ವಾಚರ್‌ ನೇಮಕಾತಿಯಲ್ಲಿ ಅಕ್ರಮ ಆರೋಪ ಅಭ್ಯರ್ಥಿಗಳ ಆಕ್ಷೇಪ

| Published : Mar 02 2024, 01:48 AM IST

ವಾಚರ್‌ ನೇಮಕಾತಿಯಲ್ಲಿ ಅಕ್ರಮ ಆರೋಪ ಅಭ್ಯರ್ಥಿಗಳ ಆಕ್ಷೇಪ
Share this Article
  • FB
  • TW
  • Linkdin
  • Email

ಸಾರಾಂಶ

ವಾಚರ್ ನೇಮಕಾತಿಯಲ್ಲಿ ಅಕ್ರಮ ಎಸಗಲಾಗಿದೆ ಎಂದು ಆರೋಪಿಸಿ ಅಭ್ಯರ್ಥಿಗಳು ನಗರದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿ ಮುಂಭಾಗ ಜಮಾಯಿಸಿದ ಘಟನೆ ಶುಕ್ರವಾರ ನಡೆಯಿತು.

ಕನ್ನಡಪ್ರಭ ವಾರ್ತೆ ಚಾಮರಾಜನಗರ ವಾಚರ್ ನೇಮಕಾತಿಯಲ್ಲಿ ಅಕ್ರಮ ಎಸಗಲಾಗಿದೆ ಎಂದು ಆರೋಪಿಸಿ ಅಭ್ಯರ್ಥಿಗಳು ನಗರದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿ ಮುಂಭಾಗ ಜಮಾಯಿಸಿದ ಘಟನೆ ಶುಕ್ರವಾರ ನಡೆಯಿತು. ನಗರದ ಸತ್ತಿ ರಸ್ತೆಯಲ್ಲಿರುವ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿ ಮುಂಭಾಗ ಜಮಾಯಿಸಿದ ನೂರಾರು ಅಭ್ಯರ್ಥಿಗಳು ನೇಮಕಾತಿಯಲ್ಲಿ ಅಧಿಕಾರಿಗಳು ಅಕ್ರಮ ಎಸಗಿದ್ದು ಅವರಿಗೆ ಬೇಕಾದವರಿಗೆ ಅವಕಾಶ ಕಲ್ಪಿಸಲಾಗುತ್ತಿದೆ ಎಂದು ದೂರಿದರು. ದೈಹಿಕವಾಗಿ ಅರ್ಹರಾದವರಿಗೆ ವೈದ್ಯಕೀಯ ಪರೀಕ್ಷೆಗೆ ಅವಕಾಶ ಕಲ್ಪಿಸಿಲ್ಲ. ಈ ಸಂಬಂಧ ಅಧಿಕಾರಿಗಳನ್ನು ಪ್ರಶ್ನಿಸಿದರೆ ನ್ಯಾಯಾಲಯಕ್ಕೆ ಹೋಗಿ ಎಂದು ಹೇಳುತ್ತಾರೆ ಎಂದು ಆರೋಪಿಸಿದರು. ಅವರಿಗೆ ಯಾರು ಬೇಕು ಅವರನ್ನು ತೆಗೆದುಕೊಳ್ಳುತ್ತಿದ್ದಾರೆ. ವೈದ್ಯಕೀಯ ಪರೀಕ್ಷೆ, ತೂಕ, ಎತ್ತರ ಪರೀಕ್ಷೆ ಇಲ್ಲ. ಓಟ ಸ್ಪರ್ಧೆ ಮಾತ್ರ ಮಾಡಿಸಲಾಗಿದೆ. ನಿಯಮಗಳ ಪ್ರಕಾರ ನೇಮಕಾತಿ ಆಯ್ಕೆ ನಡೆಯುತ್ತಿಲ್ಲ. ಬೇಕಾದವರಿಗೆ ಪೋನ್‌ ಮಾಡಿ ಕರೆಸಿದ್ದಾರೆ. ರಾಜ್ಯದ ಹಲವು ಜಿಲ್ಲೆಗಳಿಂದ ಅರ್ಜಿ ಸ್ಪರ್ಧೆಯನ್ನು ಮಾತ್ರ ಮಾಡಿಸಲಾಗಿದೆ. ನಿಯಮಗಳ ಪ್ರಕಾರ ಸಲ್ಲಿಸಿದ್ದ ಅಭ್ಯರ್ಥಿಗಳು ಬಂದಿದ್ದು ಇಲ್ಲಿನ ಅಧಿಕಾರಿಗಳು ಸರಿಯಾಗಿ ಸ್ಪದಿಸುತ್ತಿಲ್ಲ. ಅಕ್ರಮವಾಗಿ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಆದ್ದರಿಂದ ಮರು ವೈದ್ಯಕೀಯ ಪರೀಕ್ಷೆ ಆಗಬೇಕು ಎಂದು ಆಗ್ರಹಿಸಿದರು.

ಈ ಸಂಬಂಧ ಮಾಧ್ಯಮದವರೊಂದಿಗೆ ಪ್ರತಿಕ್ರಿಯಿಸಿದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಟಿ.ಹೀರಲಾಲ್, ವಾಚರ್ ನೇಮಕಾತಿಯಲ್ಲಿ ಯಾವುದೇ ಅಕ್ರಮ ನಡೆದಿಲ್ಲ. ಸರ್ಕಾರದ ಅಧಿಸೂಚನೆಯ ಚಾಮರಾಜನಗರ ವೃತ್ತದ ಅರಣ್ಯ ಇಲಾಖೆಯಲ್ಲಿ 27 ವಾಚರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿತ್ತು. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಪಡೆದಿರುವ ಅಂಕದ ಆಧಾರದ ಮೇಲೆ ನೇಮಕಾತಿ ನಡೆಯುತ್ತದೆ. ಇಲ್ಲಿ ಯಾವುದೇ ಪರೀಕ್ಷೆ ಇರುವುದಿಲ್ಲ ಹುದ್ದೆಗಳಿಗೆ 16 ಸಾವಿರ ಅರ್ಜಿ ಬಂದಿತ್ತು. ಇದರಲ್ಲಿ 14 ಸಾವಿರ ಅರ್ಜಿಗಳನ್ನು ಪರಿಶೀಲನೆ ಮಾಡಿ ಹೆಚ್ಚಿನ ಅಂಕ ಪಡೆದಿರುವವರನ್ನು 1:20 ಮಾದರಿಯಲ್ಲಿ ವೈದ್ಯಕೀಯ ಪರೀಕ್ಷೆಗೆ ಆಯ್ಕೆ ಮಾಡಲಾಗಿತ್ತು. ಅದರಂತೆ 1:20 ಮಾದರಿಯಲ್ಲಿ 540 ಜನರನ್ನು ಮಾಡಲಾಗಿತ್ತು. ಇದರಲ್ಲಿ 368 ಜನರು ಬಂದಿದ್ದು ಇವರಲ್ಲಿ 258 ಜನರು ಅರ್ಹರಾಗಿ ವೈದ್ಯಕೀಯ ಪರೀಕ್ಷೆಗೆ ಒಳಪಟ್ಟಿದ್ದಾರೆ. ಹಿರಿಯ ಅಧಿಕಾರಿಗಳ ನಿರ್ದೇಶನದ ಮೇರೆಗೆ 1:3 ಮಾದರಿಯಲ್ಲಿ 81 ಜನರನ್ನು ಆಯ್ಕೆ ಮಾಡಲಾಗಿದ್ದು ಇವರಿಗೆ 3 ದಿನಗಳ ಕಾಲ ವೈದ್ಯಕೀಯ ಪರೀಕ್ಷೆ ನಡೆಸಲಾಗುತ್ತಿದೆ. ಇವರಲ್ಲಿ ಗೈರಾದವರಿಗೆ ಮತ್ತೊಮ್ಮೆ ಅವಕಾಶ ಕಲ್ಪಿಸಲಾಗುವುದು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಮಲೆಮಹದೇಶ್ವರಸ್ವಾಮಿ ವನ್ಯ ಜೀವಿ ವಿಭಾಗದ ಡಿಎಫ್‌ಒ ಡಾ.ಸಂತೋಷ್ ಕುಮಾರ್. ಬಿಆರ್‌ಟಿ ಹುಲಿ ಯೋಜನೆ ನಿರ್ದೇಶಕಿ ದೀಪ್ ಜೆ.ಕಂಟ್ರಾಕ್ಟರ್ ಇದ್ದರು.ಅರ್ಹತೆ ಆಧಾರದ ಮೇಲೆ 1:20 ಅನುಪಾತದಲ್ಲಿ ದೈಹಿಕ ಪರೀಕ್ಷೆ ನಡೆಸಲಾಗಿದೆ. ದೈಹಿಕ ಪರೀಕ್ಷೆಯಲ್ಲಿ ಪಾಸಾದವರಿಗೆ 1:3 ಅನುಪಾತದಲ್ಲಿ ಮೆಡಿಕಲ್ ಟೆಸ್ಟ್ ಮಾಡಿಸಲಾಗುತ್ತಿದೆ. ಯಾವುದೇ ಅಕ್ರಮ ನಡೆದಿಲ್ಲ. ಎಲ್ಲವೂ ಪಾರದರ್ಶಕವಾಗಿ ನಡೆಯುತ್ತಿದೆ.ಟಿ. ಹೀರಾಲಾಲ್‌, ಮುಖ್ಯ ಅರಣ್ಯಸಂರಕ್ಷಣಾಧಿಕಾರಿ