ತೈಲ ಬೆಲೆ ಏರಿಕೆ ನಿರ್ಧಾರ ಹಿಂಪಡೆಯಬೇಕು: ಎಂ.ಕೆ. ಪ್ರಾಣೇಶ್‌ ಆಗ್ರಹ

| Published : Jun 18 2024, 12:45 AM IST

ತೈಲ ಬೆಲೆ ಏರಿಕೆ ನಿರ್ಧಾರ ಹಿಂಪಡೆಯಬೇಕು: ಎಂ.ಕೆ. ಪ್ರಾಣೇಶ್‌ ಆಗ್ರಹ
Share this Article
  • FB
  • TW
  • Linkdin
  • Email

ಸಾರಾಂಶ

ಚಿಕ್ಕಮಗಳೂರು, ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಪರಾಭವಗೊಂಡಿದ್ದರಿಂದ ಕಾಂಗ್ರೆಸ್‌ ಸರ್ಕಾರ ತೈಲ ಬೆಲೆ ಏರಿಕೆ ಮಾಡಿದೆ. ಇದು, ಸ್ವಾರ್ಥ ಹಾಗೂ ದ್ವೇಷದ ರಾಜಕಾರಣ, ಎಲ್ಲಾ ವರ್ಗದ ಜನ ಜೀವನದ ಮೇಲೆ ದುಷ್ಪರಿಣಾಮ ಬೀರಲಿರುವ ಬೆಲೆ ಏರಿಕೆ ನಿರ್ಧಾರವನ್ನು ಕೂಡಲೇ ಹಿಂಪಡೆಯಬೇಕು ಎಂದು ವಿಧಾನ ಪರಿಷತ್ ಉಪ ಸಭಾಪತಿ ಎಂ.ಕೆ. ಪ್ರಾಣೇಶ್‌ ಒತ್ತಾಯಿಸಿದ್ದಾರೆ.

ಕಾಂಗ್ರೆಸ್‌ ಪಕ್ಷದಿಂದ ಸ್ವಾರ್ಥ । ದ್ವೇಷದ ರಾಜಕಾರಣ । ಸಿಎಂ ರಾಜೀನಾಮೆ ನೀಡಬೇಕು: ಒತ್ತಾಯ

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು

ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಪರಾಭವಗೊಂಡಿದ್ದರಿಂದ ಕಾಂಗ್ರೆಸ್‌ ಸರ್ಕಾರ ತೈಲ ಬೆಲೆ ಏರಿಕೆ ಮಾಡಿದೆ. ಇದು, ಸ್ವಾರ್ಥ ಹಾಗೂ ದ್ವೇಷದ ರಾಜಕಾರಣ, ಎಲ್ಲಾ ವರ್ಗದ ಜನ ಜೀವನದ ಮೇಲೆ ದುಷ್ಪರಿಣಾಮ ಬೀರಲಿರುವ ಬೆಲೆ ಏರಿಕೆ ನಿರ್ಧಾರವನ್ನು ಕೂಡಲೇ ಹಿಂಪಡೆಯಬೇಕು ಎಂದು ವಿಧಾನ ಪರಿಷತ್ ಉಪ ಸಭಾಪತಿ ಎಂ.ಕೆ. ಪ್ರಾಣೇಶ್‌ ಒತ್ತಾಯಿಸಿದ್ದಾರೆ.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಈ ಪ್ರಮಾಣದಲ್ಲಿ ಬೆಲೆ ಏರಿಕೆ ಮಾಡಿರುವುದು ಪ್ರಥಮ. ಜನರಿಗೆ ಬಿಟ್ಟಿ ಭಾಗ್ಯ ಕೊಟ್ಟು, ಆರ್ಥಿಕ ಸಂಕಷ್ಟ ಎದುರಾಗಿದೆ. ಇದನ್ನು ಸರಿದೂಗಿಸಲು ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ. ಹಾಗಾಗಿ ಬೆಲೆ ಏರಿಕೆ ಮಾಡಿದೆ ಎಂದು ಆರೋಪಿಸಿದರು.

ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಚ್ಚ ವಸ್ತುಗಳ ಬೆಲೆ ಏರಿಕೆಯಾಗಿದ್ದ ಸಂದರ್ಭದಲ್ಲಿ ಬಿಜೆಪಿ ಸರ್ಕಾರ ಆಡಳಿತದಲ್ಲಿದ್ದಾಗ ತೈಲ ಬೆಲೆ ಏರಿಕೆಯನ್ನು 15 ಪೈಸೆ, 50 ಪೈಸೆ ಏರಿಕೆ ಮಾಡಲಾಗಿತ್ತು. ಆದರೆ, ಈಗಿನ ಕಾಂಗ್ರೆಸ್‌ ಸರ್ಕಾರ ಒಂದೇ ಬಾರಿಗೆ ಪೆಟ್ರೋಲ್‌ಗೆ 3 ರು. ಮತ್ತು ಡಿಸೇಲ್‌ಗೆ 3.50 ರು. ಏರಿಕೆ ಮಾಡಿದೆ. ಇದು. ದಿನ ನಿತ್ಯ ಸಾಗಾಣಿಕೆ ವಸ್ತುಗಳ ಬೆಲೆ ಮೇಲೆ ಪರಿಣಾಮ ಬೀರಲಿದೆ ಎಂದು ಹೇಳಿದರು.

ತೈಲ ಬೆಲೆ ಏರಿಕೆ ಬಗ್ಗೆ ಮುಖ್ಯಮಂತ್ರಿಯವರು ಜನರಿಗೆ ನಿಖರವಾದ ಕಾರಣ ತಿಳಿಸಬೇಕು ಎಂದು ಆಗ್ರಹಿಸಿದ ಅವರು, ಬೆಲೆ ಏರಿಕೆ ನಿರ್ಧಾರವನ್ನು ಕೂಡಲೇ ಕೈ ಬಿಡದೆ ಹೋದರೆ ಬಿಜೆಪಿಯಿಂದ ನಿರಂತರವಾಗಿ ಹೋರಾಟ ನಡೆಸಲಾಗುವುದು ಎಂದರು.ಆರ್ಥಿಕ ಸಂಕಷ್ಟ:

ಗ್ಯಾರಂಟಿ ಯೋಜನೆಯಿಂದಾಗಿ ರಾಜ್ಯ ಸರ್ಕಾರದಲ್ಲಿ ಆರ್ಥಿಕ ಸಂಕಷ್ಟ ಎದುರಾಗಿದೆ. ವಿಧಾನಪರಿಷತ್‌ ಸದಸ್ಯರಿಗೆ ಪ್ರತಿ ವರ್ಷ 2 ಕೋಟಿ ರು. ಅನುದಾನ ನೀಡಬೇಕು. ಆದರೆ, ಈವರೆಗೆ ಕೊಟ್ಟಿರುವುದು ಕೇವಲ 50 ಲಕ್ಷ ರು. ಮಾತ್ರ, ರಾಜ್ಯ ಸರ್ಕಾರ ಅಭಿವೃದ್ಧಿ ಕಾಮಗಾರಿಗಳಿಗೆ ಹಣ ನೀಡುತ್ತಿಲ್ಲ. ಈ ಮಾತನ್ನು ಪ್ರತಿಪಕ್ಷದವರು ಮಾತ್ರವಲ್ಲ, ಆಡಳಿತ ಪಕ್ಷದ ಶಾಸಕರೇ ಹೇಳುತ್ತಿದ್ದಾರೆ ಎಂದು ಆರೋಪಿಸಿದರು.

ಕರ್ನಾಟಕ ರಾಜ್ಯ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಸಚಿವ ನಾಗೇಂದ್ರ ರಾಜೀನಾಮೆ ನೀಡಿದ್ದಾರೆ. ಈ ಪ್ರಕರಣದ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಮುಖಂಡರಾದ ಎಚ್‌.ಸಿ. ಕಲ್ಮರುಡಪ್ಪ, ಸೋಮಶೇಖರ್‌, ಹಿರೇಮಗಳೂರು ಪುಟ್ಟಸ್ವಾಮಿ, ಸಚಿನ್‌ ಇದ್ದರು.

-- ಬಾಕ್ಸ್‌ --ತೈಲ ಬೆಲೆ ಏರಿಕೆ : ಇಂದು ಬಿಜೆಪಿ ಪ್ರತಿಭಟನೆಚಿಕ್ಕಮಗಳೂರು: ರಾಜ್ಯ ಸರ್ಕಾರದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಮಂಗಳವಾರ ನಗರ ಬಿಜೆಪಿ ನೇತೃತ್ವದಲ್ಲಿ ಚಿಕ್ಕಮಗಳೂರಿನಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.ಬೆಳಿಗ್ಗೆ 10.30ಕ್ಕೆ ನಗರದ ತಾಲೂಕು ಕಚೇರಿ ಆವರಣದಿಂದ ಪ್ರತಿಭಟನಾ ಮೆರವಣಿಗೆ ಹೊರಟು ಹನುಮಂತಪ್ಪ ಸರ್ಕಲ್, ಎಂ.ಜಿ. ರಸ್ತೆ ಮಾರ್ಗವಾಗಿ ರಾಜ್ಯ ಸರ್ಕಾರದ ಜನ ವಿರೋಧಿ ನೀತಿಗಳ ವಿರುದ್ಧ ಘೋಷಣೆಯೊಂದಿಗೆ ಸಾಗಿ ಆಜಾದ್ ಮೈದಾನದಲ್ಲಿ ಸಮಾವೇಶಗೊಳ್ಳಲಿದೆ ಎಂದು ಬಿಜೆಪಿ ಚಿಕ್ಕಮಗಳೂರು ನಗರಾಧ್ಯಕ್ಷ ಪುಷ್ಪರಾಜ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

17 ಕೆಸಿಕೆಎಂ 1ಎಂ.ಕೆ. ಪ್ರಾಣೇಶ್‌