ಉಡುಪಿ ಡಿಸಿ, ಎಸ್ಪಿಯಿಂದ ಇಂದ್ರಾಳಿ ರೈಲ್ವೆ ಸೇತುವೆ ಕಾಮಗಾರಿ ವೀಕ್ಷಣೆ

| Published : Jan 19 2025, 02:19 AM IST

ಉಡುಪಿ ಡಿಸಿ, ಎಸ್ಪಿಯಿಂದ ಇಂದ್ರಾಳಿ ರೈಲ್ವೆ ಸೇತುವೆ ಕಾಮಗಾರಿ ವೀಕ್ಷಣೆ
Share this Article
  • FB
  • TW
  • Linkdin
  • Email

ಸಾರಾಂಶ

ಅತ್ಯಂತ ನಿಧಾನವಾಗಿ ಸಾಗುತ್ತಿರುವ ಇಲ್ಲಿನ ರಾಷ್ಟ್ರೀಯ ಹೆದ್ದಾರಿ 169ಎ ಇದರ ಉಡುಪಿ ಹಾಗೂ ಮಣಿಪಾಲ್‌ ನಡುವೆ ಇಂದ್ರಾಳಿ ಸಮೀಪದ ರೈಲ್ವೇ ಮೇಲ್ಸೇತುವೆ ಕಾಮಗಾರಿ ಸ್ಥಳಕ್ಕೆ ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಶನಿವಾರ ಭೇಟಿ ನೀಡಿ, ಕಾಮಗಾರಿಯ ಪ್ರಗತಿಯನ್ನು ಪರಿಶೀಲಿಸಿದರು.

ಕನ್ನಡಪ್ರಭ ವಾರ್ತೆ ಉಡುಪಿ

ಅತ್ಯಂತ ನಿಧಾನವಾಗಿ ಸಾಗುತ್ತಿರುವ ಇಲ್ಲಿನ ರಾಷ್ಟ್ರೀಯ ಹೆದ್ದಾರಿ 169ಎ ಇದರ ಉಡುಪಿ ಹಾಗೂ ಮಣಿಪಾಲ್‌ ನಡುವೆ ಇಂದ್ರಾಳಿ ಸಮೀಪದ ರೈಲ್ವೇ ಮೇಲ್ಸೇತುವೆ ಕಾಮಗಾರಿ ಸ್ಥಳಕ್ಕೆ ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಶನಿವಾರ ಭೇಟಿ ನೀಡಿ, ಕಾಮಗಾರಿಯ ಪ್ರಗತಿಯನ್ನು ಪರಿಶೀಲಿಸಿದರು.ಕಾಮಗಾರಿಯಲ್ಲಾಗುತ್ತಿರುವ ವಿಳಂಬಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಅವರು, ರೈಲ್ವೇ ಮೇಲ್ಸೇತುವೆಯಾಗಿ ಕಬ್ಬಿಣದ ಗರ್ಡರ್ ನಿರ್ಮಾಣದ ವೆಲ್ಡಿಂಗ್ ಕಾಮಗಾರಿಯ ವೇಗವು ನಿರೀಕ್ಷಿತ ಮಟ್ಟದಲ್ಲಿ ಆಗದೇ ಇರುವುದಕ್ಕೆ ಗುತ್ತಿಗೆದಾರರನ್ನು ತರಾಟೆಗೆ ತೆಗೆದುಕೊಂಡರು. ಕಾಮಗಾರಿಯ ವೇಗವನ್ನು ಮತ್ತಷ್ಟು ಹೆಚ್ಚಿಸಲು ಹೆಚ್ಚಿನ ಕಾರ್ಮಿಕರನ್ನು ನಿಯೋಜಿಸಿ, ಕಾಮಗಾರಿಗೆ ವೇಗ ನೀಡವಂತೆ ಗುತ್ತಿಗೆದಾರರಿಗೆ ಸೂಚಿಸಿದರು.ಕಬ್ಬಿಣದ ಗರ್ಡರ್ ನಿರ್ಮಾಣದ ಕಾಮಗಾರಿಯ ನಂತರ, ಅದನ್ನು ರೈಲ್ವೇ ಹಳಿಗಳ ಮೇಲ್ಭಾಗದಲ್ಲಿ ಸೇತುವೆಯಾಗಿ ನಿರ್ಮಿಸಲು ಅಗತ್ಯವಿರುವ ಸಿವಿಲ್ ಕಾಮಗಾರಿಗಳನ್ನು ಸಹ ತ್ವರಿತವಾಗಿ ಕೈಗೊಳ್ಳುವಂತೆ ಅವರು ಗುತ್ತಿಗೆದಾರರಿಗೆ ಸೂಚನೆ ನೀಡಿದರು.ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ., ಕೊಂಕಣ ರೈಲ್ವೆಯ ಸೀನೀಯರ್‌ ಎಂಜಿನಿಯರ್ ಗೋಪಾಲ ಕೃಷ್ಣ, ಗುತ್ತಿಗೆದಾರರು, ಸಾರ್ವಜನಿಕರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.