ಸಾರಾಂಶ
ಗಣಿಬಾಧಿತ ಪ್ರದೇಶವಾದ ಕರಡಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಪೌಷ್ಟಿಕ ಆಹಾರ ವಿತರಣೆ
ಕನ್ನಡಪ್ರಭ ವಾರ್ತೆ ತಿಪಟೂರು
ಗಣಿಬಾಧಿತ ವ್ಯಾಪ್ತಿಯಲ್ಲಿ ಬರುವ ತಾಲೂಕುಗಳ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಮಕ್ಕಳಲ್ಲಿರುವ ಅಪೌಷ್ಟಿಕತೆಯನ್ನು ತಡೆಯುವ ಸಲುವಾಗಿ ಸರ್ಕಾರ ವಿಶೇಷ ಪೌಷ್ಟಿಕ ಆಹಾರ ವಿತರಣೆ ಮಾಡುತ್ತಿದೆ ಎಂದು ತಾಲೂಕಿನ ಕರಡಿ ಗ್ರಾಪಂ ಸದಸ್ಯ ಕೆ.ಆರ್. ದೇವರಾಜು ತಿಳಿಸಿದರು. ತಾಲೂಕಿನ ಗಣಿಬಾಧಿತ ಪ್ರದೇಶವಾದ ಕರಡಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಪೌಷ್ಟಿಕ ಆಹಾರ ವಿತರಣೆ ಮಾಡುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಗಣಿಬಾಧಿತ ಪ್ರದೇಶದ 1ರಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಅಪೌಷ್ಟಿಕತೆ, ರಕ್ತಹೀನತೆ ಮತ್ತು ಬಹು ಪೋಷಕಾಂಶಗಳ ನ್ಯೂನ್ಯತೆಗಳಿಂದ ಉಂಟಾಗುತ್ತಿರುವ ಅನಾರೋಗ್ಯಕರ ಪರಿಸ್ಥಿತಿಯನ್ನು ನಿವಾರಿಸಲು ಈ ಯೋಜನೆ ತರಲಾಗಿದೆ. ವಿದ್ಯಾರ್ಥಿಗಳಿಗೆ ಆರೋಗ್ಯ ಮತ್ತು ಬೆಳವಣಿಗೆಯ ಗುಣಮಟ್ಟವನ್ನು ಸುಧಾರಿಸಿ ಶೈಕ್ಷಣಿಕವಾಗಿ ಅಭಿವೃದ್ದಿ ಹೊಂದಲು ಪೂರಕ ಪೌಷ್ಟಿಕ ಆಹಾರವನ್ನು ಒದಗಿಸುವ ಯೋಜನೆ ಇದಾಗಿದೆ ಎಂದರು. ಈ ಸಂದರ್ಭದಲ್ಲಿ ಮುಖ್ಯ ಶಿಕ್ಷಕಿ ಲಲಿತಮ್ಮ, ಸಹ ಶಿಕ್ಷಕಿ ಲಕ್ಷ್ಮೀನರಸಮ್ಮ ಮತ್ತಿತರರಿದ್ದರು.;Resize=(128,128))
;Resize=(128,128))