ಸಾರಾಂಶ
ಕನ್ನಡಪ್ರಭ ವಾರ್ತೆ ಕೆಜಿಎಫ್ ಮಹಿಳೆಯರು ಮತ್ತು ಮಕ್ಕಳ ಸಮಗ್ರ ಪೋಷಣೆಗಾಗಿ ಪೋಷಣ್ ಅಭಿಯಾನ್ ಒಂದು ಪ್ರಮುಖ ಯೋಜನೆಯಾಗಿದೆ. ಇದು ಮಕ್ಕಳು, ಹದಿಹರೆಯದ ಹುಡುಗಿಯರು, ಗರ್ಭಿಣಿಯರು ಮತ್ತು ಹಾಲುಣಿಸುವ ತಾಯಂದಿರಿಗೆ ಪೌಷ್ಟಿಕತೆ ಹೆಚ್ಚಿಸಲು ಭಾರತ ಸರ್ಕಾರದ ಪ್ರಮುಖ ಯೋಜನೆಯಾಗಿದೆ ಎಂದು ಪ್ರಧಾನ ಸಿವಿಲ್ ನ್ಯಾಯಾಧೀಶ ಎಂ.ವಿನೋದ್ ಕುಮಾರ್ ತಿಳಿಸಿದರು.ನಗರಸಭೆ ಸಭಾಗಂಣದಲ್ಲಿ ಹಮ್ಮಿಕೊಂಡಿದ್ದ ಕೆಜಿಎಫ್ ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಹಿಳಾ ಮತ್ತು ಮಕ್ಕಳ ಇಲಾಖೆಯ ಸಹಯೋಗದೊಂದಿಗೆ ರಾಷ್ಟ್ರೀಯ ಪೌಷ್ಟಿಕತೆ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು, ರೋಗ ನಿರೋಧಕ ಶಕ್ತಿ
ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಅಭ್ಯಾಸಗಳನ್ನು ಬೆಳೆಸಲು ಮತ್ತು ಉತ್ತೇಜಿಸಲು ಒಮ್ಮುಖ ಪರಿಸರ ವ್ಯವಸ್ಥೆಯನ್ನು ರಚಿಸುವ ಮೂಲಕ ಪೌಷ್ಟಿಕಾಂಶದ ವಿಷಯ ಮತ್ತು ವಿತರಣೆಯಲ್ಲಿ ಕಾರ್ಯತಂತ್ರದ ಬದಲಾವಣೆಯ ಮೂಲಕ ಅಪೌಷ್ಟಿಕತೆಯ ಸವಾಲುಗಳನ್ನು ಪರಿಹರಿಸಲು ಸರಕಾರದ ಮುಖ್ಯ ಉದ್ದೇಶವಾಗಿದೆ ಎಂದರು.ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಸುರೇಶ್‌ಕುಮಾರ್ ಮಾತನಾಡಿ, ಪೋಷಣ್ ಟ್ರ‍್ಯಾಕರ್ ಎನ್ನುವುದು ಮಕ್ಕಳಲ್ಲಿ ಕುಂಠಿತ ಬೆಳವಣಿಗೆ, ತೂಕ ನಷ್ಟ ಮತ್ತು ಕಡಿಮೆ ತೂಕದ ಹರಡುವಿಕೆಯನ್ನು ಕ್ರಿಯಾತ್ಮಕವಾಗಿ ಗುರುತಿಸಲು ಮತ್ತು ಪೌಷ್ಟಿಕಾಂಶ ಸೇವಾ ವಿತರಣೆಯ ಕೊನೆಯ ಹಂತದ ಟ್ರ‍್ಯಾಕಿಂಗಿಗಾಗಿ ಮೊಬೈಲ್ ಆಧಾರಿತ ಅಪ್ಲಿಕೇಶನ್ ಆಗಿದೆ. ದೇಶದಲ್ಲಿ ಅಪೌಷ್ಟಿಕತೆಯ ನಿರ್ಮೂಲನೆಗಾಗಿ ಅತ್ಯುತ್ತಮ ಪರಿಸರ ವ್ಯವಸ್ಥೆಯನ್ನು ರಚಿಸುವ ಪ್ರಯಾಣವನ್ನು ಮುಂದುವರಿಸಲಾಗಿದೆ. ತಾಯಂದಿರು ಮಕ್ಕಳಿಗೆ ಎದೆಹಾಲನ್ನು ಉಣಿಸುವುದರಿಂದ ಮಕ್ಕಳ ಉತ್ತಮ ಬೆಳವಣಿಗೆಗೆ ಸಹಕಾರಿಯಾಗಲಿದೆ ಎಂದರು ಅಪೌಷ್ಟಿಕತೆ ಕಡಿಮೆ ಮಾಡಬೇಕುಒಂದನೇ ಅಪರ ಸಿವಿಲ್ ನ್ಯಾಯಾಧೀಶೆ ಕೆ.ಶೇಮಿದಾ ಮಾತನಾಡಿ, ಅಭಿಯಾನದ ಮುಖ್ಯ ಉದ್ದೇಶವೆಂದರೆ ದೇಶದಲ್ಲಿನ ಅಪೌಷ್ಟಿಕತೆಯ ಮಟ್ಟವನ್ನು ಕಡಿಮೆ ಮಾಡುವುದು ಮತ್ತು ಮಕ್ಕಳ ಪೌಷ್ಟಿಕ ಸ್ಥಿತಿಯನ್ನು ಹೆಚ್ಚಿಸುವುದು.ದೇಶದಿಂದ ಅಪೌಷ್ಟಿಕತೆಯನ್ನು ತೆಗೆದುಹಾಕುವ ಗುರಿಯನ್ನು ಹೊಂದಿದೆ.ಪೋಷಣ್ ಅಭಿಯಾನ್ ಹದಿಹರೆಯದವರು, ಮಕ್ಕಳು, ಗರ್ಭಿಣಿಯರು ಮತ್ತು ಹಾಲುಣಿಸುವ ತಾಯಂದಿರ ಪೌಷ್ಟಿಕಾಂಶದ ಫಲಿತಾಂಶಗಳನ್ನು ಸುಧಾರಿಸುವ ಪ್ರಮುಖ ಯೋಜನೆಯಾಗಿದೆ. ಹದಿಹರಿಯದ ವಯಸ್ಸಿನ ಮಕ್ಕಳು ಹಾದಿತಪ್ಪದಂತೆ ಎಚ್ಚರ ವಹಿಸಬೇಕೆಂದು ಅಂಗನವಾಡಿ ಶಿಕ್ಷಕಿಯರಿಗೆ ಕಿವಿ ಮಾತು ಹೇಳಿದರು. ಸಿಡಿಪಿಒ ರಾಜೇಶ್ ಮಾತನಾಡಿ, ಕುಂಠಿತ ಬೆಳವಣಿಗೆ, ರಕ್ತಹೀನತೆ, ಅಪೌಷ್ಟಿಕತೆ ಮತ್ತು ಕಡಿಮೆ ತೂಕದ ಜನನಗಳನ್ನು ಕಡಿಮೆ ಮಾಡಲು ನಿರ್ದಿಷ್ಟ ಗುರಿಗಳನ್ನು ಹೊಂದಿದ್ದು, ಅಪೌಷ್ಟಿಕತೆಗೆ ಸಂಬಂಧಿಸಿದ ವಿವಿಧ ಯೋಜನೆಗಳ ನಕ್ಷೆ ರಚನೆ, ಐಸಿಟಿ ಆಧಾರಿತ ನೈಜ-ಸಮಯದ ಮೇಲ್ವಿಚಾರಣಾ ವ್ಯವಸ್ಥೆಯ ಮೂಲಕ ಎನರ್ಜಿ ಸಕ್ರಿಯಗೊಳಿಸಲಾಗುವುದು ಎಂದು ತಿಳಿಸಿದರು.ಪೌಷ್ಟಿಕ ಅಹಾರ ನೀಡಿ
ವಕೀಲರ ಸಂಘದ ಅಧ್ಯಕ್ಷರಾದ ಎಸ್.ಎನ್.ರಾಜಗೋಪಾಲಗೌಡ ಮಾತನಾಡಿ, ಅಪೌಷ್ಟಿಕೆತೆಯಿಂದ ಬಳಲುತ್ತಿರುವ ಮಕ್ಕಳು, ಮಹಿಳೆಯರು, ಹಿರಿಯನಾಗರಿಕರನ್ನು ಆರೋಗ್ಯವಂತರನ್ನಾಗಿ ರೂಪಿಸುವ ಸಲುವಾಗಿ ಪೌಷ್ಟಿಕ ಅಹಾರವನ್ನು ನೀಡುವಂತೆ ಅಧಿಕಾರಿಗಳಿಗೆ ಸಲಹೆ ನೀಡಿದರು.ಸಂಪ್ಮೂನಲ ವ್ಯಕ್ತಿಯಾದ ಅನಿತಾ ಮಾತನಾಡಿ, ವಿಶೇಷವಾಗಿ ಮಹಿಳೆಯರು ಮತ್ತು ಮಕ್ಕಳಿಗೆ ಸಾಕಷ್ಟು ಪೌಷ್ಟಿಕಾಂಶವನ್ನು ನೀಡುವ ವಿಷಯದಲ್ಲಿ ಸರಕಾರಗಳು ಗಮನಾರ್ಹ ಸವಾಲುಗಳನ್ನು ಎದುರಿ ಅಪೌಷ್ಟಿಕೆತೆ, ಕುಂಠಿತ ಬೆಳವಣೆಗೆ ಮತ್ತು ಅಸಮರ್ಪಕ ತಾಯಿಯ ಆರೈಕೆ ನಿರ್ಣಾಯಕ ಸಮಸ್ಯೆಗಳಾಗಿ ಅಂಗನವಾಡಿ ಶಿಕ್ಷಕರು ಕಾರ್ಯನಿರ್ವಹಿಸುತ್ತಿರುವುದಾಗಿ ತಿಳಿಸಿದರು. ಕಾರ್ಯಕ್ರಮದಲ್ಲಿ ವಕೀಲರ ಸಂಘದ ಉಪಾಧ್ಯಕ್ಷರಾದ ಮಣಿವಣ್ಣನ್, ತಾಲೂಕು ಆರೋಗ್ಯಧಿಕಾರಿ ಪದ್ಮವಾತಿ, ನಗರಸಭೆ ಪೌರಾಯುಕ್ತ ಅಂಜಿನೇಯಲು ಹಾಗೂ ಇನ್ನಿತರ ಅಧಿಕಾರಿಗಳು, ಅಂಗನವಾಡಿ ಶಿಕ್ಷಕರು ಉಪಸ್ಥಿತರಿದ್ದರು.