ಉಡುಪಿ ಕೃಷ್ಣನಿಗೆ ಕೋಟಿ ತುಳಸಿ ಅರ್ಚನೆ

| Published : Jan 01 2024, 01:15 AM IST

ಸಾರಾಂಶ

ಪರ್ಯಾಯ ಶ್ರೀ ಕೃಷ್ಣಾಪುರ ಮಠದ ಆಶ್ರಯದಲ್ಲಿ, ತುಳು ಶಿವಳ್ಳಿ ಮಾಧ್ವ ಬ್ರಾಹ್ಮಣ ಮಹಾ ಮಂಡಲ (ತುಶಿಮಾಮ) ಇದರ ಕಡಿಯಾಳಿ ಘಟಕದ ನೇತೃತ್ವದಲ್ಲಿ ಉಡುಪಿ ತಾಲೂಕು ಬ್ರಾಹ್ಮಣ ಮಹಾಸಭಾ ಮತ್ತು ಉಡುಪಿ ಜಿಲ್ಲೆಯ ಸಮಸ್ತ ಬ್ರಾಹ್ಮಣ ವಲಯಗಳ ಸಹಕಾರದಲ್ಲಿ ಶ್ರೀ ಕೃಷ್ಣಮಠದಲ್ಲಿ ಭಾನುವಾರ ಕೃಷ್ಣನಿಗೆ ವಿಷ್ಣುಸಹಸ್ರ ನಾಮಾವಳಿ ಸಹಿತ ಕೋಟಿ ತುಳಸಿ ಅರ್ಚನೆ.

ಕನ್ನಡಪ್ರಭ ವಾರ್ತೆ ಉಡುಪಿ

ಶ್ರೀ ಕೃಷ್ಣಮಠದಲ್ಲಿ ಭಾನುವಾರ ಕೃಷ್ಣನಿಗೆ ವಿಷ್ಣುಸಹಸ್ರ ನಾಮಾವಳಿ ಸಹಿತ ಕೋಟಿ ತುಳಸಿ ಅರ್ಚನೆ ನೆರವೇರಿಸಲಾಯಿತು.

ಪರ್ಯಾಯ ಶ್ರೀ ಕೃಷ್ಣಾಪುರ ಮಠದ ಆಶ್ರಯದಲ್ಲಿ, ತುಳು ಶಿವಳ್ಳಿ ಮಾಧ್ವ ಬ್ರಾಹ್ಮಣ ಮಹಾ ಮಂಡಲ (ತುಶಿಮಾಮ) ಇದರ ಕಡಿಯಾಳಿ ಘಟಕದ ನೇತೃತ್ವದಲ್ಲಿ ಉಡುಪಿ ತಾಲೂಕು ಬ್ರಾಹ್ಮಣ ಮಹಾಸಭಾ ಮತ್ತು ಉಡುಪಿ ಜಿಲ್ಲೆಯ ಸಮಸ್ತ ಬ್ರಾಹ್ಮಣ ವಲಯಗಳ ಸಹಕಾರ ಈ ಕಾರ್ಯಕ್ರಮ ನಡೆಯಿತು.

ಪರ್ಯಾಯ ಶ್ರೀಕೃಷ್ಣಾಪುರ ಮಠಾಧೀಶರಾದ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರು, ಕಾಣಿಯೂರು ಮಠಾಧೀಶರಾದ ಶ್ರೀ ವಿದ್ಯಾವಲ್ಲಭತೀರ್ಥ ಶ್ರೀಪಾದರು, ಶೀರೂರು ಮಠಾಧೀಶರಾದ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಪೂಜೆ ನೆರವೇರಿಸಿದರು.

ತುಶಿಮಾಮ ಕಡಿಯಾಳಿ ಅಧ್ಯಕ್ಷ ರಘುಪತಿ ಉಪಾಧ್ಯ, ಕಾರ್ಯದರ್ಶಿ ರಾಜೇಶ್ ಭಟ್ ಪಣಿಯಾಡಿ, ಕೋಶಾಧಿಕಾರಿ ಕೊರಂಗ್ರಪಾಡಿ ಕೃಷ್ಣಮೂರ್ತಿ ಆಚಾರ್ಯ ಮತ್ತು ಇತರ ಸಂಘದ ಪದಾಧಿಕಾರಿಗಳು ನೇತೃತ್ವ ವಹಿಸಿದ್ದರು.