ಸಾರಾಂಶ
ಯಳಂದೂರು ತಿರುಮಲ ದೇವಸ್ಥಾನದಲ್ಲಿ ಸಚಿವ ಎಚ್.ಡಿ.ಕುಮಾರಸ್ವಾಮಿ ಹುಟ್ಟುಹಬ್ಬದ ಪ್ರಯುಕ್ತ ಜೆಡಿಎಸ್ ಮುಖಂಡ ಬಿ ಪುಟ್ಟಸ್ವಾಮಿ ವಿಶೇಷ ಪೂಜೆ, ಸಲ್ಲಿಸಿ ಸಿಹಿ ಹಂಚಿದರು.
ಯಳಂದೂರು: ಕೇಂದ್ರ ಸಚಿವರಾಗಿ ಎಚ್.ಡಿ ಕುಮಾರಸ್ವಾಮಿ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ ಅವರು ಮುಂಬರುವ ದಿನಗಳಲ್ಲಿ ರಾಜ್ಯದ ಮುಖ್ಯಮಂತ್ರಿಯಾಗಲಿ ಎಂದು ಅವರ ಹೆಸರಿನಲ್ಲಿ ವಿಶೇಷ ಪೂಜೆಯನ್ನು ಸಲ್ಲಿಸುತ್ತಿದ್ದೇನೆ ಎಂದು ಜೆಡಿಎಸ್ ಮುಖಂಡ ಬಿ ಪುಟ್ಟಸ್ವಾಮಿ ತಿಳಿಸಿದರು.
ಪಟ್ಟಣದ ಶ್ರೀ ತಿರುಮಲ ದೇವಸ್ಥಾನದಲ್ಲಿ ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ ಅವರ ಹುಟ್ಟು ಹಬ್ಬದ ಪ್ರಯುಕ್ತ ಅಂಗವಾಗಿ ವಿಶೇಷ ಪೂಜೆ, ಅರ್ಚನೆ ಮಾಡಿಸಿ ಬಳಿಕ ಮಾತನಾಡಿದ ಅವರು, ಮುಂಬರುವ ದಿನಗಳಲ್ಲಿ ಜೆಡಿಎಸ್ ನಾಯಕರಾದ ರವೀಂದ್ರ ಶ್ರೀಕಂಠಯ್ಯ, ಅಶ್ವಿನ್ ಕುಮಾರ್, ಹೆಚ್. ಕೆ.ರಾಮು ಮತ್ತು ಜಿಲ್ಲಾಧ್ಯಕ್ಷರಾದ ಹನೂರು ಶಾಸಕ ಮಂಜುನಾಥ್ ಅವರ ನೇತೃತ್ವದಲ್ಲಿ ಚಾಮರಾಜನಗರ ಜಿಲ್ಲಾದ್ಯಂತ ಜೆಡಿಎಸ್ ಸದಸ್ಯತ್ವ ಅಭಿಯಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.ಮುಂಬರುವ ಜಿಲ್ಲಾ ಪಂಚಾಯತ್ ತಾಲೂಕು ಪಂಚಾಯಿತಿ ಚುನಾವಣೆಗೆ ಬಿಜೆಪಿ ಜೆಡಿಎಸ್ ಮೈತ್ರಿಯಲ್ಲಿ ಮೀಸಲಾತಿ ಪ್ರಕಟವಾದ ನಂತರ ಜೆಡಿಎಸ್ ಪ್ರಬಲವಾಗಿರುವ ಕ್ಷೇತ್ರಗಳನ್ನು ಉಳಿಸಿಕೊಳ್ಳಲು ಕ್ರಮವಹಿಸಲಾಗುವುದು ಎಂದು ತಿಳಿಸಿದರು. ಜೆಡಿಎಸ್ ಜಿಲ್ಲಾ ರೈತ ಮೋರ್ಚಾ ಜಿಲ್ಲಾಧ್ಯಕ್ಷ ಆನಂದ್, ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶಂಕರಪ್ಪ ,ರಂಗರಾಮು, ಸರಿಗಮಪ ವಿವಿಧ ಗ್ರಾಮ ಪಂಚಾಯಿತಿ ತಾಲೂಕು ಪಂಚಾಯಿತಿ ಮುಖಂಡರು, ಸದಸ್ಯರು ಹಾಜರಿದ್ದರು.