ಕೃಷಿ,ತೋಟಗಾರಿಕೆ, ಪಶು ಸಂಗೋಪನೆ ಸೇರಿದಂತೆ ಇತರೆ ವಿವಿಧ ಇಲಾಖೆಯ ಆದಾಯ ಹೇಗೆ ಹೆಚ್ಚಿಸಬೇಕು ಎಂಬುದರ ಕುರಿತು ಮುಂದಾಲೋಚನೆ ಜತೆಗೆ ಎಲ್ಲಿ ಗ್ಯಾಪಗಳಿವೆ ಅವುಗಳನ್ನು ಹೇಗೆ ಸರಿಪಡಿಸಬೇಕು
ಕೊಪ್ಪಳ: ಸುಸ್ಥಿರ ಜಿಲ್ಲಾ ಅಭಿವೃದ್ಧಿ ದೂರದೃಷ್ಟಿ ಯೋಜನೆ 2031 ವರದಿ ತಯಾರಿಸುವ ಸಂಬಂಧ ಸಂಪನ್ಮೂಲ ವ್ಯಕ್ತಿಗಳಿಗೆ ವಿವಿಧ ಇಲಾಖೆಯ ಅಧಿಕಾರಿಗಳು ನಿಖರ ಮಾಹಿತಿ ನೀಡಬೇಕೆಂದು ಜಿಲ್ಲಾಧಿಕಾರಿ ಡಾ.ಸುರೇಶ ಬಿ.ಇಟ್ನಾಳ ಹೇಳಿದರು.
ಅವರು ಗುರುವಾರ ಜಿಲ್ಲಾಡಳಿತ, ಜಿಪಂ ಸಹಯೋಗದಲ್ಲಿ ಜಿಪಂ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಮಾನವ ಅಭಿವೃದ್ಧಿ ವರದಿ-2025 ಹಾಗೂ ಸಮಗ್ರ ಮತ್ತು ಸುಸ್ಥಿರ ಜಿಲ್ಲಾ ಅಭಿವೃದ್ಧಿ ದೂರದೃಷ್ಟಿ ಯೋಜನೆ-2031 ವರದಿ ತಯಾರಿಸುವ ಕುರಿತು ವಿವಿಧ ಇಲಾಖೆಯ ಅಧಿಕಾರಿಗಳಿಗೆ ಹಮ್ಮಿಕೊಂಡಿದ್ದ ಒಂದು ದಿನದ ತರಬೇತಿ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಕೃಷಿ,ತೋಟಗಾರಿಕೆ, ಪಶು ಸಂಗೋಪನೆ ಸೇರಿದಂತೆ ಇತರೆ ವಿವಿಧ ಇಲಾಖೆಯ ಆದಾಯ ಹೇಗೆ ಹೆಚ್ಚಿಸಬೇಕು ಎಂಬುದರ ಕುರಿತು ಮುಂದಾಲೋಚನೆ ಜತೆಗೆ ಎಲ್ಲಿ ಗ್ಯಾಪಗಳಿವೆ ಅವುಗಳನ್ನು ಹೇಗೆ ಸರಿಪಡಿಸಬೇಕು ಎಂಬುದರ ಕುರಿತು ಎಲ್ಲರೂ ನಿಖರ ಮಾಹಿತಿ ನೀಡಬೇಕು. ತಾವು ನೀಡುವ ಮಾಹಿತಿ ಬರುವ ದಿನಗಳಲ್ಲಿ ಜಿಲ್ಲೆಯ ಅಭಿವೃದ್ಧಿಗೆ ಪೂರಕವಾಗಲಿದೆ ಎಂದರು.
1999 ರಿಂದ ಈ ವರದಿ ಕರ್ನಾಟಕದಲ್ಲಿ ಮಾಡಲು ಶುರು ಆಯಿತು.ಇದನ್ನು ಪುನಃ ಆಗಾಗ ಮಾಡಲಾಗುತ್ತದೆ. 2015 ವರದಿ 2025 ಹೋಲಿಕೆ ಮಾಡಲಾಗುತ್ತದೆ.ಶಿಕ್ಷಣ,ಆರೋಗ್ಯ, ಜನರ ಜೀವನ ಮಟ್ಟ ಇದರಿಂದ ತಿಳಿಯುತ್ತದೆ. 2022ರ ವರದಿ ಪ್ರಕಾರ ಬಡತನ ಜಿಲ್ಲೆಗಳ ಪಟ್ಟಿ ತೆಗೆದುಕೊಂಡರೆ ಅದರಲ್ಲಿ ಕೊಪ್ಪಳ ಜಿಲ್ಲೆಯ ಹೆಸರು ಬರುತ್ತದೆ.ನಮ್ಮ ವರದಿ ಜಿಲ್ಲೆಯ ಅಭಿವೃದ್ಧಿಗೆ ಪೂರವಾಗಿರುವುದರ ಜತೆಗೆ ನಿಖರವಾಗಿರಬೇಕು.ಈ ಹಿಂದೆ ಉಡುಪಿ ಮತ್ತು ವಿಜಯಪುರ ಜಿಲ್ಲೆಯ ವರದಿಗಳು ರಾಷ್ಟ್ರಮಟ್ಟದಲ್ಲಿ ಅಕ್ಸೆಪ್ಟ ಮಾಡಿದ್ದರು. ತಾವು ಸರಿಯಾದ ಪ್ಯಾರಾ ಮೀಟರ್ ಪ್ರಕಾರವೇ ಮಾಹಿತಿ ನೀಡಿ ಎಂದು ಹೇಳಿದರು.ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡಿ, ಇಂದಿನ ತರಬೇತಿ ಕಾರ್ಯಾಗಾರದ ಉದ್ದೇಶ ಜಿಲ್ಲೆಯ ಮಾನವ ಅಭಿವೃದ್ಧಿ ಯೋಜನೆ ತಯಾರಿಸುವ ಕುರಿತು ಮಾಹಿತಿ ನೀಡುವುದಾಗಿದೆ. ಈ ಕುರಿತು ಸಂಪನ್ಮೂಲ ವ್ಯಕ್ತಿಗಳು ತಮಗೆ ವಿವರ ಮಾಹಿತಿ ನೀಡಲಿದ್ದಾರೆ. ಅಧಿಕಾರಿಗಳು ಯಾವುದೇ ಸುಳ್ಳು ಮಾಹಿತಿ ಕೊಡಬಾರದು.ಸರಿಯಾದ ಮಾಹಿತಿ ನೀಡುವ ಮೂಲಕ ಈ ಕಾರ್ಯಕ್ರಮ ಯಶಸ್ವಿಗೆ ಎಲ್ಲರೂ ಸಹಕಾರ ನೀಡಬೇಕೆಂದರು.
ಈ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದ ನಿವೃತ್ತ ಜಂಟಿ ನಿರ್ದೆಶಕ ಶ್ರೀನಿವಾಸ, ಹಾವೇರಿ ವಿಶ್ವವಿದ್ಯಾಲಯ ಕುಲಸಚಿವರು ಹಾಗೂ ಅರ್ಥಶಾಸ್ತ್ರ ಪ್ರಾಧ್ಯಾಪಕ ಪ್ರೊ.ಎಸ್.ಟಿ. ಬಾಗಲಕೋಟಿ, ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡದ ಅರ್ಥಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಪ್ರೊ. ಎಚ್. ಎಚ್.ಭರಡಿ ಹಾಗೂ ನರಗುಂದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಧ್ಯಾಪಕ ಡಾ. ದುರ್ಗೇಶ ಪೂಜಾರ ಸಮಗ್ರ ಮತ್ತು ಸುಸ್ಥಿರ ಜಿಲ್ಲಾ ಅಭಿವೃದ್ಧಿ ದೂರದೃಷ್ಟಿ ಯೋಜನೆ-2031 ವರದಿ ತಯಾರಿಸುವ ಕುರಿತು ಅಧಿಕಾರಿಗಳಿಗೆ ಸವಿವರವಾದ ಮಾಹಿತಿ ನೀಡಿದರು.ಈ ಕಾರ್ಯಾಗಾರದಲ್ಲಿ ಜಿಪಂ ಯೋಜನಾಧಿಕಾರಿ ಡಿ.ಮಂಜುನಾಥ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಂಜುನಾಥ ಗುಂಡೂರ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಅಜ್ಜಪ್ಪ ಸೊಗಲದ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ವೈ.ಶೆಟ್ಟೆಪ್ಪನವರ್, ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಜಗದೀಶ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ವಿಠಲ ಜಾಬಗೌಡರ್, ಲೀಡಬ್ಯಾಂಕ್ ಮ್ಯಾನೇಜರ್ ಮಾರುತಿ ಸೇರಿದಂತೆ ಇತರೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.