ಅ. 5- 9, ರಾಜ್ಯ ಮಟ್ಟದ ಕಬ್ಸ್, ಬುಲ್ ಬುಲ್ಸ್ ಉತ್ಸವ : ಎ.ಎನ್‌. ಮಹೇಶ್‌

| Published : Sep 28 2024, 01:16 AM IST

ಅ. 5- 9, ರಾಜ್ಯ ಮಟ್ಟದ ಕಬ್ಸ್, ಬುಲ್ ಬುಲ್ಸ್ ಉತ್ಸವ : ಎ.ಎನ್‌. ಮಹೇಶ್‌
Share this Article
  • FB
  • TW
  • Linkdin
  • Email

ಸಾರಾಂಶ

ಚಿಕ್ಕಮಗಳೂರು, ರಾಜ್ಯ ಮಟ್ಟದ ಕಬ್ಸ್ ಮತ್ತು ಬುಲ್ ಬುಲ್ಸ್ ಉತ್ಸವ ಜಿಲ್ಲೆಯಲ್ಲಿ ಅ. 5 ರಿಂದ 9 ರವರೆಗೆ ನಡೆಯಲಿದೆ ಎಂದು ಭಾರತ ಸ್ಕೌಟ್ಸ್ ಆ್ಯಂಡ್‌ ಗೈಡ್ಸ್‌ನ ರಾಜ್ಯ ಉಪಾಧ್ಯಕ್ಷ ಎ.ಎನ್ ಮಹೇಶ್ ಹೇಳಿದರು.

ಜಿಲ್ಲೆಯಲ್ಲಿ ನಡೆದ ಪ್ರಥಮ ರಾಜ್ಯ ಜಾಂಬೂರಿಯ ಶತಮಾನೋತ್ಸವ

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು

ರಾಜ್ಯ ಮಟ್ಟದ ಕಬ್ಸ್ ಮತ್ತು ಬುಲ್ ಬುಲ್ಸ್ ಉತ್ಸವ ಜಿಲ್ಲೆಯಲ್ಲಿ ಅ. 5 ರಿಂದ 9 ರವರೆಗೆ ನಡೆಯಲಿದೆ ಎಂದು ಭಾರತ ಸ್ಕೌಟ್ಸ್ ಆ್ಯಂಡ್‌ ಗೈಡ್ಸ್‌ನ ರಾಜ್ಯ ಉಪಾಧ್ಯಕ್ಷ ಎ.ಎನ್ ಮಹೇಶ್ ಹೇಳಿದರು.ಚಿಕ್ಕಮಗಳೂರು ಪ್ರೆಸ್‌ ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜಿಲ್ಲೆಯಲ್ಲಿ ನಡೆದ ಪ್ರಥಮ ರಾಜ್ಯ ಜಾಂಬೂರಿಯ ಶತಮಾನೋತ್ಸವ ಆಚರಣೆ ಅಂಗವಾಗಿ ಚಿಕ್ಕಮಗಳೂರು ನಗರದ ಆದಿಚುಂಚನಗಿರಿ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆ ಆವರಣದಲ್ಲಿ ಆಯೋಜಿಸಿರುವ ಉತ್ಸವ 5 ದಿನಗಳ ಕಾಲ ನಡೆಯಲಿದ್ದು, ವಿವಿಧ ಜಿಲ್ಲೆಗಳಿಂದ 6 ರಿಂದ 10 ವರ್ಷದೊಳಗಿನ 1,500 ಕಬ್ಸ್ ಮತ್ತು ಬುಲ್ ಬುಲ್ಸ್ ಬಾಲಕ, ಬಾಲಕಿಯರು ಹಾಗೂ 300 ನಾಯಕರು ಆಗಮಿಸಲಿದ್ದಾರೆ ಎಂದರು.

ಮೇಳದಲ್ಲಿ ಭಾಗವಹಿಸುವ ಎಲ್ಲಾ ಮಕ್ಕಳಿಗೆ ಸಾಹಸಮಯ ಚಟುವಟಿಕೆಗಳು, ಹೊರ ಸಂಚಾರ, ಶೈಕ್ಷಣೀಯ ಸ್ಥಳಗಳ ಸಂದರ್ಶನ, ಸಾಂಸ್ಕೃತಿಕ ಕಾರ್ಯಕ್ರಮಗಳು, ವಿವಿಧ ಜಿಲ್ಲೆಗಳ ವಿಶಿಷ್ಟ ಜಾನಪದ ಕಲೆಗಳು, ಕರಕುಶಲ ವಸ್ತುಗಳ ತಯಾರಿಕೆ, ಶಿಭಿರಾಗ್ನಿ, ಪ್ರಕೃತಿ ಅಧ್ಯಯನ ಮುಂತಾದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.

ಎಲ್ಲಾ ಮಕ್ಕಳಿಗೆ ಆರೋಗ್ಯಕರ ಮತ್ತು ಶುಚಿರುಚಿಯಾದ ಆಹಾರ, ತಂಗಲು ವ್ಯವಸ್ಥೆ, ಪ್ರವಾಸಕ್ಕೆ ಸಾರಿಗೆ ವ್ಯವಸ್ಥೆ, ನೀರು, ಶೌಚಾಲಯ ವ್ಯವಸ್ಥೆ ಹಾಗೂ ಮತ್ತಿತರ ವ್ಯವಸ್ಥೆ ನಿರ್ವಹಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಮೇಳದಲ್ಲಿ ಭಾಗವಹಿಸುವ ಎಲ್ಲಾ ಮಕ್ಕಳಿಗೆ ಸ್ಕಾರ್ಫ್, ಓಗಲ್, ಟೀ ಶರ್ಟ್, ಪೀ ಕ್ಯಾಪ್ ಹಾಗೂ ಇತರೆ ವಸ್ತುಗಳನ್ನೊಳಗೊಂಡ ಬ್ಯಾಗ್‌ ನೀಡಲಾಗುವುದು, ಮಕ್ಕಳು ಚಟುವಟಿಕೆ ದಾಖಲಿಸಲು ಹಾಗೂ ಕಾರ್ಯ ಕ್ರಮಗಳ ವಿವರಗಳನ್ನೊಳಗೊಂಡ ಕಿರುಹೊತ್ತಿಗೆನೀಡಲಾಗುವುದು ಎಂದರು.ಜಿಲ್ಲೆಯಲ್ಲಿ 1920 ರಲ್ಲಿ ಮೊದಲನೇ ರಾಜ್ಯ ಜಾಂಬೂರಿ ನಡೆಸಿದ ಹೆಗ್ಗಳಿಕೆ ಇದೆ. ಈ ಜಾಂಬೂರಿ ನಮ್ಮ ಮೊದಲ ಜಾಂಬೂರಿಯ ಶತ ಮಾನೋತ್ಸವವೆಂದು ಆದಷ್ಟು ಸುವ್ಯವಸ್ಥಿತವಾಗಿ ಆಚರಿಸಬೇಕು. ಜಿಲ್ಲೆಯ ಎಲ್ಲಾ ಅಧಿಕಾರಿ ವರ್ಗ, ಸ್ವಯಂ ಸೇವಕರು, ರೋವರ್ಸ್‌ ಮತ್ತು ರೇಂಜರ್ಸ್‌ ಜಿಲ್ಲೆಯ ಎಲ್ಲಾ ವಯಸ್ಕ ತರಬೇತುದಾರರು, ಜಿಲ್ಲಾಡಳಿತ, ಜನಪ್ರತಿನಿಧಿ ಮತ್ತು ಜಿಲ್ಲೆಯ ಎಲ್ಲಾ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಮೇಳವನ್ನು ನಮ್ಮ ಊರಿನ ಹಬ್ಬವಾಗಿ ಯಶಸ್ವಿಗೊಳಿಸಬೇಕು ಎಂದು ಹೇಳಿದರು.ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಮುಖ್ಯ ಆಯುಕ್ತ ಎಂ.ಎನ್. ಷಡಾಕ್ಷರಿ, ಸ್ಕೌಟ್ಸ್ ಜಿಲ್ಲಾ ಆಯುಕ್ತ ಟಿ.ಎನ್. ಫಣಿರಾಜ್, ಗೈಡ್ಸ್ ಜಿಲ್ಲಾ ಆಯುಕ್ತೆ ಡಿ.ಎಸ್. ಮಮತ, ಜಿಲ್ಲಾ ಕಾರ್ಯದರ್ಶಿ ನೀಲಕಂಠ ಆಚಾರ್ಯ, ಜಿಲ್ಲಾ ತರಬೇತಿ ಆಯುಕ್ತೆ ಸಂಧ್ಯಾರಾಣಿ ಉಪಸ್ಥಿತರಿದ್ದರು. 26 ಕೆಸಿಕೆಎಂ 3ರಾಜ್ಯ ಮಟ್ಟದ ಕಬ್ಸ್ ಮತ್ತು ಬುಲ್ ಬುಲ್ಸ್ ಉತ್ಸವ ಆಚರಣೆ ಸಂಬಂಧ ಗುರುವಾರ ಡಿಸಿ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಉತ್ಸವದ ಲಾಂಛನ ಹಾಗೂ ಉತ್ಸವ ಗೀತೆ ಬಿಡುಗಡೆ ಮಾಡಿದರು.