ಸಾರಾಂಶ
ಸರ್ಕಾರದ ಗ್ಯಾರಂಟಿ ಯೋಜನೆಗಳ ಮೈಸೂರು ವಿಭಾಗದ ಉಪಾಧ್ಯಕ್ಷೆ ಪುಷ್ಪ ಅಮರ್‌ನಾಥ್ ಅವರು ಹಾಸನದ ಕೆ.ಎಸ್.ಆರ್.ಟಿ. ಬಸ್ ನಿಲ್ದಾಣಕ್ಕೆ ಗುರುವಾರ ಭೇಟಿ ನೀಡಿ ಪರಿಶೀಲಿಸಿದ ಅವರು ಶಕ್ತಿ ಯೋಜನೆ ಕುರಿತು ಮಹಿಳೆಯರನ್ನು ಮಾತನಾಡಿಸಿ, ಬಸ್ ನಿಲ್ದಾಣದ ಹೋಟೆಲ್ ಹಾಗೂ ಫಾಸ್ಟ್ ಫುಡ್ ಮಳಿಗೆಗಳನ್ನು ವೀಕ್ಷಣೆ ಮಾಡಿದರು. ಆಹಾರ ಸೇವನೆಗೆ ಬಳಸುತ್ತಿದ್ದ ಪ್ಲಾಸ್ಟಿಕ್ ವಸ್ತುಗಳನ್ನು ವಶಕ್ಕೆ ತೆಗೆದುಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು. ಹೋಟೆಲ್‌ಗಳಲ್ಲಿ ಆರೋಗ್ಯಪೂರ್ಣವಾದ ಉತ್ತಮ ಗುಣಮಟ್ಟದ ತಿಂಡಿ ಮತ್ತು ಊಟ ಒದಗಿಸಬೇಕು ಎಂದು ಸೂಚಿಸಿದರು.
ಕನ್ನಡಪ್ರಭ ವಾರ್ತೆ ಹಾಸನ
ಬಸ್ ನಿಲ್ದಾಣದ ವ್ಯವಸ್ಥೆಯನ್ನು ಸರಿಪಡಿಸಲು ಅಧಿಕಾರಿಗಳು ವಾರದಲ್ಲಿ ಒಂದೊಂದು ದಿನ ಒಬ್ಬೊಬ್ಬರು ನಿರಂತರವಾಗಿ ಬಸ್ ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡುವುದರ ಮೂಲಕ ಸುಧಾರಣೆ ಮಾಡುವಂತೆ ಸರ್ಕಾರದ ಗ್ಯಾರಂಟಿ ಯೋಜನೆಗಳ ಮೈಸೂರು ವಿಭಾಗದ ಉಪಾಧ್ಯಕ್ಷೆ ಪುಷ್ಪ ಅಮರ್‌ನಾಥ್ ಅವರು ಸೂಚಿಸಿದ್ದಾರೆ.ನಗರದ ಕೆ.ಎಸ್.ಆರ್.ಟಿ. ಬಸ್ ನಿಲ್ದಾಣಕ್ಕೆ ಗುರುವಾರ ಭೇಟಿ ನೀಡಿ ಪರಿಶೀಲಿಸಿದ ಅವರು ಶಕ್ತಿ ಯೋಜನೆ ಕುರಿತು ಮಹಿಳೆಯರನ್ನು ಮಾತನಾಡಿಸಿ, ಬಸ್ ನಿಲ್ದಾಣದ ಹೋಟೆಲ್ ಹಾಗೂ ಫಾಸ್ಟ್ ಫುಡ್ ಮಳಿಗೆಗಳನ್ನು ವೀಕ್ಷಣೆ ಮಾಡಿದರು. ಆಹಾರ ಸೇವನೆಗೆ ಬಳಸುತ್ತಿದ್ದ ಪ್ಲಾಸ್ಟಿಕ್ ವಸ್ತುಗಳನ್ನು ವಶಕ್ಕೆ ತೆಗೆದುಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು. ಹೋಟೆಲ್‌ಗಳಲ್ಲಿ ಆರೋಗ್ಯಪೂರ್ಣವಾದ ಉತ್ತಮ ಗುಣಮಟ್ಟದ ತಿಂಡಿ ಮತ್ತು ಊಟ ಒದಗಿಸಬೇಕು. ಸ್ಟೀಲ್ ತಟ್ಟೆ, ಲೋಟ ಬಳಸುವಂತೆ ಸೂಚಿಸಿದರಲ್ಲದೆ ಸ್ವಚ್ಛತೆ ಕಾಪಾಡಲು ತಿಳಿಸಿದರು. ಶೌಚಾಲಯ ಬಳಕೆಗೆ ಸಾರ್ವಜನಿಕರಿಂದ ಮೂರು ರುಪಾಯಿಗಿಂತ ಹೆಚ್ಚಿನ ಹಣ ಪಡೆದರೆ ಪರವಾನಗಿ ರದ್ದುಪಡಿಸಲು ಕ್ರಮವಹಿಸಿ ಎಂದು ಅಧಿಕಾರಿಗಳಿಗೆ ತಿಳಿಸಿದರು.
ಬಸ್ ನಿಲ್ದಾಣದಲ್ಲಿರುವ ಅಂಗಡಿಗಳಲ್ಲಿ ನಿಗದಿತ ದರಕ್ಕಿಂತ ಹೆಚ್ಚಿನ ಹಣ ಪಡೆಯುತ್ತಿದ್ದಾರೆ ಎಂದು ಸಾರ್ವಜನಿಕರು ಮಾಹಿತಿ ನೀಡಿದ್ದಾರೆ. ಈ ನಿಟ್ಟಿನಲ್ಲಿ ನಿಗಾ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಬಸ್ ನಿಲ್ದಾಣದಲ್ಲಿರುವ ಮಹಿಳೆಯರ ವಿಶ್ರಾಂತಿ ಗೃಹ ಹಾಗೂ ಶಿಶುಪಾಲನಾ ಕೊಠಡಿ ಬಳಕೆ ಆಗುತ್ತಿಲ್ಲ ಇನ್ಮುಂದೆ ಬಳಸುವಂತೆ ಜನರಲ್ಲಿ ಜಾಗೃತಿ ಮೂಡಿಸಲು ಸೂಚಿಸಿದರು.ನಂತರ ಮಾತನಾಡಿ, ಸರ್ಕಾರದ ಪಂಚ ಗ್ಯಾರಂಟಿಗಳು ಜನಸಾಮಾನ್ಯರ ಬದುಕಿನಲ್ಲಿ ಬದಲಾವಣೆ ಮೂಡಿಸಿವೆ ಎಂದರು. ಶಕ್ತಿ ಹಾಗೂ ಗೃಹಲಕ್ಷ್ಮೀ ಯೋಜನೆಯಡಿ ಉಳಿತಾಯವಾಗುವ ಹಣವನ್ನು ಮಹಿಳೆಯರು ತಮ್ಮ ದಿನನಿತ್ಯದ ಇತರ ಬಳಕೆಗೆ ಉಪಯೋಗಿಸಬಹುದು ಎಂದರು.
ಈ ವೇಳೆಯಲ್ಲಿ ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ದೀಪಕ್ ಹಾಗೂ ಮತ್ತಿತರ ಅಧಿಕಾರಿಗಳು ಹಾಜರಿದ್ದರು.