ಮೈಸೂರು ದಸರಾ- ರಾಜವಂಶಸ್ಥರಿಗೆ ಆಹ್ವಾನ

| Published : Sep 30 2024, 01:17 AM IST

ಸಾರಾಂಶ

ಸಾಂಪ್ರದಾಯಿಕವಾಗಿ ಫಲತಾಂಬೂಲ ನೀಡಿ, ದಸರಾ ಉತ್ಸವಕ್ಕೆ ಆತ್ಮೀಯವಾಗಿ ಆಹ್ವಾನ

ಕನ್ನಡಪ್ರಭ ವಾರ್ತೆ ಮೈಸೂರು

ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಹಿನ್ನೆಲೆ ರಾಜ್ಯ ಸರ್ಕಾರದ ಪರವಾಗಿ ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಅವರು ಮೈಸೂರು ರಾಜವಂಶಸ್ಥರಾದ ಪ್ರಮೋದಾದೇವಿ ಒಡೆಯರ್ ಅವರಿಗೆ ಅಧಿಕೃತ ಆಹ್ವಾನ ನೀಡಿದರು.

ಮೈಸೂರು ಅರಮನೆಯಲ್ಲಿರುವ ನಿವಾಸದಲ್ಲಿ ಭಾನುವಾರ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅವರನ್ನು ಭೇಟಿಯಾಗಿ ಸಾಂಪ್ರದಾಯಿಕವಾಗಿ ಫಲತಾಂಬೂಲ ನೀಡಿ, ದಸರಾ ಉತ್ಸವಕ್ಕೆ ಆತ್ಮೀಯವಾಗಿ ಆಹ್ವಾನಿಸಿ, ಸರ್ಕಾರದಿಂದ ಪ್ರತಿವರ್ಷ ನೀಡಲಾಗುವ ಗೌರವಧನದ ಚೆಕ್ ಅನ್ನು ಸಚಿವರು ನೀಡಿದರು.

ಈ ವೇಳೆ ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ, ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ಜಿಪಂ ಸಿಇಒ ಕೆ.ಎಂ. ಗಾಯತ್ರಿ, ಎಸ್ಪಿ ಎನ್. ವಿಷ್ಣುವರ್ಧನ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಪಿ. ಶಿವರಾಜು, ಅರಮನೆ ಮಂಡಳಿ ಉಪ ನಿರ್ದೇಶಕ ಟಿ.ಎಸ್. ಸುಬ್ರಹ್ಮಣ್ಯ, ಅರಮನೆ ಎಸಿಪಿ ಚಂದ್ರಶೇಖರ್ ಮೊದಲಾದವರು ಇದ್ದರು.