ಅಪೌಷ್ಟಿಕತೆ ನಿವಾರಣೆಗೆ ಪೌಷ್ಟಿಕಾಂಶ ಆಹಾರ ಅಗತ್ಯ

| Published : Sep 11 2024, 01:02 AM IST

ಸಾರಾಂಶ

ಅಪೌಷ್ಟಿಕತೆ ನಿವಾರಣೆಗೆ ಪೌಷ್ಟಿಕಾಂಶ ಆಹಾರ ಅಗತ್ಯವಾಗಿದೆ. ಪ್ರತಿ ಗರ್ಭಿಣಿ ಬಾಣಂತಿಯರು ಪೋಷಕಾಂಶಯುಕ್ತ ಆಹಾರ ಪದಾರ್ಥ ಸೇವನೆ ಮಾಡುವ ಮೂಲಕ ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಂಡು ಆರೋಗ್ಯವಂತ ಸಮಾಜ ನಿರ್ಮಾಣ ಮಾಡಬೇಕೆಂದು ಪ್ರಧಾನ ಸಿವಿಲ್ ನ್ಯಾಯಾಧೀಶ ಎಚ್.ಆರ್. ಹೇಮಾ ಹೇಳಿದರು.

ಕನ್ನಡಪ್ರಭ ವಾರ್ತೆ ಮೊಳಕಾಲ್ಮುರು

ಅಪೌಷ್ಟಿಕತೆ ನಿವಾರಣೆಗೆ ಪೌಷ್ಟಿಕಾಂಶ ಆಹಾರ ಅಗತ್ಯವಾಗಿದೆ. ಪ್ರತಿ ಗರ್ಭಿಣಿ ಬಾಣಂತಿಯರು ಪೋಷಕಾಂಶಯುಕ್ತ ಆಹಾರ ಪದಾರ್ಥ ಸೇವನೆ ಮಾಡುವ ಮೂಲಕ ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಂಡು ಆರೋಗ್ಯವಂತ ಸಮಾಜ ನಿರ್ಮಾಣ ಮಾಡಬೇಕೆಂದು ಪ್ರಧಾನ ಸಿವಿಲ್ ನ್ಯಾಯಾಧೀಶ ಎಚ್.ಆರ್. ಹೇಮಾ ಹೇಳಿದರು.

ಪಟ್ಟಣದ ಅಂಬೇಡ್ಕರ್ ಸಮುದಾಯ ಭವನದಲ್ಲಿ ಮಂಗಳವಾರ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ತಾಲೂಕು ಆಡಳಿತ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಚಿತ್ರದುರ್ಗ, ಶಿಶು ಅಭಿವೃದ್ಧಿ ಯೋಜನೆ ಮೊಳಕಾಲ್ಮೂರು, ಶಿಕ್ಷಣ ಇಲಾಖೆ ಆರೋಗ್ಯ ಇಲಾಖೆ ,ಪಟ್ಟಣ ಪಂಚಾಯಿತಿ, ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರೀಯ ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಹೌಸ್ತಿಕತೆ ನಿವಾರಣೆಗಾಗಿ ಸರ್ಕಾರ ಪೋಶನ್ ಅಭಿಯಾನದ ಮೂಲಕ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ಗರ್ಭಿಣಿ ಬಾಣಂತಿಯರು ಪೌಷ್ಟಿಕ ಆಹಾರ ಪದಾರ್ಥಗಳನ್ನು ಸೇವನೆ ಮಾಡುವ ಮೂಲಕ ಸದೃಢವಂತರಾಗಿ ಬಾಳಬೇಕು. ಇದರಿಂದ ಮಗುವಿನ ಬೆಳವಣಿಗೆ ಜತೆಗೆ ನಿಮ್ಮ ಆರೋಗ್ಯವೂ ಉತ್ತಮವಾಗಲಿದೆ. ಹಾಗಾಗಿ ಬಿಳಿ ಬಾಣಂತಿಯರು ಸೊಪ್ಪು ತರಕಾರಿ ಸೇರಿದಂತೆ ಪೋಷಕಾಂಶಯುಕ್ತ ಆಹಾರ ಪದಾರ್ಥಗಳನ್ನು ನಿತ್ಯವೂ ಸೇವನೆ ಮಾಡಬೇಕೆಂದು ತಿಳಿಸಿದರು.

ಈ ವೇಳೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜಿಲ್ಲಾ ನಿರೂಪಣಾಧಿಕಾರಿ ವಿಜಯ್ ಕುಮಾರ್ ಮಾತನಾಡಿ, ಪೋಶನ್ ಅಭಿಯಾನ ಸರ್ಕಾರದ ವಿನೂತನ ಕಾರ್ಯಕ್ರಮವಾಗಿದ್ದು, ಮಕ್ಕಳಿಗೆ ಸಮತೋಲನ ಆಹಾರ ಸೇವನೆ ಮುಖ್ಯವಾಗಿದೆ. ಅಂಗನವಾಡಿ ಕಾರ್ಯಕರ್ತರು ಪ್ರತಿ ಮನೆಗೆ ಭೇಟಿ ನೀಡಿ ಆರೋಗ್ಯ ನೈರ್ಮಲ್ಯ ವಿಷಯಗಳನ್ನು ಜನರಿಗೆ ತಿಳಿಸಬೇಕು. ತೀವ್ರ ಅಪೌಷ್ಟಿಕ ಮಕ್ಕಳನ್ನು ಗುರುತಿಸಿ ಆರೋಗ್ಯ ತಪಾಸಣೆ ಮಾಡಿ ಉನ್ನತ ಚಿಕಿತ್ಸೆ ಕೊಡಿಸಬೇಕು ಎಂದರು.

ಹಿರಿಯ ವಕೀಲೆ ಎಂ.ಎನ್. ವಿಜಯಲಕ್ಷ್ಮಿ ಮಾತನಾಡಿ, ಆರೋಗ್ಯಯುತವಾಗಿರಬೇಕಾದರೆ ಒಳ್ಳೆಯ ಪೌಷ್ಟಿಕ ಆಹಾರ ಸೇವನೆ ತುಂಬಾ ಮುಖ್ಯ. ಆ ನಿಟ್ಟಿನಲ್ಲಿ ತಾವೆಲ್ಲರೂ ತರಕಾರಿ, ಹಣ್ಣು , ಹಾಲು ಸೇರಿದಂತೆ ಪ್ರೊಟೀನ್ಯುಕ್ತ ಆಹಾರ ಸೇವಿಸಬೇಕು ಎಂದರು.

ಈ ಕಾರ್ಯಕ್ರಮದಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ. ಮಧುಕುಮಾರ್, ಶಿಶು ಅಭಿವೃದ್ಧಿ ಯೋಜನಾಧಿಕಾರಿ ನವೀನ್ ಕುಮಾರ್, ವಕೀಲರ ಸಂಘದ ಅಧ್ಯಕ್ಷ ಆರ್. ಆನಂದ್, ವಕೀಲರಾದ ಜಿ. ಮಂಜುನಾಥ್, ಕುಮಾರಪ್ಪ, ಟೌನ್ ವೃತ್ತದ ಮೇಲ್ವಿಚಾರಕರು ಪಿರ್ದೋಸ್ ಜಹಾನ್, ಪೋಶನ್ ಅಭಿಯಾನ್ ಯೋಜನಾ ಸಂಯೋಜಕರು ಹನುಮಂತಪ್ಪ ಇದ್ದರು.