ರಸ್ತೆ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಿ: ಜಿ.ಕೆ.ಮಿಥುನ್‌ಕುಮಾರ್

| Published : Jul 17 2025, 12:30 AM IST

ರಸ್ತೆ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಿ: ಜಿ.ಕೆ.ಮಿಥುನ್‌ಕುಮಾರ್
Share this Article
  • FB
  • TW
  • Linkdin
  • Email

ಸಾರಾಂಶ

ರಸ್ತೆ ನಿಯಮಗಳನ್ನು ಪ್ರತಿಯೊಬ್ಬರೂ ಕಡ್ಡಾಯವಾಗಿ ಪಾಲಿಸಲೇಬೇಕು ಆದ್ದರಿಂದ ರಸ್ತೆ ಅಪಘಾತಗಳನ್ನು ತಪ್ಪಿಸಬಹುದು ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್‌ಕುಮಾರ್ ಹೇಳಿದರು.

ಶಿವಮೊಗ್ಗ: ರಸ್ತೆ ನಿಯಮಗಳನ್ನು ಪ್ರತಿಯೊಬ್ಬರೂ ಕಡ್ಡಾಯವಾಗಿ ಪಾಲಿಸಲೇಬೇಕು ಆದ್ದರಿಂದ ರಸ್ತೆ ಅಪಘಾತಗಳನ್ನು ತಪ್ಪಿಸಬಹುದು ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್‌ಕುಮಾರ್ ಹೇಳಿದರು.

ನಗರದ ಉಷಾ ನರ್ಸಿಂಗ್ ಹೋಮ್ ಬಳಿಯ ಅಕ್ಕಮಹಾದೇವಿ ವೃತ್ತದಲ್ಲಿ ಸಿಗ್ನಲ್ ಲೈಟ್ ಅಳವಡಿಕೆಗೆ ಬುಧವಾರ ಚಾಲನೆ ನೀಡಿ ಅವರು ಮಾತನಾಡಿದರು.

ಈಗಾಗಲೇ ರಸ್ತೆ ಅಪಘಾತದಿಂದ ಸಾಕಷ್ಟು ಜನ ರಸ್ತೆಯಲ್ಲಿ ಪ್ರಾಣವನ್ನು ಬಿಡುತ್ತಿದ್ದಾರೆ. ವೇಗವಾಗಿ ಚಲಿಸುವುದು. ಹೆಲ್ಮೆಟ್ ಹಾಕದೇ ಇರುವುದು. ಸೀಟ್ ಬೆಲ್ಟ್ ಧರಿಸದೆ ಇರುವುದು ಮತ್ತು ಮದ್ಯಪಾನ ಮಾಡಿ ವಾಹನ ಚಲಾಯಿಸುವುದು ಇದರಿಂದ ಅಪಘಾತಗಳ ಪ್ರಮಾಣ ಹೆಚ್ಚುತ್ತಿವೆ. ಜೀವಕ್ಕಿಂತ ಅಮೂಲ್ಯವಾದ ವಸ್ತು ಬೇರೆ ಇಲ್ಲ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ರಸ್ತೆ ನಿಯಮಗಳನ್ನು ಪಾಲನೆ ಮಾಡಲೇಬೇಕು ಎಂದು ಸಲಹೆ ನೀಡಿದರು.

ಮಹಾನಗರ ಪಾಲಿಕೆ ಮಾಜಿ ಸದಸ್ಯ ಎಚ್‌.ಸಿ.ಯೋಗೇಶ್‌ ಮಾತನಾಡಿ, ಪೊಲೀಸ್‌ ಇಲಾಖೆ ಸಿಬ್ಬಂದಿಗಳಿಗೆ ಸ್ವತಂತ್ರವಾಗಿ ಕಾರ್ಯನಿರ್ವಹಿಸಲು ಸಂಪೂರ್ಣ ಬೆಂಬಲ ನೀಡಿದ್ದು, ಇದರಿಂದ ಬಹಳ ಉತ್ತಮವಾದ ಕಾರ್ಯ ನಡೆಯುತ್ತಿದೆ ಎಂದು ಶ್ಲಾಘಿಸಿದರು.

ಬಳ್ಳೇಕೆರೆ ಸಂತೋಷ್‌, ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಜಿ.ವಿಜಯಕುಮಾರ್, ಸಂಚಾರಿವೃತ್ತ ನಿರೀಕ್ಷಕರಾದ ದೇವರಾಜ್. ತಿರುಮಲೇಶ್. ನವೀನ್ ಮಠಪತಿ ಹಾಗೂ ಪತ್ರಕರ್ತ ಕೆ.ಆರ್. ಸೋಮನಾಥ್. ಪಾಲಿಕೆ ಮಾಜಿ ಸದಸ್ಯ ವಿಶ್ವಾಸ, ದಿನೇಶ್ ಶೆಟ್, ಮಲ್ಲಿಕಾರ್ಜುನ ಸ್ವಾಮಿ, ರಾಜೇಂದ್ರ, ಹರೀಶ್, ಗಿರಿರಾಜ್, ಗೋಪಾಲ್‌ ಇತರಿದ್ದರು.