ಅಭಿವೃದ್ಧಿ ಕಾರ್ಯಗಳಿಗೆ ಬಿಜೆಪಿ ಸದಸ್ಯರ ಅಡ್ಡಿ

| Published : Feb 01 2025, 12:02 AM IST

ಅಭಿವೃದ್ಧಿ ಕಾರ್ಯಗಳಿಗೆ ಬಿಜೆಪಿ ಸದಸ್ಯರ ಅಡ್ಡಿ
Share this Article
  • FB
  • TW
  • Linkdin
  • Email

ಸಾರಾಂಶ

ತೀರ್ಥಹಳ್ಳಿ: ಪಪಂಯಲ್ಲಿ ಕಳೆದ ಮೂರು ವರ್ಷಗಳ ಅವಧಿಯಲ್ಲಿ ಪಕ್ಷ ರಾಜಕಾರಣಕ್ಕೆ ಅವಕಾಶವಾಗದಂತೆ ಪಾರದರ್ಶಕವಾಗಿ ಕಾರ್ಯನಿರ್ವಹಿಸುತ್ತಿದ್ದರೂ ಪ್ರತಿ ಪಕ್ಷದ ಬಿಜೆಪಿ ಸದಸ್ಯರು ಅಡ್ಡಗಾಲು ಹಾಕುವುದಲ್ಲದೇ ಅಧಿಕಾರಿಗಳನ್ನು ಬೆದರಿಸುವ ಮೂಲಕ ಅಭಿವೃದ್ಧಿ ಕಾರ್ಯಗಳಿಗೂ ಅಡ್ಡಿ ಪಡಿಸುತ್ತಿದ್ದಾರೆ ಎಂದು ಪಪಂ ಅಧ್ಯಕ್ಷ ರಹಮತ್ ಉಲ್ಲಾ ಅಸಾದಿ ಗಂಭೀರವಾಗಿ ಆರೋಪಿಸಿದರು.

ತೀರ್ಥಹಳ್ಳಿ: ಪಪಂಯಲ್ಲಿ ಕಳೆದ ಮೂರು ವರ್ಷಗಳ ಅವಧಿಯಲ್ಲಿ ಪಕ್ಷ ರಾಜಕಾರಣಕ್ಕೆ ಅವಕಾಶವಾಗದಂತೆ ಪಾರದರ್ಶಕವಾಗಿ ಕಾರ್ಯನಿರ್ವಹಿಸುತ್ತಿದ್ದರೂ ಪ್ರತಿ ಪಕ್ಷದ ಬಿಜೆಪಿ ಸದಸ್ಯರು ಅಡ್ಡಗಾಲು ಹಾಕುವುದಲ್ಲದೇ ಅಧಿಕಾರಿಗಳನ್ನು ಬೆದರಿಸುವ ಮೂಲಕ ಅಭಿವೃದ್ಧಿ ಕಾರ್ಯಗಳಿಗೂ ಅಡ್ಡಿ ಪಡಿಸುತ್ತಿದ್ದಾರೆ ಎಂದು ಪಪಂ ಅಧ್ಯಕ್ಷ ರಹಮತ್ ಉಲ್ಲಾ ಅಸಾದಿ ಗಂಭೀರವಾಗಿ ಆರೋಪಿಸಿದರು.ಗುರುವಾರ ಪಟ್ಟಣ ಪಂಚಾಯ್ತಿ ಕಚೇರಿಯಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪಟ್ಟಣದ ಆಡಳಿತದ ಎಲ್ಲಾ ವಿಚಾರಗಳಲ್ಲೂ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಂಡಿದ್ದು ಮಾತ್ರವಲ್ಲದೆ ಪಕ್ಷ ರಾಜಕಾರಣಕ್ಕೆ ಅವಕಾಶವಾಗದಂತೆ ಪಾರದರ್ಶಕವಾಗಿ ಜನಮೆಚ್ಚುವಂತೆ ಕಾರ್ಯನಿರ್ವಹಿಸಿದ್ದೇವೆ. ನಾವು ಜನಪರ ಕಾಳಜಿಯಿಂದ ಆಡಳಿತ ನಡೆಸುವುದನ್ನು ಸಹಿಸದೆ ರಾಜಕೀಯ ದುರುದ್ದೇಶದಿಂದ ಬಿಜೆಪಿ ಸದಸ್ಯರು ಈಚೆಗೆ ಮಾಡಿರುವ ಪ್ರತಿಭಟನೆ ಮತ್ತು ಆಧಾರರಹಿತ ಆರೋಪಗಳು ಜನಹಿತ ಕಾರ್ಯಗಳಿಗೆ ಅಡ್ಡಿಯಾಗಿದ್ದು ಜನವಿರೋಧಿಯೂ ಆಗಿದೆ ಎಂದರು. ಅತ್ಯಂತ ತುರ್ತು ಕಾರ್ಯಗಳನ್ನು ಹೊರತು ಪಡಿಸಿ ಎಲ್ಲಿಯೂ ನಿಯಮವನ್ನು ಉಲ್ಲಂಘಿಸಿಲ್ಲ. ಬಿಜೆಪಿಯವರು ಅಧಿಕಾರದಲ್ಲಿದ್ದ 24 ವರ್ಷಗಳ ಅವಧಿಯಲ್ಲಿ ಮಾಡಿರುವ ಕೆಲಸಕ್ಕಿಂತಲೂ ಉತ್ತಮವಾದ ಕೆಲಸ ಕಳೆದ ಮೂರು ವರ್ಷಗಳಲ್ಲಿ ಆಗಿದೆ. ಮಳೆಗಾಲ ಮತ್ತಿತರ ಸಂಧರ್ಭಗಳಲ್ಲಿ ಪಟ್ಟಣದ ಜನರ ಹಿತದೃಷ್ಟಿಯಿಂದ ಅತೀ ತುರ್ತಾದ ಕಾಮಗಾರಿಗಳನ್ನು ಹೊರತು ಪಡಿಸಿ ಯಾವುದೇ ಕೆಲಸ ಮಾಡಿಲ್ಲಾ. ಟೆಂಡರ್ ಕರೆಯದೇ ಕೆಲಸ ಮಾಡಿದ ಬಗ್ಗೆ ನಂತರದಲ್ಲಿ ಕೌನ್ಸಿಲ್ ಒಪ್ಪಿಗೆ ಪಡೆದಿದ್ದೇವೆ ಎಂದ ಅವರು, ಕಾಂಗ್ರೆಸ್ ಪಕ್ಷದ ಸಾಧನೆಯನ್ನು ಸಹಿಸದೇ ಬಿಜೆಪಿ ಸದಸ್ಯರು ಮಾಡಿರುವ ಪ್ರತಿಭಟನೆ ಹಾಸ್ಯಾಸ್ಪದವಾಗಿದೆ ಎಂದರು.

ನಮ್ಮ ಅವಧಿಯಲ್ಲಿ ಅಭಿವೃದ್ಧಿ ಕಾರ್ಯಗಳು ನಡೆಯಲೇಬಾರದು ಎಂಬ ಮನೋಭಾವವನ್ನು ಬಿಜೆಪಿ ಸದಸ್ಯರು ತಾಳಿದ್ದು ಇದೇ ಕಾರಣದಿಂದ ಅಧಿಕಾರಿಗಳು ಹಾಗೂ ಗುತ್ತಿಗೆದಾರರ ಮೇಲೂ ಒತ್ತಡ ತರುತ್ತಿದ್ದಾರೆ. ಈ ಬೆಳವಣಿಗೆ ಪಟ್ಟಣದ ಅಭಿವೃದ್ಧಿ ಕಾರ್ಯಗಳಿಗೆ ಮಾರಕವಾಗಿದೆ ಎಂದರು.ಸದಸ್ಯ ಬಿ.ಆರ್.ರಾಘವೇಂದ್ರ ಶೆಟ್ಟಿ ಮಾತನಾಡಿದರು.ಪಪಂ ಉಪಾಧ್ಯಕ್ಷೆ ಗೀತಾ ರಮೇಶ್ ಸ್ಥಾಯಿ ಸಮಿತಿ ಅಧ್ಯಕ್ಷ ಬಿ.ಗಣಪತಿ, ಸದಸ್ಯರುಗಳಾದ ಸುಶೀಲಾ ಶೆಟ್ಟಿ, ಶಬನಂ,ಜಯಪ್ರಕಾಶ್ ಶೆಟ್ಟಿ, ರತ್ನಾಕರ ಶೆಟ್ಟಿ,ಮಂಜುಳಾ ನಾಗೇಂದ್ರ, ವಿಲಿಯಂ ಮಾರ್ಟಿಸ್ ಹಾಗೂ ಡಾ.ಅನಿಲ್ ಇದ್ದರು.