ಮಹಾನ್ ವ್ಯಕ್ತಿಗಳ ಪುತ್ಥಳಿಯ ಸುತ್ತಮುತ್ತ ಕಸ ಹಾಕದಂತೆ ಹಾಗೂ ನಗರ ಸ್ವಚ್ಛತೆ ಬಗ್ಗೆ ಕಾಳಜಿ ವಹಿಸಬೇಕು. ಸುಂದರ ನಗರ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದು ಸಾರ್ವಜನಿಕರಿಗೆ ಕರೆ ನೀಡಲಾಯಿತು.
ಹಾವೇರಿ: ಗಾಂಧಿ ಜಯಂತಿ ಅಂಗವಾಗಿ ಬುಧವಾರ ನಗರದ ವಿವಿಧ ರಸ್ತೆಗಳು ಹಾಗೂ ವೃತ್ತಗಳ ಸ್ವಚ್ಛತಾ ಕಾರ್ಯದಲ್ಲಿ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿ ಭಾಗವಹಿಸಿ ಶ್ರಮದಾನ ಮಾಡಿದರು.
ಮಹಾನ್ ವ್ಯಕ್ತಿಗಳ ಪುತ್ಥಳಿಯ ಸುತ್ತಮುತ್ತ ಕಸ ಹಾಕದಂತೆ ಹಾಗೂ ನಗರ ಸ್ವಚ್ಛತೆ ಬಗ್ಗೆ ಕಾಳಜಿಸಬೇಕು. ಸುಂದರ ನಗರ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದು ಸಾರ್ವಜನಿಕರಿಗೆ ಕರೆ ನೀಡಲಾಯಿತು.ಎಲ್ಲ ಇಲಾಖೆಗಳ ಅಧಿಕಾರಿಗಳು ಹಾಗೂ ನೌಕರರು ಸೇರಿದಂತೆ ಒಂದು ಸಾವಿರಕ್ಕೂ ಅಧಿಕ ಅಧಿಕಾರಿ-ನೌಕರರು ತಂಡ ತಂಡವಾಗಿ ಶ್ರಮದಾನದಲ್ಲಿ ಪಾಲ್ಗೊಂಡು ಜೆ.ಎಚ್. ಪಟೇಲ್ ವೃತ್ತ, ವಿ.ಕೃ. ಗೋಕಾಕ ವೃತ್ತ, ಶ್ರೀಬಸವೇಶ್ವರ ವೃತ್ತ, ಸುಭಾಸ ವೃತ್ತ, ವಿ.ಕೃ. ಗೋಕಾಕ, ಜೆ.ಪಿ. ವೃತ್ತ, ಮಹಾತ್ಮಗಾಂಧಿ ವೃತ್ತ, ಮೈಲಾರ ಮಹದೇವಪ್ಪ ವೃತ್ತ, ಹೊಸಮನಿ ಸಿದ್ದಪ್ಪ ವೃತ್ತ, ಕಿತ್ತೂರ ಚೆನ್ನಮ್ಮ ವೃತ್ತ, ಮಹರ್ಷಿ ವಾಲ್ಮೀಕಿ ವೃತ್ತ, ನಗರದ ಪ್ರಮುಖ ಬೀದಿಗಳ ಸ್ವಚ್ಛತೆ ಕಾರ್ಯ ನೆರವೇರಿಸಿದರು.
ತಹಸೀಲ್ದಾರ್ ಶರಣಮ್ಮ, ನಗರಸಭೆ ಪೌರಾಯುಕ್ತ ಎಚ್. ಕಾಂತರಾಜು, ಚುನಾವಣಾ ತಹಸೀಲ್ದಾರ್ ಅಮೃತಗೌಡ ಪಾಟೀಲ, ಜಿಲ್ಲಾಧಿಕಾರಿಗಳ ಕಚೇರಿ, ತಹಸೀಲ್ದಾರ್ ಕಚೇರಿ, ಉಪವಿಭಾಗಾಧಿಕಾರಿಗಳ ಕಚೇರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಪಶು ಸಂಗೋಪನೆ ಇಲಾಖೆ, ಕಂದಾಯ ಇಲಾಖೆ, ಅಬಕಾರಿ, ಅಗ್ನಿಶಾಮಕ, ಪ್ರಾದೇಶಿಕ ಸಾರಿಗೆ ಇಲಾಖೆ ಸೇರಿದಂತೆ ವಿವಿಧ ಇಲಾಖಾ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸ್ವಚ್ಛತಾ ಕಾರ್ಯದಲ್ಲಿ ಭಾಗವಹಿಸಿ ಶ್ರಮದಾನದ ಮೂಲಕ ನಗರ ಸ್ವಚ್ಛತೆ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸಿದರು.