ಶನಿವಾರಸಂತೆ: ಪೋಷಣ್ ಮಾಸಾಚರಣೆ, ಪೌಷ್ಟಿಕ ಸಪ್ತಾಹ

| Published : Sep 18 2025, 01:11 AM IST

ಶನಿವಾರಸಂತೆ: ಪೋಷಣ್ ಮಾಸಾಚರಣೆ, ಪೌಷ್ಟಿಕ ಸಪ್ತಾಹ
Share this Article
  • FB
  • TW
  • Linkdin
  • Email

ಸಾರಾಂಶ

ಪೋಷಣ್‌ ಮಾಸಾಚರಣೆ ಪ್ರಯುಕ್ತ ಪೌಷ್ಟಿಕ ಸಪ್ತಾಹ ಕಾರ್ಯಕ್ರಮ ಆಚರಿಸಲಾಯಿತು.

ಕನ್ನಡಪ್ರಭ ವಾರ್ತೆ ಶನಿವಾರಸಂತೆ

ಪೋಷಣ್ ಮಾಸಾಚರಣೆ ಪ್ರಯುಕ್ತ ಸಮೀಪದ ಬೆಸೂರು ಗ್ರಾ.ಪಂ.ಯ ಸಭಾಂಗಣದಲ್ಲಿ ಪೌಷ್ಟಿಕ ಸಪ್ತಾಹ ಕಾರ್ಯಕ್ರಮವನ್ನು ಆಚರಿಸಲಾಯಿತು. ಬೆಸೂರು ಗ್ರಾ.ಪಂ.ಅಧ್ಯಕ್ಷೆ ಕಮಲಮ್ಮ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಬೆಸೂರು ಆಯುರ್ವೇದ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಸ್ಮಿತಾ ಮಾತನಾಡಿ, ಗರ್ಭಿಣಿಯರು ಹೆಚ್ಚಾಗಿ ಪೌಷ್ಟಿಕ ಆಹಾರವನ್ನು ಸೇವಿಸಬೇಕು ಸ್ಥಳೀಯವಾಗಿ ಸಿಗುವ ಹಣ್ಣು ಹಂಪಲು, ತರಕಾರಿ, ಸೊಪ್ಪು, ಮೊಳಕೆ ಬರಿಸಿದ ಕಾಳು ಮುಂತಾದವುಗಳಲ್ಲಿ ಪೌಷ್ಟಿಕಾಂಶ ಹೆಚ್ಚಾಗಿರುವುದರಿಂದ ಇವುಗಳನ್ನು ಸೇವಿಸುವುದರಿಂದ ಗರ್ಭಿಣಿಯರಲ್ಲಿ ಪೌಷ್ಟಿಕಾಂಶ ವೃದ್ದಿಸುತ್ತದೆ ಎಂದರು. ಗರ್ಭಿಣಿಯರು ಪೌಷ್ಟಿಕಾಂಶ ಆಹಾರ ಸೇವಿಸುವ ಜೊತೆಯಲ್ಲಿ ಶಾಖಾಹಾರ, ಪೌಷ್ಟಿಕಾಂಶ ಒಳಗೊಂಡಿರುವ ಮೊಟ್ಟೆ, ಮೀನು, ಮೌಂಸವನ್ನು ಸೇವಿಸಬೇಕು. ಇದರಿಂದ ಮಗುವಿನ ಬೆಳವಣಿಗೆ ಉತ್ತಮಗೊಳ್ಳುತ್ತದೆ ಎಂದು ಹೇಳಿದರು.

ಆರೋಗ್ಯ ಅಧಿಕಾರಿ ಕೇಶವಮೂರ್ತಿ ಗರ್ಭಿಣಿಯರು ಮತ್ತು ಬಾಣಂತಿಯರು ಸರಿಯಾದ ಸಮಯಕ್ಕೆ ಚುಚ್ಚುಮದ್ದು ಮತ್ತು ಲಸಿಕೆಯನ್ನು ತೆಗೆದುಕೊಳ್ಳುವ ಕುರಿತು ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಗ್ರಾ.ಪಂ.ಸದಸ್ಯರಾದ ದಯಾಕರ್, ಕಿಶನ್, ರವಿ ಗ್ರಾ.ಪಂ.ಸಿಬ್ಬಂದಿ ಆನಂದ್, ನಿಜಗುಣ ಮತ್ತು ಗ್ರಾ.ಪಂ.ವ್ಯಾಪ್ತಿಯ ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಹಾಗೂ ಗರ್ಭಿಣಿ ಮತ್ತು ಬಾಣಂತಿಯರು ಪಾಲ್ಗೊಂಡಿದ್ದರು.