ಪೌಷ್ಟಿಕ ಆಹಾರವೇ ಮನುಷ್ಯನ ಆರೋಗ್ಯಕ್ಕೆ ಮನೆ ಮದ್ದು, ಸದೃಢವಾದ ದೇಹದ ನಿರ್ಮಾಣದಲ್ಲಿ ಪೌಷ್ಟಿಕ ಆಹಾರ ಪ್ರಮುಖ ಪಾತ್ರ ವಹಿಸುತ್ತದೆ.
ಪೋಷಣ್ ಮಾಸಾಚರಣೆಯ ಸಮಾರೋಪ ಸಮಾರಂಭ ಉದ್ಘಾಟನೆ
ಕನ್ನಡಪ್ರಭ ವಾರ್ತೆ ರೋಣಪೌಷ್ಟಿಕ ಆಹಾರವೇ ಮನುಷ್ಯನ ಆರೋಗ್ಯಕ್ಕೆ ಮನೆ ಮದ್ದು, ಸದೃಢವಾದ ದೇಹದ ನಿರ್ಮಾಣದಲ್ಲಿ ಪೌಷ್ಟಿಕ ಆಹಾರ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಲಲಿತಾ ಅಳವಂಡಿ ಹೇಳಿದರು.
ಸಮೀಪದ ಶಾಂತಗೇರಿ ಗ್ರಾಮದ ಸರಕಾರಿ ಪ್ರಾಥಮಿಕ ಶಾಲೆಯ ಆವರಣದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಆರೋಗ್ಯ ಇಲಾಖೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಜರುಗಿದ ಪೋಷಣ್ ಮಾಸಾಚರಣೆಯ ಸಮಾರೋಪ ಸಮಾರಂಭ ಉದ್ಘಾಟಿಸಿ ಮಾತನಾಡಿದರು.ಪೋಷಣೆ ಎಂಬುದು ತಾಯಿಯ ಗರ್ಭದಲ್ಲಿ ಆರಂಭವಾಗಿ ಮನುಷ್ಯನ ಅಂತ್ಯದವರೆಗೆ ಬಹು ಪ್ರಮುಖ ಪಾತ್ರ ವಹಿಸುತ್ತದೆ. ಆದ್ದರಿಂದ ತಾಯಿ ಗರ್ಭಿಣಿಯಾಗಿರುವಾಗಲೇ ತನ್ನ ಆರೋಗ್ಯದ ಬಗ್ಗೆ ಮತ್ತು ಗರ್ಭದಲ್ಲಿರುವ ಮಗುವಿನ ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕು. ಜತೆಗೆ ಪೌಷ್ಟಿಕಾಂಶಯುಳ್ಳ, ಸತ್ವಯುತ ಆಹಾರ ಸೇವಿಸಬೇಕು ಎಂದರು.
ಆರೋಗ್ಯ ಶಿಕ್ಷಣಾಧಿಕಾರಿ ಕೆ.ಎ. ಹಾದಿಮನಿ ಮಾತನಾಡಿ, ಜನತೆ ಪೌಷ್ಟಿಕ ಆಹಾರದ ಮಹತ್ವ ಕುರಿತು ತಿಳಿಸಿಕೊಡಬೇಕೆನ್ನುವ ಉದ್ದೇಶದಿಂದ ಸೆ. 9ರಿಂದ ಅ. 9ರವರೆಗೆ ಪೋಷಣ್ ಮಾಸಾಚರಣೆ ಆಚರಿಸಲಾಗಿದೆ. ಜನಿಸಿದ ಮಗುವಿನಲ್ಲಿ ಎಳೆಯ ಮಕ್ಕಳಲ್ಲಿ, ಹದಿಹರೆದವರಲ್ಲಿ, ವಯಸ್ಕರಲ್ಲಿ, ಗರ್ಭಿಣಿ, ಬಾಣಂತಿಯರಲ್ಲಿ, ವಯೋವೃದ್ಧರಲ್ಲಿ ಪೋಷಕಾಂಶಯುಕ್ತ ಆಹಾರ ಬಹು ಪ್ರಮುಖ ಪಾತ್ರ ವಹಿಸುತ್ತಿದೆ. ತರಕಾರಿ ಮತ್ತು ಋತುಮಾನಕ್ಕನುಗುಣವಾಗಿ ಹಣ್ಣುಗಳ ಸೇವನೆ ಬಗ್ಗೆ ಹೆಚ್ಚು ಗಮನಹರಿಸಬೇಕು ಎಂದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಂತಗೇರಿ ಪ್ರಾಥಮಿಕ ಆರೋಗ್ಯ ಕೇಂದ್ರ ಆಡಳಿತ ವೈದ್ಯಾಧಿಕಾರಿ ಡಾ. ಬಸವನಗೌಡ ಪವಾಡಿಗೌಡರ ಮಾತನಾಡಿ, ಆರೋಗ್ಯ ಇಲಾಖೆ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಈ ಎರಡು ಇಲಾಖೆಗಳ ಗರ್ಭಾವಸ್ಥೆಯಿಂದ ಹಿಡಿದು ವೃದ್ಧಾಪ್ಯದವರೆಗೆ ಈ ಇಲಾಖೆಗಳು ಸೇವೆ ಸಲ್ಲಿಸುತ್ತವೆ ಎಂದರು.
ಈ ಸಂದರ್ಭ ಗರ್ಭಿಣಿಯರಿಗೆ ಸೀಮಂತಕಾರಣ, ಆರು ತಿಂಗಳು ಮೇಲ್ಪಟ್ಟ ಮಕ್ಕಳಿಗೆ ಅನ್ನಪ್ರಾಸನ, ತಾಯಂದಿರರಿಗೆ ಸನ್ಮಾನ ಜರುಗತು.ಕಾರ್ಯಕ್ರಮದಲ್ಲಿ ಅಂಗನವಾಡಿ ಮೇಲ್ವಿಚಾರಕಿ ಸುವರ್ಣ ಹಾನಾಪೂರ, ರೇಣುಕಾ ಚಂದ್ರಣ್ಣನವರ, ಬೀಬಿಜಾನ ಓಲೇಕಾರ, ಅಂಗನವಾಡಿ ಕಾರ್ಯಕರ್ತೆ ಲಕ್ಷ್ಮೀಬಾಯಿ ಮಾದರ, ಜಯಶ್ರೀ ಬಿಲ್ಲೂರ, ಸುವರ್ಣ ಪೂಜಾರ, ಸುಜಾತ ಗೌಡರ, ಭಾರತಿ ಹಿರೇಮಠ ಹಾಗೂ ಆರೋಗ್ಯ ಇಲಾಖೆಯ ಆರೋಗ್ಯ ನಿರೀಕ್ಷಣಾಧಿಕಾರಿಗಳು, ಪ್ರಾಥಮಿಕ ಆರೋಗ್ಯ ಸುರಕ್ಷಣಾಧಿಕಾರಿಗಳು, ಸಮುದಾಯ ಆರೋಗ್ಯ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.