ಪ್ರಜಾಸೇವಾ ಆಂದೋಲನ ಸಭೆಗಳಲ್ಲಿ ಬರುವ ಅರ್ಜಿಗಳನ್ನು ಇಲಾಖೆಗಳ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿ ಸೂಕ್ತ ನ್ಯಾಯ ಒದಗಿಸಬೇಕು. ಯಾವುದೇ ಅರ್ಜಿಯನ್ನು ವಿನಾಕಾರಣ ಇಲಾಖೆಯಿಂದ ಇಲಾಖೆಗೆ ವರ್ಗಾಹಿಸುವ ಕೆಲಸ ಮಾಡಬಾರದು. ಸಾರ್ವಜನಿಕರ ಅಹವಾಲಿಗೆ ಸೂಕ್ತ ರೀತಿಯಲ್ಲಿ ಸ್ಪಂದಿಸಿ, ಶೀಘ್ರ ಪರಿಹರಿಸಬೇಕು ಎಂದು ಶಾಸಕ ಡಿ.ಜಿ.ಶಾಂತನಗೌಡ ನ್ಯಾಮತಿಯಲ್ಲಿ ಸೂಚಿಸಿದ್ದಾರೆ.
- ಚಿ.ಕಡದಕಟ್ಟೆಯಲ್ಲಿ ಗ್ರಾಮಮಟ್ಟದ ಪ್ರಜಾಸೇವಾ ಆಂದೋಲನ ಸಭೆ
- - -ನ್ಯಾಮತಿ: ಪ್ರಜಾಸೇವಾ ಆಂದೋಲನ ಸಭೆಗಳಲ್ಲಿ ಬರುವ ಅರ್ಜಿಗಳನ್ನು ಇಲಾಖೆಗಳ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿ ಸೂಕ್ತ ನ್ಯಾಯ ಒದಗಿಸಬೇಕು. ಯಾವುದೇ ಅರ್ಜಿಯನ್ನು ವಿನಾಕಾರಣ ಇಲಾಖೆಯಿಂದ ಇಲಾಖೆಗೆ ವರ್ಗಾಹಿಸುವ ಕೆಲಸ ಮಾಡಬಾರದು. ಸಾರ್ವಜನಿಕರ ಅಹವಾಲಿಗೆ ಸೂಕ್ತ ರೀತಿಯಲ್ಲಿ ಸ್ಪಂದಿಸಿ, ಶೀಘ್ರ ಪರಿಹರಿಸಬೇಕು ಎಂದು ಶಾಸಕ ಡಿ.ಜಿ.ಶಾಂತನಗೌಡ ಸೂಚಿಸಿದರು.
ತಾಲೂಕಿನ ಗೋವಿನಕೋವಿ ಹೋಬಳಿಯ ಚಿ.ಕಡದಕಟ್ಟೆ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ಆವರಣದಲ್ಲಿ ನಡೆದ ಗ್ರಾಮ ಮಟ್ಟದ ಪ್ರಜಾಸೇವಾ ಆಂದೋಲನ ಸಭೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸರ್ಕಾರ ಆಡಳಿತದಲ್ಲಿ ಸುಧಾರಣೆ ತರುವ ಉದ್ದೇಶ ಹೊಂದಿದೆ. ಜನರ ಅಹವಾಲುಗಳನ್ನು ಸ್ಥಳದಲ್ಲಿಯೇ ನಿವಾರಣೆ ಮಾಡಲು ಪ್ರಜಾಸೇವಾ ಆಂದೋಲನ ಸಭೆಗಳನ್ನು ನಡೆಸುತ್ತಿದೆ. ಜನಸಾಮಾನ್ಯರ ಸಮಸ್ಯೆಗಳನ್ನು ಆದ್ಯತೆ ಮೇಲೆ ಬಗೆಹರಿಸುವಂತೆ ಅಧಿಕಾರಿಗಳಿಗೆ ಹೇಳಿದರು.ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ ಸ್ಥಳದಲ್ಲಿಯೇ ಪರಿಹಾರ ನೀಡಬೇಕು ಎಂಬ ಆಶಯದಂತೆ ಸರ್ಕಾರ ಪ್ರಜಾಸೇವಾ ಆಂದೋಲನ ಸಭೆಗಳನ್ನು ಎಲ್ಲ ಜಿಲ್ಲಾ, ತಾಲೂಕು, ಗ್ರಾಮ ಮಟ್ಟದಲ್ಲಿ ಅಧಿಕಾರಿಗಳ ಸಮ್ಮುಖ ಪ್ರತಿ ಶನಿವಾರ ಆಯೋಜಿಸಲಾಗುತ್ತಿದೆ. ಜನರ ಸಮಸ್ಯೆಗಳನ್ನು ಅರಿಯಲು ಇದೊಂದು ಉತ್ತಮ ಅವಕಾಶವಾಗಿದೆ. ಸೇವೆಯೇ ನಮ್ಮ ಧರ್ಮ ಎಂಬ ಮನೋಭಾವದಿಂದ ಸಾರ್ವಜನಿಕರ ಅಹವಾಲುಗಳಿಗೆ ಸ್ಪಂದಿಸಿ ಪರಿಹಾರ ಕಲ್ಪಿಸಬೇಕು ಎಂದು ಹೇಳಿದರು.
ತಹಸೀಲ್ದಾರ್ ವಿಶ್ವನಾಥ ಮುರಿಡಿ ಮಾತನಾಡಿ, ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಪ್ರಜಾಸೇವಾ ಆಂದೋಲನ ಸಭೆಗಳನ್ನು ಪ್ರತಿ ಶನಿವಾರ ತಾಲೂಕಿನ ವಿವಿಧೆಡೆಗಳಲ್ಲಿ ಆಯೋಜಿಸುವ ಮೂಲಕ ಸಾರ್ವಜನಿಕರ ಅಹವಾಲುಗಳಿಗೆ ಪರಿಹಾರ ಕಲ್ಪಿಸುವ ಕೆಲಸ ಮಾಡಲಾಗುತ್ತಿದೆ. ಈ ಸಂಬಂಧ ನ್ಯಾಮತಿ ತಾ.ಪಂ.-6, ಕಂದಾಯ ಇಲಾಖೆ-10, ಹೊನ್ನಾಳಿ ತಾ.ಪಂ.-2, ಒಟ್ಟು 19 ಅರ್ಜಿಗಳು ಸ್ವೀಕೃತವಾಗಿದ್ದು ಎಲ್ಲಾ ಸ್ವೀಕೃತ ಅರ್ಜಿಗಳನ್ನು ಐಪಿಜಿಆರ್ಎಸ್ ಪೋರ್ಟಲ್ನಲ್ಲಿ ಅಪ್ಲೋಡ್ ಮಾಡುವ ಮೂಲಕ ಪರಿಹಾರವನ್ನು ನೀಡಲಾಗುವುದು ಎಂದು ಹೇಳಿದರು.ಗ್ರೇಡ್-2 ತಹಸೀಲ್ದಾರ್ ಎಚ್.ಬಿ.ಗೋವಿಂದಪ್ಪ, ನ್ಯಾಮತಿ-ಹೊನ್ನಾಳಿ ಇಒ ಧರಣೇಶ್, ಸಮಾಜ ಕಲ್ಯಾಣ ಇಲಾಖೆಯ ಉಮಾ, ಶಿರಸ್ತೇದಾರರಾದ ಕೆಂಚಮ್ಮ, ಸಂತೋಷ್, ಆರ್ಐ ಸಂತೋಷ್, ವಿಐ, ಎಂ.ಟಿ.ಪಾಟೀಲ್, ಎಫ್ಡಿಎ ಧನುಷ್, ಎಸ್ಡಿಎ ಮೇಘರಾಜ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.
- - --ಚಿತ್ರ:
ಕಾರ್ಯಕ್ರಮಲ್ಲಿ ಶಾಸಕ ಡಿ.ಜಿ.ಶಾಂತನಗೌಡ ಮಾತನಾಡಿದರು.