ಸಾರಾಂಶ
ಕನ್ನಡಪ್ರಭ ವಾರ್ತೆ ಮಡಿಕೇರಿ
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನಾ ಇಲಾಖೆ ವತಿಯಿಂದ ಸೋಮವಾರಪೇಟೆ ಗೆಜ್ಜೆ ಹಣಕೋಡು ಅಂಗನವಾಡಿ ಕೇಂದ್ರದಲ್ಲಿ ಪೋಷಣ ಮಾಸಾಚರಣೆ ಹಾಗೂ ಮಾತೃವಂದನಾ ವಿಶೇಷ ಅಭಿಯಾನ ಕಾರ್ಯಕ್ರಮವು ಶನಿವಾರ ನಡೆಯಿತು.ಗ್ರಾ.ಪಂ. ಅಧ್ಯಕ್ಷ ಗೋಪಾಲಕೃಷ್ಣ ಕಾರ್ಯಕ್ರಮ ಉದ್ಘಾಟಿಸಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಉತ್ತಮವಾದ ಕಾರ್ಯಕ್ರಮ ಹಮ್ಮಿಕೊಂಡಿದೆ. ನಮ್ಮ ಆರೋಗ್ಯ ನಮ್ಮ ಕೈನಲ್ಲಿ ಹಿಡಿದಿಟ್ಟುಕೊಳ್ಳುವಂತಹ ಪರಿಸ್ಥಿತಿ ಉಂಟಾಗಿದೆ. ಸಾಧ್ಯವಾದಷ್ಟು ಮನೆಯ ಹಿತ್ತಲಿನಲ್ಲಿ ಬೆಳೆದ ತರಕಾರಿಗಳನ್ನು ಸೇವಿಸೋದು ಉತ್ತಮ ಎಂದರು.
ಇಲಾಖೆ ವತಿಯಿಂದ ದೊರೆಯುವ ಹಲವಾರು ಯೋಜನೆಯ ಕುರಿತು ತಿಳಿದುಕೊಂಡು ಮುಂದಿನ ದಿನಗಳಲ್ಲಿ ಜನರಿಗೆ ಇಂತಹ ಮಾಹಿತಿಯ ಅವಶ್ಯಕತೆ ಇದೆ. ಈ ಕಾರ್ಯಕ್ರಮದ ಮುಖಾಂತರ ಎಲ್ಲ ಜನರ ಮನೆಗಳಿಗೆ ಮಾಹಿತಿ ಪಸರಿಸಲಿ, ಉತ್ತಮ ಸಮಾಜ ನಿರ್ಮಾಣವಾಗಲಿ ಎಂದು ತಿಳಿಸಿದರು.ಶಿಶು ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿ ಸಾವಿತ್ರವ್ವ ಅಧ್ಯಕ್ಷತೆವಹಿಸಿ ಮಾತನಾಡಿ, ಪೋಷಣ್ ಅಭಿಯಾನ ಯೋಜನೆಯು ಕೇಂದ್ರ ಸರ್ಕಾರದ ಯೋಜನೆಯಾಗಿದ್ದು ಗರ್ಭಿಣಿ, ಬಾಣಂತಿ, ಮಕ್ಕಳ ಅಪೌಷ್ಟಿಕತೆ, ಸಾವಿನ ಪ್ರಮಾಣ ಕಡಿಮೆ ಗೊಳಿಸುವಿಕೆ, ರಕ್ತಹೀನತೆ, ಈ ಕುರಿತಾಗಿ ಜನರಿಗೆ ಜಾಗೃತಿ ಮೂಡಿಸುವುದಾಗಿದೆ. ಒಬ್ಬ ತಾಯಿಯ ಹೆಸರಿನಲ್ಲಿ ಒಂದು ಸಸಿ ನೆಡುವುದರೊಂದಿಗೆ ಎಲ್ಲರೂ ದೇಶಕ್ಕೆ ಸದೃಢ ಮಕ್ಕಳನ್ನು ನೀಡಿ ಎಂಬುದಾಗಿ ಹೇಳಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ಮಹಿಳಾ ಸಬಲೀಕರಣ ಘಟಕದ ಜೆಂಡರ್ ಸ್ಷೆಷಲಿಸ್ಟ್ ಎಸ್.ಆರ್.ಕೇಶಿನಿ ಮಾತನಾಡಿ, ಇಲಾಖೆಯ ಯೋಜನೆಯಾದ ಮಾತೃವಂದನಾ ಯೋಜನೆ, ಭಾಗ್ಯಲಕ್ಷ್ಮೀ ಯೋಜನೆ, ಮಹಿಳಾ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಹಾಗೂ ಮಕ್ಕಳ ಸಹಾಯವಾಣಿ ಇನ್ನಿತರ ಇಲಾಖಾ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು. ಮಾತೃವಂದನಾ ಯೋಜನೆಗೆ ಗರ್ಭಿಣಿ ಮಹಿಳೆಯರಿಂದ ಅರ್ಜಿಯನ್ನು ಸ್ವಿಕರಿಸಲಾಯಿತು.ಊರಿನ ಗರ್ಭಿಣಿ, ಬಾಣಂತಿ, ಮಹಿಳೆಯರು ಗ್ರಾಮಸ್ಥರು, ಗ್ರಾಮದ ವಿ.ಆರ್.ಡಬ್ಲ್ಯೂ ಹಾಜರಿದ್ದರು. ಅಂಗನವಾಡಿ ಕಾರ್ಯಕರ್ತೆಯರು ನಿರೂಪಿಸಿದರು. ಪೂರ್ಣಿಮಾ ಪ್ರಾರ್ಥಿಸಿದರು. ಸವಿತ ವಂದಿಸಿದರು.