ತರೀಕೆರೆಸರ್ಕಾರಿ ಕಚೇರಿಗಳಲ್ಲಿ ಸಮಸ್ಯೆಗಳು ತುಂಬಾ ಇವೆ. ಅಧಿಕಾರಿಗಳು ಎಚ್ಚರಿಕೆಯಿಂದ ಕೆಲಸ ಮಾಡಬೇಕು ಎಂದು ಲೋಕಾಯುಕ್ತ ಡಿವೈಎಸ್ಪಿ ತಿರುಮಲೇಶ್ ಹೇಳಿದರು
ತರೀಕೆರೆಯಲ್ಲಿ ಲೋಕಾಯುಕ್ತ ಜನಸಂಪರ್ಕ ಸಭೆ
ಕನ್ನಡಪ್ರಭ ವಾರ್ತೆ, ತರೀಕೆರೆಸರ್ಕಾರಿ ಕಚೇರಿಗಳಲ್ಲಿ ಸಮಸ್ಯೆಗಳು ತುಂಬಾ ಇವೆ. ಅಧಿಕಾರಿಗಳು ಎಚ್ಚರಿಕೆಯಿಂದ ಕೆಲಸ ಮಾಡಬೇಕು ಎಂದು ಲೋಕಾಯುಕ್ತ ಡಿವೈಎಸ್ಪಿ ತಿರುಮಲೇಶ್ ಹೇಳಿದರು.
ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ ಲೋಕಾಯುಕ್ತ ಜನ ಸಂಪರ್ಕ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಅಧಿಕಾರಿಗಳು, ನೌಕರರು ತಮ್ಮ ನೌಕರಿಗೆ ತೊಂದರೆ ಮಾಡಿ ಕೊಳ್ಳ ದಂತೆ ಕರ್ತವ್ಯ ನಿರ್ವಹಿಸಬೇಕು. ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳನ್ನು ಬೇರೆಡೆ ಕಳುಹಿಸಿ ದಂತೆ ಚಿಕಿತ್ಸೆ ಕೊಡಬೇಕು ಎಂದು ಹೇಳಿದರು.ಕುಡಿಯುವ ನೀರಿಗಾಗಿ ಅಗೆದಿರುವ ಗುಂಡಿಗಳನ್ನು ಮುಚ್ಚಲು ಕ್ರಮವಹಿಸಬೇಕು ಎಂದು ಹೇಳಿದರು.ಪುರಸಭೆ ಮಾಜಿ ಅಧ್ಯಕ್ಷ ಟಿ.ಎಸ್.ಪ್ರಕಾಶ್ ವರ್ಮಾ ಮಾತನಾಡಿ, ಪುರಸಭೆ ಎಸ್,ಎಫ್. ಸಿ ಮತ್ತು 15ನೇ ಹಣಕಾಸು ಯೋಜನೆ ಅನುದಾನದಲ್ಲಿ ಕಾಮಗಾರಿ ನಿರ್ವಹಿಸುತ್ತಿಲ್ಲ. ಹಣ ಇಲ್ಲ ಎಂದು ಹೇಳುತ್ತಾರೆ ಎಂದು ದೂರಿದರು.ಲೋಕಾಯುಕ್ತ ಇನ್ಸ್ ಪೆಕ್ಟರ್ ಮಲ್ಲಿಕಾರ್ಜುನ್ ಮಾತನಾಡಿ, ಆರ್ ಟಿಐ ನಲ್ಲಿ ಸಲ್ಲಿಕೆಯಾದ ಅರ್ಜಿಗಳಿಗೆ ಉತ್ತರ ನೀಡದಿದ್ದರೆ ಮೇಲ್ಮನವಿ ಸಲ್ಲಿಸಬಹುದು. ಅದು ನಮ್ಮ ವ್ಯಾಪ್ತಿಗೆ ಬರುವುದಿಲ್ಲ. ಲೋಕಾಯುಕ್ತ ಅಧಿಕಾರಿಗಳು ಎಂದು ಸುಳ್ಳು ಹೇಳಿ ಕೆಲವರು ಸರ್ಕಾರಿ ಅಧಿಕಾರಿಗಳಿಗೆ ವಂಚಿಸಿ, ಬ್ಲಾಕ್ ಮೇಲ್ ಮಾಡುತ್ತಿ ದ್ದಾರೆ ಅಂತಹ ಮಾಹಿತಿಗಳು ದೊರೆತರೆ ನಮ್ಮ ಗಮನಕ್ಕೆ ತರಬೇಕು. ಇಲ್ಲದಿದ್ದರೆ ಸ್ಥಳೀಯ ಪೊಲೀಸ್ ಠಾಣೆಗೆ ದೂರು ನೀಡಬೇಕು ಎಂದು ಹೇಳಿದರು.ತಹಸೀಲ್ದಾರ್ ವಿಶ್ವಜಿತ ಮೇಹತ ಮತ್ತಿತರ ಅಧಿಕಾರಿಗಳು ಇದ್ದರು.-----------------ಫೋಟೋ ಇದೆಃ22ಕೆಟಿಆರ್.ಕೆ10ಃ ತರೀಕೆರೆ.ಯಲ್ಲಿ ಏರ್ಪಾಡಾಗಿದ್ದ ಲೋಕಾಯುಕ್ತ ಜನಸಂಪರ್ಕ ಸಭೆಯಲ್ಲಿ ಲೋಕಾಯುಕ್ತ ಡಿವೈಎಸ್ಪಿ ತಿರುಮಲೇಶ್ ಅವರು ಮಾತನಾಡಿದರು. ಲೋಕಾಯುಕ್ತ ಇನ್ಸ್ ಪೆಕ್ಟರ್ ಮಲ್ಲಿಕಾರ್ಜುನ್, ತಹಶೀಲ್ದಾರ್ ವಿಶ್ವಜಿತ್ ಮೇಹತ ಮತ್ತಿತರರು ಇದ್ದಾರೆ.