ದಾಸ ಸಾಹಿತ್ಯ ಸಮ್ಮೇಳನಾಧ್ಯಕ್ಷರಿಗೆ ಅಧಿಕೃತ ಆಹ್ವಾನ

| Published : Jul 05 2024, 12:51 AM IST

ಸಾರಾಂಶ

ಜು.7ರಂದು ಹಮ್ಮಿಕೊಂಡಿರುವ ವಿಭಾಗಮಟ್ಟದ ದಾಸ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿರುವ ಡಾ. ವಾಸುದೇವ ಅಗ್ನಿಹೋತ್ರಿ ಅವರನ್ನು ಮಂಗಳವಾರ ಅಧಿಕೃತ ಆಹ್ವಾನ ನೀಡಿ ಗೌರವಿಸಲಾಯಿತು.

ಕನ್ನಡಪ್ರಭ ವಾರ್ತೆ ಕಲಬುರಗಿ

ಕನ್ನಡ ಸಾಹಿತ್ಯ ಪರಿಷತ್ತು ದಕ್ಷಿಣ ವಲಯದಿಂದ ನಗರದ ಸಂಗಮೇಶ್ವರ ಸಭಾಗೃಹದಲ್ಲಿ ಜು.7ರಂದು ಹಮ್ಮಿಕೊಂಡಿರುವ ವಿಭಾಗಮಟ್ಟದ ದಾಸ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿರುವ ಡಾ. ವಾಸುದೇವ ಅಗ್ನಿಹೋತ್ರಿ ಅವರನ್ನು ಮಂಗಳವಾರ ಅಧಿಕೃತ ಆಹ್ವಾನ ನೀಡಿ ಗೌರವಿಸಲಾಯಿತು.ಸನ್ಮಾನ ಸ್ವೀಕರಿಸಿ ಮಾತನಾಡಿದ ಡಾ.‌ಅಗ್ನಿಹೋತ್ರಿ ಅವರು, ದಾಸ ಸಾಹಿತ್ಯ ಬೆಳವಣಿಗೆಗೆ ಪ್ರಚಾರದ ಅಗತ್ಯವಿದೆ. ಸಾಮಾಜಿಕ ಕಳಕಳಿ ಹೊಂದಿರುವ ದಾಸ ಸಾಹಿತ್ಯಕ್ಕೆ ಸಮಾಜದಲ್ಲಿನ ಅಂಕು ಡೊಂಕುಗಳನ್ನು ತಿದ್ದುವ ಶಕ್ತಿ ಇದೆ ಎಂದರು.

ಕನ್ನಡ ಸಾಹಿತ್ಯ ಪರಿಷತ್ತು ದಕ್ಷಿಣ ವಲಯದ ಅಧ್ಯಕ್ಷ ಶಾಮಸುಂದರ ಕುಲಕರ್ಣಿ, ಸಂಘಟನಾ ಕಾರ್ಯ ದರ್ಶಿ ಮಂಜುನಾಥ ಕಂಬಳಿಮಠ, ಸಹ ಕಾರ್ಯದರ್ಶಿಗಳಾದ ಮಲ್ಲಿನಾಥ ಸಂಗಶೆಟ್ಟಿ, ಶಿವಕುಮಾರ ಸಿ.ಎಚ್, ಸಂಗ ಸಂಸ್ಥೆ ಪ್ರತಿನಿಧಿ ಸಂಗಣ್ಣ ಚೋರಗಸ್ತಿ, ರಂಗಾಯಣದ ಮಾಜಿ ನಿರ್ದ