ಕಡೂರು ವಿದ್ಯಾರ್ಥಿಗಳು ಕಲಿಕೆಯಲ್ಲಿ ವಿಧೇಯತೆ ಬೆಳೆಸಿಕೊಂಡರೆ ಮಾತ್ರ ಭವಿಷ್ಯದಲ್ಲಿ ಉತ್ತಮ ಪ್ರಜೆಗಳಾಗಿ ಹೊರಹೊಮ್ಮುವುದು ಸಾಧ್ಯ ಎಂದು ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕಿ ಮಂಜುಳಾ ಅಭಿಪ್ರಾಯಪಟ್ಟರು.
-ಟೈಮ್ಸ್ ಪಿಯು ಕಾಲೇಜಿನ ಪ್ರಾರಂಭೋತ್ಸವ ಉದ್ಘಾಟನೆ
-----ಕನ್ನಡಪ್ರಭ ವಾರ್ತೆ ಕಡೂರು
ವಿದ್ಯಾರ್ಥಿಗಳು ಕಲಿಕೆಯಲ್ಲಿ ವಿಧೇಯತೆ ಬೆಳೆಸಿಕೊಂಡರೆ ಮಾತ್ರ ಭವಿಷ್ಯದಲ್ಲಿ ಉತ್ತಮ ಪ್ರಜೆಗಳಾಗಿ ಹೊರಹೊಮ್ಮುವುದು ಸಾಧ್ಯ ಎಂದು ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕಿ ಮಂಜುಳಾ ಅಭಿಪ್ರಾಯಪಟ್ಟರು.ಕಡೂರು ಪಟ್ಟಣದ ಯು.ಬಿ.ರಸ್ತೆಯಲ್ಲಿರುವ ಟೈಮ್ಸ್ ಪಿಯು ಕಾಲೇಜಿನಲ್ಲಿ ಬುಧವಾರ ನಡೆದ ಕಾಲೇಜಿನ ಪ್ರಾರಂಭೋತ್ಸವದ ಸ್ವಾಗತ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳು ತಮ್ಮ ಬೆಳವಣಿಗೆಗಾಗಿ ಮೊದಲು ಶಿಸ್ತಿಗೆ ಹೆಚ್ಚು ಆದ್ಯತೆ ನೀಡಬೇಕು. ಸಾಕಷ್ಟು ಶ್ರಮ ವಹಿಸಿ ಪೋಷಕರು ತಮ್ಮ ಮಕ್ಕಳನ್ನು ಗುಣಮಟ್ಟದ ಶಿಕ್ಷಣ ದೊರೆಯುವ ಕಾಲೇಜುಗಳಿಗೆ ದಾಖಲುಗೊಳಿಸುತ್ತಾರೆ. ಇದಕ್ಕೆ ಪ್ರತಿಯಾಗಿ ವಿದ್ಯಾರ್ಥಿಗಳು ಉತ್ತಮ ಫಲಿತಾಂಶ ಪಡೆದು ಕಾಲೇಜು, ಪೋಷಕರಿಗೆ ಕೀರ್ತಿ ತರಬೇಕು ಎಂದು ಹೇಳಿದರು.
ಇತ್ತೀಚೆಗಿನ ದಿನಗಳಲ್ಲಿ ನೀಟ್ ನಂತಹ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಬಹುತೇಕ ವಿದ್ಯಾರ್ಥಿಗಳು ಉದಾಸೀನತೆ ತೋರುತ್ತಿದ್ದು, ಕಠಿಣ ಅಭ್ಯಾಸ ಮಾಡಿದಾಗ ಸ್ಪರ್ಧಾತ್ಮಕ ಪರೀಕ್ಷೆಗಳು ಸುಲಭವಾಗಲಿದೆ. ಗುಣಮಟ್ಟದ ಶಿಕ್ಷಣ ನೀಡುವ ಉತ್ಸಾಹದಲ್ಲಿ ಕಾಲೇಜಿನ ನೂತನ ಆಡಳಿತ ಮಂಡಳಿಯು ಇಲಾಖೆಯ ನಿಯಮಾನುಸಾರ ಮಕ್ಕಳ ಶೈಕ್ಷಣಿಕ ಕಾಳಜಿಗೆ ಒತ್ತುಕೊಟ್ಟು ಕಾರ್ಯನಿರ್ವಹಿಸುವುದು ಮುಖ್ಯ ಎಂದರು.ಪುರಸಭೆಯ ಮಾಜಿ ಅಧ್ಯಕ್ಷ ಭಂಡಾರಿ ಶ್ರೀನಿವಾಸ್ ಮಾತನಾಡಿ, ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ದೊರಕಿಸಿಕೊಡುವಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳ ಪಾತ್ರವೂ ಬಹಳ ದೊಡ್ಡದು. ದುಬಾರಿ ಶುಲ್ಕ ವಿಧಿಸುವ ಕಾಲೇಜುಗಳ ನಡುವೆ ಕೇವಲ ಶೈಕ್ಷಣಿಕ ಉದ್ದೇಶದಿಂದ ಆರಂಭವಾಗುವ ಸಂಸ್ಥೆಗಳು ಅಪರೂಪ. ಈ ನಿಟ್ಟಿನಲ್ಲಿ ಟೈಮ್ಸ್ ಪಿಯು ಕಾಲೇಜು ಕಡೂರಿನಲ್ಲಿಯೂ ಪದವಿ ಪೂರ್ವ ಕಾಲೇಜು ಆರಂಭಿಸಿರುವುದು ಸಂತಸ ತಂದಿದೆ. ಈ ಸಂಸ್ಥೆಯ ಉದ್ದೇಶ ಸಾರ್ಥಕವಾಗಲಿ ಎಂದರು.
ಪ್ರಾಂಶುಪಾಲರ ಸಂಘದ ಜಿಲ್ಲಾಧ್ಯಕ್ಷ ಎಚ್.ಎಂ.ನಾಗರಾಜ್ ರಾವ್ ಮಾತನಾಡಿ, ವಿದ್ಯಾರ್ಥಿಗಳು ಪಾಠದ ಜತೆಯಲ್ಲೆ ನೈತಿಕ ಶಿಕ್ಷಣ ಕಲಿತಾಗ ಮಾತ್ರ ಸಮಾಜದಲ್ಲಿ ಗೌರವಯುತ ಸ್ಥಾನ ದೊರೆಯುತ್ತದೆ. ಗುರುವಾದವರು ವಿದ್ಯಾರ್ಥಿಗಳಿಗೆ ತಾಳ್ಮೆ, ವಿಶಾಲ ಮನೋಭಾವನೆ, ಕ್ರಿಯಾಶೀಲತೆ, ಕರ್ತವ್ಯ ನಿಷ್ಠೆ ಹಾಗೂ ಗುರಿ ಎಂಬ ಪಂಚ ತತ್ವಗಳನ್ನು ಬೋಧೀಸಬೇಕು. ಶೈಕ್ಷಣಿಕವಾಗಿ ಪಾಠಗಳನ್ನು ಹೇಳಿ ಕೊಡುವ ಜತೆಗೆ ಸಮಾಜದಲ್ಲಿ ಗೌರವ ಪಡೆಯಲು ಪೂರಕವಾಗಿ ನೈತಿಕ ಮೌಲ್ಯಗಳನ್ನು ತಿಳಿಸಿ ವಿದ್ಯಾರ್ಥಿಗಳ ಭವಿಷ್ಯಕ್ಕೆ ಉತ್ತಮ ಅಡಿಪಾಯ ಹಾಕಿಕೊಡಬೇಕು ಎಂದರು.ಕಾಲೇಜು ಸಂಸ್ಥಾಪಕ ಗಂಗಾಧರ್, ಸಿವಿಲ್ ಇಂಜಿನಿಯರ್ ಸಂಘದ ಅಧ್ಯಕ್ಷ ಸಿ.ಎಚ್.ಪ್ರೇಮ್ ಕುಮಾರ್, ಜಿಲ್ಲಾ ಖಜಾನಾಧಿಕಾರಿ ಓಂಕಾರಪ್ಪ, ಟೈಮ್ಸ್ ಕಾಲೇಜು ಪ್ರಾಂಶುಪಾಲ ನಾಗೇಶ್, ವಕೀಲ ರಾಜೇಶ್ ಹಾಗೂ ವಿದ್ಯಾರ್ಥಿಗಳು, ಪೋಷಕರು ಇದ್ದರು.
--ಕೋಟ್---ಮಕ್ಕಳ ಶೈಕ್ಷಣಿಕ ಬೆಳವಣಿಗೆ ಜೊತೆಗೆ ಸಂಸ್ಕಾರ ಶಿಕ್ಷಣ ಅಗತ್ಯವಾಗಿದೆ. ಅಂಕಗಳ ಓಟದ ನಡುವೆ ಸಮಾಜಮುಖಿ ಚಿಂತನೆಗಳಿಗೆ ಹೆಚ್ಚು ಒತ್ತು ಕೊಟ್ಟಾಗ ಮಕ್ಕಳ ಪ್ರಬುದ್ದತೆ ಹೆಚ್ಚಾಗಲಿದೆ. ಈಗಾಗಲೇ ಉತ್ತಮ ಉಪನ್ಯಾಸಕರ ತಂಡದೊಂದಿಗೆ ಕಾಲೇಜು ಸ್ಥಾಪಿಸಲಾಗಿದೆ. ಮಕ್ಕಳ ಭವಿಷ್ಯದ ಗುರಿಗೆ ಹೆಚ್ಚು ಪ್ರಾಮುಖ್ಯತೆ ನೀಡಲಾಗುತ್ತದೆ.
-ಗಂಗಾಧರ್, ಸಂಸ್ಥಾಪಕ, ಟೈಮ್ಸ್ ಪಿಯು ಕಾಲೇಜುಫೋಟೊ----
5ಕೆಕೆಡಿಯು1.ಕಡೂರಿನ ಟೈಮ್ಸ್ ಪಿಯು ಕಾಲೇಜಿನ ಪ್ರಾರಂಭೋತ್ಸವದ ಕಾರ್ಯಕ್ರಮವನ್ನು ಪುರಸಭೆ ಮಾಜಿ ಅಧ್ಯಕ್ಷ ಭಂಡಾರಿ ಶ್ರೀನಿವಾಸ್ ಉದ್ಘಾಟಿಸಿದರು. ಎಚ್.ಎಂ.ನಾಗರಾಜ್ ರಾವ್, ಗಂಗಾಧರ್, ಸಿ.ಎಚ್.ಪ್ರೇಮ್ ಕುಮಾರ್ ಇತರರು ಉಪಸ್ಥಿತರಿದ್ದರು.