ಕನ್ನಡಪ್ರಭ ವಾರ್ತೆ ಬೆಳಗಾವಿ ಯಾವ ಗ್ರಾಮಗಳಲ್ಲೂ ಕುಡಿಯುವ ನೀರಿನ ಪೂರೈಕೆಯಲ್ಲಿ ಕೊರತೆಯಾಗದಂತೆ ಸಂಬಂಧಪಟ್ಟ ಅಧಿಕಾರಿಗಳು ತುರ್ತಾಗಿ ಕ್ರಮವಹಿಸಬೇಕು ಎಂದು ಜಿಪಂ ಸಿಇಒ ರಾಹುಲ್ ಶಿಂಧೆ ಸೂಚನೆ ನೀಡಿದರು.

ಕನ್ನಡಪ್ರಭ ವಾರ್ತೆ ಬೆಳಗಾವಿಯಾವ ಗ್ರಾಮಗಳಲ್ಲೂ ಕುಡಿಯುವ ನೀರಿನ ಪೂರೈಕೆಯಲ್ಲಿ ಕೊರತೆಯಾಗದಂತೆ ಸಂಬಂಧಪಟ್ಟ ಅಧಿಕಾರಿಗಳು ತುರ್ತಾಗಿ ಕ್ರಮವಹಿಸಬೇಕು ಎಂದು ಜಿಪಂ ಸಿಇಒ ರಾಹುಲ್ ಶಿಂಧೆ ಸೂಚನೆ ನೀಡಿದರು.

ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಮಂಗಳವಾರ ಕುಡಿಯುವ ನೀರು ಹಾಗೂ ಮೇವು ಪೂರೈಕೆ ಕುರಿತು ಜಿಲ್ಲಾ, ತಾಲೂಕು ಮತ್ತು ಗ್ರಾಪಂಮಟ್ಟದ ಅಧಿಕಾರಿಗಳಿಗೆ ಹಮ್ಮಿಕೊಂಡಿದ್ದ ವೀಡಿಯೋ ಸಂವಾದ ಸಭೆಯಲ್ಲಿ ಮಾತನಾಡಿದರು. ನೀರಿನ ಕೊರತೆ ಎದುರಾಗಿರುವಂತ ಗ್ರಾಮಗಳಲ್ಲಿ ಕಡ್ಡಾಯವಾಗಿ ಪ್ರತಿದಿನ ಅಥವಾ ಒಂದು ದಿನ ಬಿಟ್ಟು ಒಂದು ದಿನ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಬೇಕು. ಜನರಿಗೆ ನೀರಿನ ಬಳಕೆಯ ಕುರಿತು ಜಾಗೃತಿ ಮೂಡಿಸಬೇಕು ಎಂದು ನಿರ್ದೇಶನ ನೀಡಿದರು.

ಖಾಸಗಿ ಬೋರವೆಲ್‌ಗಳನ್ನು ಗುರುತಿಸಿ:

ಮೇ ತಿಂಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಬಹುದಾದಂತಹ ಗ್ರಾಮಗಳಲ್ಲಿ ಕನಿಷ್ಟ ಮೂರು ಖಾಸಗಿ ಬೋರವೆಲ್ ಗಳನ್ನು ಗುರುತಿಸಿ ಇಟ್ಟುಕೊಳ್ಳಬೇಕು. ಅಗತ್ಯಬಿದ್ದರೆ ಸಂಬಂಧಪಟ್ಟವರನ್ನು ಸಂಪರ್ಕಿಸಿ ತುರ್ತಾಗಿ ನೀರು ಪೂರೈಸಲು ಕ್ರಮವಹಿಸಬೇಕು. ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ಮುನ್ನೆಚ್ಚರಿಕೆ ಸಿದ್ಧತೆ ಕೈಗೊಳ್ಳಬೇಕು. ಗ್ರಾಮಗಳಲ್ಲಿ ಜಾನುವಾರುಗಳಿಗೆ ಕುಡಿಯುವ ನೀರಿನ ತೊಟ್ಟಿಗಳನ್ನು ನಿರ್ಮಿಸಬೇಕು ಎಂದು ಸೂಚಿಸಿದರು.

ತಾಲೂಕ ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು, ಗ್ರಾಪಂ ಆಡಳಿತಾಧಿಕಾರಿಗಳು, ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು ಹಾಗೂ ಸಂಬಂಧಪಟ್ಟ ಇಂಜಿನಿಯರ್‌ಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಕುಡಿಯುವ ನೀರಿನ ಕುಂದುಕೊರತೆಗಳಿಗೆ ತ್ವರಿತವಾಗಿ ಸ್ಪಂದಿಸಬೇಕು ಎಂದು ಸೂಚನೆ ನೀಡಿದರು.ಈಗಾಗಲೇ ತಾಲೂಕು ಮಟ್ಟದಲ್ಲಿ ಟಾಸ್ಕ್‌ಪೋರ್ಸ್ ಸಭೆಗಳನ್ನು ನಡೆಸಲಾಗಿದೆ. ಮುಂಬರುವ ದಿನಗಳಲ್ಲಿ ಮತ್ತೊಮ್ಮೆ ಸಭೆ ನಡೆಸಿ ಕುಡಿಯುವ ನೀರಿನ ಕೊರತೆಯಾಗದಂತೆ ಎಚ್ಚರ ವಹಿಸಬೇಕು. ನೀರಿನ ಟ್ಯಾಂಕರ್ ಗಳನ್ನು ನಿಯಮಿತವಾಗಿ ಸ್ವಚ್ಛಗೊಳಿಸಬೇಕು. ಸ್ವಚ್ಛಗೊಳಿಸಿರುವ ಕುರಿತು ಪೇಂಟ್ ಮೂಲಕ ದಿನಾಂಕಗಳನ್ನು ಬರೆಯಿಸಬೇಕು ಎಂದು ಸೂಚಿಸಿದರು.ಸಹಾಯವಾಣಿ ಕೇಂದ್ರ ಸ್ಥಾಪಿಸಿ: ಎಲ್ಲ ತಾಲೂಕುಗಳಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಸಹಾಯವಾಣಿ ಕೇಂದ್ರ ಸ್ಥಾಪಿಸಿ, ದೂರುಗಳು ಬಂದರೆ ತುರ್ತಾಗಿ ಕ್ರಮವಹಿಸಬೇಕು. ಸಹಾಯವಾಣಿ ಸಂಖ್ಯೆಯ ಕುರಿತು ಪ್ರಚಾರ ಮಾಡುವಂತೆ ನಿರ್ದೇಶನ ನೀಡಿದರು.

------ಬಾಕ್ಸ್‌

ತಾಲೂಕಾವಾರು ಸಹಾಯವಾಣಿ ಸಂಖ್ಯೆಅಥಣಿ: 9480854100/ 9342399715

ಬೆಳಗಾವಿ: 9480854110/ 8971012514

ಬೈಲಹೊಂಗಲ: 9480854105/ 9900575555

ಚಿಕ್ಕೋಡಿ: 9480854115/ 9483250767

ಗೋಕಾಕ: 9480854120/ 9448640217

ಹುಕ್ಕೇರಿ: 9480854125/ 9113047775

ಕಾಗವಾಡ: 9448121173/ 9342399715

ಖಾನಾಪೂರ: 9480854130/ 9972691008

ಕಿತ್ತೂರ: 9019795554/ 9900575555

ಮೂಡಲಗಿ: 8861958929/ 9448640217

ನಿಪ್ಪಾಣಿ: 8722384524/ 9483250767

ರಾಮದುರ್ಗ: 9480854140/ 9481160120

ರಾಯಬಾಗ: 9480854135/ 9945250262

ಸವದತ್ತಿ- 9480854145/ 9900537972