ್ಟಿಕತೆ ಪ್ರತಿಯೊಬ್ಬ ಮಗುವಿನ ಪ್ರಾಥಮಿಕ ಹಕ್ಕು: ಅಮ್ಜಾದ್ ಪಟೇಲ್

| Published : Oct 25 2024, 12:49 AM IST

ಪೌಷ್ಟಿಕತೆ ಪ್ರತಿಯೊಬ್ಬ ಮಗುವಿನ ಪ್ರಾಥಮಿಕ ಹಕ್ಕು: ಅಮ್ಜಾದ್ ಪಟೇಲ್
Share this Article
  • FB
  • TW
  • Linkdin
  • Email

ಸಾರಾಂಶ

ಮಕ್ಕಳು ದೇಶದ ಸಂಪತ್ತು ಆಗಿದ್ದು, ಮಕ್ಕಳನ್ನು ಪೌಷ್ಠಿಕರನ್ನಾಗಿ ಮಾಡುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ.

ಪೋಷಣ್ ಅಭಿಯಾನ, ಕೇಂದ್ರ ಸರ್ಕಾರದ ಯೋಜನೆಗಳ ಜಾಗೃತಿ ಕಾರ್ಯಕ್ರಮ

ಕನ್ನಡಪ್ರಭ ವಾರ್ತೆ ಕೊಪ್ಪಳ

ಮಕ್ಕಳು ದೇಶದ ಸಂಪತ್ತು ಆಗಿದ್ದು, ಮಕ್ಕಳನ್ನು ಪೌಷ್ಠಿಕರನ್ನಾಗಿ ಮಾಡುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಕೊಪ್ಪಳ ನಗರಸಭೆ ಅಧ್ಯಕ್ಷ ಅಮ್ಜಾದ್ ಪಟೇಲ್ ಹೇಳಿದರು.

ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಬಳ್ಳಾರಿಯ ಕೇಂದ್ರ ಸಂವಹನ ಇಲಾಖೆ, ಕೊಪ್ಪಳ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವುಗಳ ಸಂಯುಕ್ತಾಶ್ರಯದಲ್ಲಿ ಗುರುವಾರ ನಗರದ ವಾಲ್ಮೀಕಿ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಪೋಷಣ್ ಅಭಿಯಾನ, ಕೇಂದ್ರ ಸರ್ಕಾರದ ಯೋಜನೆಗಳ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಪೌಷ್ಠಿಕತೆ ಪ್ರತಿಯೊಬ್ಬ ಮಗುವಿನ ಪ್ರಾಥಮಿಕ ಹಕ್ಕಾಗಿದೆ. ಈ ನಿಟ್ಟಿನಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮಕ್ಕಳ ಪೌಷ್ಠಿಕತೆಗಾಗಿ ವಿವಿಧ ವಿಶೇಷ ಯೋಜನೆಗಳನ್ನು ಹಾಗೂ ಕಾರ್ಯಕ್ರಮ ಜಾರಿಗೊಳಿಸಿವೆ. ಪೋಷಣ್ ಅಭಿಯಾನದ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಿ ಕಾರ್ಯಕ್ರಮವನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು. ತಾಯಿ ಮತ್ತು ಗರ್ಭಿಣಿಯರು ಪ್ರಾರಂಭದಲ್ಲಿಯೇ ವಿಶೇಷ ಪೌಷ್ಟಿಕ ಆಹಾರ ಪಡೆದು ಆರೋಗ್ಯವಂತ ಮಗುವನ್ನು ಉತ್ತಮ ಸಮಾಜ ನಿರ್ಮಾಣಕ್ಕೆ ಕೊಡುಗೆಯಾಗಿ ನೀಡಬೇಕೆಂದು ತಿಳಿಸಿದರು.

ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಬಳ್ಳಾರಿಯ ಕೇಂದ್ರ ಸಂವಹನ ಇಲಾಖೆಯ ಅಧಿಕಾರಿ ರಾಮಕೃಷ್ಣ ಎನ್. ಪ್ರಾಸ್ತಾವಿಕವಾಗಿ ಮಾತನಾಡಿ, ಪಿ.ಎಂ. ಸೂರ್ಯ ಘರ್ ಯೋಜನೆ, ವಿಕಸಿತ ಭಾರತ, ಪಿ.ಎಂ ದೂರದರ್ಶಿತ್ವ-2047ರ ಕುರಿತು ಫಲಾನುಭವಿಗಳಿಗೆ ಮಾಹಿತಿ ನೀಡಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಪರಶುರಾಮ ಶೆಟ್ಟಪ್ಪನವರ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಿವಾನಂದ ಪೂಜಾರ ಮಾತನಾಡಿದರು.

ಗಾಯಕಿ ಅನ್ನಪೂರ್ಣ ಮನ್ನಾಪುರ ಬಾಲ್ಯವಿಹಾರ ತಡೆ ಹಾಗೂ ಪೌಷ್ಠಿಕ ಆಹಾರ ಕುರಿತು ಜಾಗೃತಿ ಗೀತೆ ಹಾಡಿದರು.

ವಿವಿಧ ಸ್ಪರ್ಧೆಗಳು:ಕಾರ್ಯಕ್ರಮದ ಅಂಗವಾಗಿ ರಂಗೋಲಿ, ಪೌಷ್ಟಿಕ ಆಹಾರ ಸ್ಪರ್ಧೆ, ಹಣ್ಣು ಮತ್ತು ತರಕಾರಿಗಳಿಂದ ಕಾಲಾಕೃತಿ ತಯಾರಿಕೆ ಸ್ಪರ್ಧೆ ಏರ್ಪಡಿಸಿ, ವಿಜೇತರಿಗೆ ಬಹುಮಾನ ವಿತರಣೆ ಮಾಡಲಾಯಿತು.

ಈ ಸಂದರ್ಭ ಕೊಪ್ಪಳ ಶಿಶು ಅಭಿವೃದ್ಧಿ ಯೋಜನಾಧಿಕಾರಿ ರೋಹಿಣಿ ಕೊಟಗಾರ, ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ರೂಪಾ ಗಂಧದ ಹಾಗೂ ಶಿವಶರಣಪ್ಪ ಗದ್ದಿ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಗಂಗಮ್ಮ ಸೇರಿದಂತೆ ಮತ್ತಿತರರಿದ್ದರು.

ಪ್ರೀತಿ ಕಾರ್ಯಕ್ರಮ ನಿರೂಪಿಸಿದರು. ವಲಯದ ಎಲ್ಲ ಹಿರಿಯ, ಕಿರಿಯ ಮೇಲ್ವಿಚಾರಕಿಯರು, ಪೋಷಣ್ ಅಭಿಯಾನ ಯೋಜನೆಯ ತಾಲೂಕಾ ಸಂಯೋಜಕರು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಆಶಾ ಕಾರ್ಯಕರ್ತೆಯರು, ಫಲಾನುಭವಿಗಳು ಕಾರ್ಯಕ್ರಮದಲ್ಲಿದ್ದರು.