ಬರ ನಿರ್ವಹಣೆ ಕುರಿತು ಅಧಿಕಾರಿಗಳು ನಿಗಾವಹಿಸಿ

| Published : Jan 06 2024, 02:00 AM IST

ಸಾರಾಂಶ

ರಾಮನಗರ: ಜಿಲ್ಲೆಯ ಬರ ಪೀಡಿತ ತಾಲೂಕುಗಳಲ್ಲಿ ಬರ ನಿರ್ವಹಣೆ ಕುರಿತಂತೆ ಕೈಗೊಳ್ಳಬೇಕಾದ ಕಾರ್ಯಗಳ ಬಗ್ಗೆ ಅಧಿಕಾರಿಗಳು ತುರ್ತಾಗಿ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಡಾ. ಅವಿನಾಶ್ ಮೆನನ್ ರಾಜೇಂದ್ರನ್ ತಿಳಿಸಿದರು.

ರಾಮನಗರ: ಜಿಲ್ಲೆಯ ಬರ ಪೀಡಿತ ತಾಲೂಕುಗಳಲ್ಲಿ ಬರ ನಿರ್ವಹಣೆ ಕುರಿತಂತೆ ಕೈಗೊಳ್ಳಬೇಕಾದ ಕಾರ್ಯಗಳ ಬಗ್ಗೆ ಅಧಿಕಾರಿಗಳು ತುರ್ತಾಗಿ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಡಾ. ಅವಿನಾಶ್ ಮೆನನ್ ರಾಜೇಂದ್ರನ್ ತಿಳಿಸಿದರು.

ನಗರದ ಜಿಲ್ಲಾ ಪಂಚಾಯತ್ ಭವನದಲ್ಲಿ ನಡೆದ ರಾಮನಗರ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕುಡಿಯುವ ನೀರು ಪೂರೈಕೆ, ಜಾನುವಾರುಗಳಿಗೆ ಲಭ್ಯವಿರುವ ಮೇವಿನ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದರು. ತಾಲೂಕು ಮಟ್ಟದಲ್ಲಿ ಟಾಸ್ಕ್ ಫೋರ್ಸ್ ಸಮಿತಿ ಸಭೆಗಳನ್ನು ಕಾಲಕಾಲಕ್ಕೆ ನಿಯಮಾನುಸಾರ ನಡೆಸುವಂತೆ, ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಕ್ರಮ ವಹಿಸಬೇಕು ಎಂದು ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದಿಗ್ವಿಜಯ್ ಬೋಡ್ಕೆ, ಅಪರ ಜಿಲ್ಲಾಧಿಕಾರಿ ಶಿವಾನಂದ ಮೂರ್ತಿ ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಪೊಟೋ೫ಸಿಪಿಟಿ5:

ರಾಮನಗರ ಜಿಲ್ಲಾ ಪಂಚಾಯತ್ ಭವನದಲ್ಲಿ ಜಿಲ್ಲಾಧಿಕಾರಿ ಡಾ. ಅವಿನಾಶ್‌ ಮೆನನ್ ರಾಜೇಂದ್ರನ್ ಅಧ್ಯಕ್ಷತೆಯಲ್ಲಿ ರಾಮನಗರ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ ನಡೆಯಿತು.