ಸಾರಾಂಶ
ಚಾಮರಾಜನಗರ: ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ನಿಧನಕ್ಕೆ ತಾಲೂಕು ಒಕ್ಕಲಿಗರ ಸಂಘದ ವತಿಯಿಂದ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ನಗರದ ಕೊಳದ ಬೀದಿಯಲ್ಲಿರುವ ತಾಲೂಕು ಒಕ್ಕಲಿಗರ ಸಮುದಾಯ ಭವನದಲ್ಲಿ ನಡೆದ ಶ್ರದ್ಧಾಂಜಲಿ ಸಭೆಯಲ್ಲಿ ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ, ನಗರಸಭಾ ಸದಸ್ಯ ಸುದರ್ಶನಗೌಡ ಪುಷ್ಪಾರ್ಚನೆ ಮಾಡಿ ಮಾತನಾಡಿದರು.ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು ಕರ್ನಾಟಕ ಕಂಡ ಅಪರೂಪದ ಮುಖ್ಯಮಂತ್ರಿಯಾಗಿದ್ದು, ಬೆಂಗಳೂರು ನಗರವನ್ನು ಸಿಂಗಾಪುರ ಮಾಡುವ ಕನಸಿನೊಂದಿಗೆ ಸಿಲಿಕಾನ್ ಸಿಟಿ ಮಾಡಲು ಶ್ರಮಿಸಿದ್ದರು. ವಿಧಾನಸೌಧ ಪಕ್ಕದಲ್ಲಿ ಅದರ ಪ್ರತಿಕೃತಿಯಂತೆ ವಿಕಾಸಸೌಧ ನಿರ್ಮಿಸಿದರು. ವಿಕಾಸಸೌಧ ನಿರ್ಮಾತ್ಮ ಎನ್ನುವ ಹೆಗ್ಗಳಿಕೆ ಪಡೆದುಕೊಂಡರು. ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಅವರ ನಿಧನದಿಂದ ರಾಜ್ಯಕ್ಕೆ ತುಂಬಲಾರದ ನಷ್ಟ ಉಂಟಾಗಿದೆ ಭಗವಂತ ಅವರ ಆತ್ಮಕ್ಕೆ ಶಾಂತಿ ನೆಲೆಸಲಿ ಅವರ ಕುಟುಂಬಕ್ಕೆ ದು:ಖ ಭರಿಸುವ ಶಕ್ತಿ ನೀಡಲಿ ಎಂದು ಆಶಿಸಿದರು.
ಸಭೆಯಲ್ಲಿ ತಾಲೂಕು ಒಕ್ಕಲಿಗರ ಸಂಘದ ಗೌರವಾಧ್ಯಕ್ಷ ಕೆ.ಪುಟ್ಟಸ್ವಾಮಿಗೌಡ, ಉಪಾಧ್ಯಕ್ಷ ಚಿನ್ನುಮುತ್ತು, ಪ್ರಧಾನ ಕಾರ್ಯದರ್ಶಿ ಸೋಮಶೇಖರ್, ಸಹ ಕಾರ್ಯದರ್ಶಿ ಸಿ.ಬಿ.ನಾಗೇಂದ್ರ, ನಿರ್ದೇಶಕರಾದ ಮಹೇಶ್‌ಗೌಡ, ಮಣಿ ಮಾಸ್ಟರ್, ಮರಿಸ್ವಾಮಿ, ಪುರುಷೋತ್ತಮ್, ಅರುಣ್ ಕುಮಾರ್ ಇತರರು ಹಾಜರಿದ್ದರು.ಎಸ್.ಎಂ.ಕೃಷ್ಣ ನಿಧನಕ್ಕೆ ಶಾಸಕ ಗಣೇಶ್ ಸಂತಾಪಗುಂಡ್ಲುಪೇಟೆ: ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಹಾಗೂ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಎಸ್.ಜಯಣ್ಣ ಅವರ ನಿಧನಕ್ಕೆ ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಸಂತಾಪ ಸೂಚಿಸಿದ್ದಾರೆ.ಮಾಜಿ ಸಚಿವೆ ಡಾ.ಗೀತಾ ಮಹದೇವ ಪ್ರಸಾದ್, ಮಾಜಿ ಸಂಸದ ಎ.ಸಿದ್ದರಾಜು, ಮಾಜಿ ಶಾಸಕ ಸಿ.ಎಸ್.ನಿರಂಜನ್ ಕುಮಾರ್, ಕಾಡ ಮಾಜಿ ಅಧ್ಯಕ್ಷ ಎಚ್.ಎಸ್.ನಂಜಪ್ಪ, ಜಿಲ್ಲಾ ಯೂನಿಯನ್ ಅಧ್ಯಕ್ಷ ಎಚ್.ಎಸ್.ನಂಜುಂಡ ಪ್ರಸಾದ್, ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಆಲತ್ತೂರು ಜಯರಾಂ, ಜಿಪಂ ಮಾಜಿ ಅಧ್ಯಕ್ಷ ಬಿ.ಎಂ.ಮುನಿರಾಜು, ಮಾಜಿ ಉಪಾಧ್ಯಕ್ಷ ಕೆ.ಎಸ್.ಮಹೇಶ್, ಎಂಸಿ ಡಿಸಿಸಿ ಬ್ಯಾಂಕ್ ಮಾಜಿ ಉಪಾಧ್ಯಕ್ಷ ಎಂ.ಪಿ.ಸುನೀಲ್, ಜಿಪಂ ಮಾಜಿ ಸದಸ್ಯ ಕೆರಹಳ್ಳಿ ನವೀನ್, ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಪಿ.ಬಿ.ರಾಜಶೇಖರ್, ಪುರಸಭೆ ಅಧ್ಯಕ್ಷ ಕಿರಣ್ ಗೌಡ, ಜಿಲ್ಲಾ ಕಸಾಪ ಅಧ್ಯಕ್ಷ ಎಂ.ಶೈಲಕುಮಾರ್, ಕಾಂಗ್ರೆಸ್ ಮುಖಂಡರಾದ ಪಿ.ಸುರೇಂದ್ರ, ಬಿ.ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ.