ಕಾಳಸಂತೆಯಲ್ಲಿ ಪೌಷ್ಟಿಕ ಆಹಾರ ಕಿಟ್‌ ಮಾರಾಟ: ಪ್ರಮುಖ ಆರೋಪಿ ಬಂಧಿಸಲು ಆಗ್ರಹ

| Published : Feb 25 2025, 12:49 AM IST

ಕಾಳಸಂತೆಯಲ್ಲಿ ಪೌಷ್ಟಿಕ ಆಹಾರ ಕಿಟ್‌ ಮಾರಾಟ: ಪ್ರಮುಖ ಆರೋಪಿ ಬಂಧಿಸಲು ಆಗ್ರಹ
Share this Article
  • FB
  • TW
  • Linkdin
  • Email

ಸಾರಾಂಶ

ಅಕ್ರಮದಲ್ಲಿ ಪ್ರಮುಖ ಆರೋಪಿಯ ಬಂಧನ ಈ ವರೆಗೂ ನಡೆಯದಿರುವುದು ಸಂಶಯಕ್ಕೆ ಎಡಮಾಡಿಕೊಟ್ಟಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಹುಬ್ಬಳ್ಳಿ: ಅಂಗನವಾಡಿ ಕೇಂದ್ರ ಮಕ್ಕಳಿಗೆ ಹಾಗೂ ಬಾಣಂತಿಯರಿಗೆ ವಿತರಿಸಬೇಕಾದ ಪೌಷ್ಟಿಕ ಆಹಾರ ಕಿಟ್‌ಗಳನ್ನು ಅಕ್ರಮವಾಗಿ ಕಾಳ ಸಂತೆಯಲ್ಲಿ ಮಾರಾಟ ಮಾಡಲು ಯತ್ನಿಸಿದ್ದ ಪ್ರಮುಖ ಆರೋಪಿ ಹಾಗೂ ಕಾಂಗ್ರೆಸ್ ನಾಯಕಿಯ ಬಂಧನಕ್ಕೆ ಒತ್ತಾಯಿಸಿ ಸೋಮವಾರ ಬಿಜೆಪಿ ಕಾರ್ಯಕರ್ತರು ನಗರದ ಎಸಿಪಿ ಕಚೇರಿ ಎದುರು, ದುರ್ಗದಬೈಲ್‌ನಲ್ಲಿರುವ ಶಹರ ಪೊಲೀಸ್‌ ಠಾಣೆಯ ಎದುರು ಪ್ರತಿಭಟನೆ ನಡೆಸಿದರು.

ಈ ವೇಳೆ ಮಾತನಾಡಿದ ಬಿಜೆಪಿ ಮುಖಂಡರು, ಪೌಷ್ಟಿಕಾಂಶಯುಕ್ತ ಆಹಾರ ಕಿಟ್‌ಗಳನ್ನು ಕಾಂಗ್ರೆಸ್‌ ಕಾರ್ಯಕರ್ತೆಯೋರ್ವರು ಸ್ಥಳೀಯ ಗೋದಾಮಿನಲ್ಲಿ ಸಂಗ್ರಹಿಸಿ ಕಾಳಸಂತೆಯಲ್ಲಿ ಮಾರಾಟಕ್ಕೆ ಯತ್ನಿಸಿದ್ದರು. ಖಚಿತ ಮಾಹಿತಿ ಮೇರೆಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ದಾಳಿ ಮಾಡಿ ಅಕ್ರಮವಾಗಿ ಸಂಗ್ರಹಿಸಿದ್ದ ಕಿಟ್‌ಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದರು.

ಈಗಾಗಲೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ 32 ಜನರನ್ನು ಬಂಧಿಸಲಾಗಿದೆ. ಆದರೆ, ಈ ಅಕ್ರಮದಲ್ಲಿ ಪ್ರಮುಖ ಆರೋಪಿಯ ಬಂಧನ ಈ ವರೆಗೂ ನಡೆಯದಿರುವುದು ಸಂಶಯಕ್ಕೆ ಎಡಮಾಡಿಕೊಟ್ಟಿದೆ. ಈ ಅಕ್ರಮದಲ್ಲಿ ದೊಡ್ಡ ಮಾಫಿಯಾ ಅಡಗಿದ್ದು, ಅದರಲ್ಲಿ ಕಾಂಗ್ರೆಸ್‌ನ ಮುಖಂಡರು ಭಾಗಿಯಾಗಿದ್ದಾರೆ. ಕೂಡಲೇ ಅವರನ್ನು ಪತ್ತೆ ಹಚ್ಚುವ ಮೂಲಕ ಜೈಲಿಗೆ ಕಳಿಸಬೇಕು. ಪ್ರಮುಖ ಆರೋಪಿ ಬಂಧನಕ್ಕೆ ಕೆಲವರು ತಡೆ ಉಂಟು ಮಾಡುತ್ತಿರುವ ಆರೋಪ ಕೇಳಿಬಂದಿದೆ. ಪೊಲೀಸರು ಅಂಥವರನ್ನೂ ಬಂಧಿಸಿ ಅವರ ವಿರುದ್ಧವೂ ದೂರು ದಾಖಲಿಸಬೇಕು. ಇಲ್ಲದೇ ಹೋದಲ್ಲಿ ಮುಂಬರುವ ದಿನಗಳಲ್ಲಿ ಉಗ್ರ ಹೋರಾಟ ಹಮ್ಮಿಕೊಳ್ಳುವುದಾಗಿ ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಧಾರವಾಡ ವಿಭಾಗದ ಸಹ ಪ್ರಭಾರಿ ನಾರಾಯಣ ಜರ್ತಾರಘರ, ಓಬಿಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ಸತೀಶ ಶೇಜವಾಡಕರ, ಜಿಲ್ಲಾ ವಕ್ತಾರ ರವಿ ನಾಯಕ, ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಜಗದೀಶ ಬುಳ್ಳಾನವರ, ರಾಜು ಜರ್ತಾರಘರ, ಹು-ಧಾ ಸೆಂಟ್ರಲ್ ಅಧ್ಯಕ್ಷ ರಾಜು ಕಾಳೆ, ಹು-ಧಾ ಪೂರ್ವ ನಿಕಟಪೂರ್ವ ಅಧ್ಯಕ್ಷ ಪ್ರಭು ನವಲಗುಂದಮಠ, ಮುಖಂಡರಾದ ರಂಗಾ ಬದ್ದಿ, ಚಂದ್ರಶೇಖರ ಗೋಕಾಕ, ಲಕ್ಷ್ಮೀಕಾಂತ ಘೋಡಕೆ, ಅರುಣ ಹುದ್ಲಿ, ಸಂತೋಷ ಅರಕೇರಿ ಸೇರಿದಂತೆ ಹಲವರಿದ್ದರು.

24ಎಚ್‌ಯುಬಿ26, 27

ಕಾಳಸಂತೆಯಲ್ಲಿ ಪೌಷ್ಟಿಕ ಆಹಾರ ಕಿಟ್‌ ಮಾರಾಟಕ್ಕೆ ಯತ್ನಿಸಿದ ಪ್ರಮುಖ ಆರೋಪಿ ಬಂಧನಕ್ಕೆ ಒತ್ತಾಯಿಸಿ ಸೋಮವಾರ ಹುಬ್ಬಳ್ಳಿಯ ದುರ್ಗದಬೈಲ್‌ ಬಳಿಯ ಶಹರ ಪೊಲೀಸ್‌ ಠಾಣೆ ಎದುರು ಬಿಜೆಪಿಯಿಂದ ಪ್ರತಿಭಟನೆ ನಡೆಸಲಾಯಿತು.

ಅಂಗನವಾಡಿ ಕೇಂದ್ರ ಮಕ್ಕಳಿಗೆ ಹಾಗೂ ಬಾಣಂತಿಯರಿಗೆ ವಿತರಿಸಬೇಕಾದ ಪೌಷ್ಟಿಕ ಆಹಾರ ಕಿಟ್‌ಗಳನ್ನು ಅಕ್ರಮವಾಗಿ ಕಾಳ ಸಂತೆಯಲ್ಲಿ ಮಾರಾಟ ಮಾಡಲು ಯತ್ನಿಸಿದ್ದ ಪ್ರಮುಖ ಆರೋಪಿ ಹಾಗೂ ಕಾಂಗ್ರೆಸ್ ನಾಯಕಿಯ ಬಂಧನಕ್ಕೆ ಒತ್ತಾಯಿಸಿ ಸೋಮವಾರ ಬಿಜೆಪಿ ಕಾರ್ಯಕರ್ತರು ನಗರದ ಎಸಿಪಿ ಕಚೇರಿ ಎದುರು, ದುರ್ಗದಬೈಲ್‌ನಲ್ಲಿರುವ ಶಹರ ಪೊಲೀಸ್‌ ಠಾಣೆಯ ಎದುರು ಪ್ರತಿಭಟನೆ ನಡೆಸಿದರು.