ಕ್ಷೇತ್ರ ಶಿಕ್ಷಣಾಧಿಕಾರಿ ಗಂಗಾಧರ ಅಣ್ಣಿಗೇರಿ ಅವರು ಸಿಬ್ಬಂದಿಯೊಂದಿಗೆ ದ್ರಾಕ್ಷಿ ತೋಟಕ್ಕೆ ತೆರಳಿದರು. ವಿದ್ಯಾರ್ಥಿನಿಯನ್ನು ಮನವೊಲಿಸಿ ಮುಂಡರಗಿ ಪಟ್ಟಣದ ವಿ.ಜಿ. ಲಿಂಬಿಕಾಯಿ ಶಿಕ್ಷಣ ಸಂಸ್ಥೆಯಲ್ಲಿರುವ ಪರೀಕ್ಷಾ ಕೇಂದ್ರಕ್ಕೆ ಕರೆತಂದು ವಿಜ್ಞಾನ ಪರೀಕ್ಷೆಯನ್ನು ಬರೆಯುವಂತೆ ಮಾಡಿದರು.

ಡಂಬಳ: ಸಮೀಪದ ಪೇಠಾಆಲೂರು ‌ಗ್ರಾಮದಲ್ಲಿ ಬಡತನದ ಕಾರಣದಿಂದ ಎಸ್‌ಎಸ್‌ಎಲ್‌ಸಿ ವಿಜ್ಞಾನ ಪರೀಕ್ಷೆಗೆ ಹಾಜರಾಗದೆ ಕೂಲಿ ಕೆಲಸಕ್ಕೆ ತೆರಳಿದ್ದ ವಿದ್ಯಾರ್ಥಿನಿಯನ್ನು ಅಧಿಕಾರಿಗಳು ಹುಡುಕಿ ಕರೆತಂದು ಪರೀಕ್ಷೆಗೆ ಹಾಜರುಪಡಿಸಿದ ಘಟನೆ ಸೋಮವಾರ ನಡೆದಿದೆ.

ಹೋಬಳಿಯ ಪೇಠಾಲೂರು ಗ್ರಾಮದ ಪಲ್ಲವಿ ಹಳ್ಳಿಕೇರಿ ಬರದೂರು ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿ ವ್ಯಾಸಂಗ ಮಾಡುತ್ತಿದ್ದಳು. ಈ ವಿದ್ಯಾರ್ಥಿನಿ ಮನೆಯ ಆರ್ಥಿಕ ಸಂಕಷ್ಟದಿಂದಾಗಿ ವಿಜ್ಞಾನ ಪರೀಕ್ಷೆ ದಿನ ದ್ರಾಕ್ಷಿ ತೋಟಕ್ಕೆ ಕೂಲಿ ಕೆಲಸಕ್ಕೆ ತೆರಳಿದ್ದಳು. ವಿಷಯ ತಿಳಿದ ಕ್ಷೇತ್ರ ಶಿಕ್ಷಣಾಧಿಕಾರಿ ಗಂಗಾಧರ ಅಣ್ಣಿಗೇರಿ ಅವರು ಸಿಬ್ಬಂದಿಯೊಂದಿಗೆ ದ್ರಾಕ್ಷಿ ತೋಟಕ್ಕೆ ತೆರಳಿದರು. ವಿದ್ಯಾರ್ಥಿನಿಯನ್ನು ಮನವೊಲಿಸಿ ಮುಂಡರಗಿ ಪಟ್ಟಣದ ವಿ.ಜಿ. ಲಿಂಬಿಕಾಯಿ ಶಿಕ್ಷಣ ಸಂಸ್ಥೆಯಲ್ಲಿರುವ ಪರೀಕ್ಷಾ ಕೇಂದ್ರಕ್ಕೆ ಕರೆತಂದು ವಿಜ್ಞಾನ ಪರೀಕ್ಷೆಯನ್ನು ಬರೆಯುವಂತೆ ಮಾಡಿದರು. ಅಧಿಕಾರಿಗಳ ಕಾರ್ಯ ವ್ಯಾಪಕ ಪ್ರಶಂಸೆಗೆ ಪಾತ್ರವಾಗಿದೆ.

ಶಿಕ್ಷಕರು, ಪಾಲಕರ ಪಾತ್ರ: ತಾಲೂಕಿನ ಪ್ರತಿ ವಿದ್ಯಾರ್ಥಿಗಳ ಭವಿಷ್ಯ ಉಜ್ವಲವಾಗಬೇಕು. ಅವರು ಮುಂದಿನ ದಿನಮಾನಗಳಲ್ಲಿ ಉತ್ತಮ ಭವಿಷ್ಯವನ್ನು ಕಟ್ಟಿಕೊಂಡು ದೇಶದ ಭವಿಷ್ಯದ ಪ್ರಜೆಗಳಾಗಬೇಕು. ಪ್ರತಿಯೊಂದು ವಿದ್ಯಾರ್ಥಿ ಪರೀಕ್ಷೆ ಬರೆಯಲು ಶಿಕ್ಷಕರು, ಪಾಲಕರ ಪಾತ್ರ ಬಹಳ ಮುಖ್ಯವಾಗಿದೆ ಎಂದು ಕ್ಷೇತ್ರ ಶಿಕ್ಷಾಧಿಕಾರಿ ಗಂಗಾಧರ ಅಣ್ಣಿಗೇರಿ ತಿಳಿಸಿದರು.

ಈ ಸಂದರ್ಭದಲ್ಲಿ ಶಿಕ್ಷಣ ಇಲಾಖೆಯ ಅಧಿಕಾರಿ ಮನೋಹರ ಎಸ್., ಶಿಕ್ಷಕ ಉಮೇಶ ಬೂದಿಹಾಳ ಇದ್ದರು.ಚರಂಡಿ ಸ್ವಚ್ಛ ಮಾಡಲು ಸಾರ್ವಜನಿಕರ ಆಗ್ರಹ

ನರಗುಂದ: ಪಟ್ಟಣದ ಮಾರುತಿ ನಗರದ ಹತ್ತಿರ ವಿವಿಧ ಬಡಾವಣೆಯ ಮೂರು ಚರಂಡಿಗಳ ನೀರು ಬಂದು ಸೇರುತ್ತಿದ್ದು, ಈ ಚರಂಡಿಯನ್ನು ಬಹುದಿನಗಳಿಂದ ಪುರಸಭೆಯವರು ಸ್ವಚ್ಛ ಮಾಡಿಲ್ಲ. ಇದರಿಂದ ನಿವಾಸಿಗಳು ತೊಂದರೆ ಅನುಭವಿಸುತ್ತಿದ್ದಾರೆ.ಚರಂಡಿ ನೀರು ಸರಾಗವಾಗಿ ಹರಿದು ಹೋಗದೆ ನೀರು, ತ್ಯಾಜ್ಯಗಳಿಂದ ಗಬ್ಬು ನಾರುತ್ತಿದೆ. ಈ ಪ್ರದೇಶದಲ್ಲಿ ಸಾರ್ವಜನಿಕರು ಮೂಗು ಮುಚ್ಚಿಕೊಂಡು ಓಡಾಡುವ ಪರಿಸ್ಥಿತಿಯಿದೆ. ಈ ಬಗ್ಗೆ ಹಲವಾರು ಬಾರಿ ಸಾರ್ವಜನಿಕರು ಪುರಸಭೆ ಅಧಿಕಾರಿಗಳಿಗೆ ಮೌಖಿಕವಾಗಿ ತಿಳಿಸಿದರೂ ಪ್ರಯೋಜನವಾಗಿಲ್ಲ ಎಂದು ನಿವಾಸಿಗಳು ತಿಳಿಸಿದ್ದಾರೆ.