ಕನ್ನಡಪ್ರಭ ವಾರ್ತೆ ಬೆಳಗಾವಿ ಹಳೆಯ ವೈಷಮ್ಯ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬನನ್ನು ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಹತ್ಯೆ ಮಾಡಿರುವ ಘಟನೆ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ಸೋಮವಾರ ರಾತ್ರಿ ನಡೆದಿದೆ. ಸಂಗನಗೌಡ ಬಸನಗೌಡ ಪಾಟೀಲ (45) ಕೊಲೆಯಾದ ವ್ಯಕ್ತಿ. ಕೊಲೆ ಮಾಡಿರುವ ಆರೋಪಿಗಳೊಂದಿಗೆ ಕಳೆದ ಕೆಲವು ವರ್ಷಗಳಿಂದ ಕಲಹ ನಡೆಯುತ್ತಿತ್ತು ಎನ್ನಲಾಗಿದೆ.
ಕನ್ನಡಪ್ರಭ ವಾರ್ತೆ ಬೆಳಗಾವಿ
ಹಳೆಯ ವೈಷಮ್ಯ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬನನ್ನು ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಹತ್ಯೆ ಮಾಡಿರುವ ಘಟನೆ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ಸೋಮವಾರ ರಾತ್ರಿ ನಡೆದಿದೆ. ಸಂಗನಗೌಡ ಬಸನಗೌಡ ಪಾಟೀಲ (45) ಕೊಲೆಯಾದ ವ್ಯಕ್ತಿ. ಕೊಲೆ ಮಾಡಿರುವ ಆರೋಪಿಗಳೊಂದಿಗೆ ಕಳೆದ ಕೆಲವು ವರ್ಷಗಳಿಂದ ಕಲಹ ನಡೆಯುತ್ತಿತ್ತು ಎನ್ನಲಾಗಿದೆ.ಗ್ರಾಮದಲ್ಲಿ ನಡೆದ ಸಿದ್ದೇಶ್ವರ ಜಾತ್ರೆಯ ವೇಳೆ ಈ ದುರ್ಘಟನೆ ಸಂಭವಿಸಿದೆ. ಮದ್ಯಪಾನ ಮಾಡಿ ನೃತ್ಯ ಮಾಡುತ್ತ ಬಂದಿದ್ದ ಸಂಗನಗೌಡನ ಮೇಲೆ ಸುಮಾರು 16 ಜನರ ತಂಡ ಬಂದು ಏಕಾಏಕಿ ದಾಳಿ ನಡೆಸಿದೆ. ರಾಡ್ ಹಾಗೂ ಕಟ್ಟಿಗೆಗಳಿಂದ ಭೀಕರವಾಗಿ ಹಲ್ಲೆ ನಡೆಸಿ ಕೊಲೆ ಮಾಡಲಾಗಿದೆ ಎಂದು ಮೃತನ ಸಹೋದರ ಶಂಕರಗೌಡ ಪಾಟೀಲ ಆರೋಪಿಸಿದ್ದಾರೆ. ಹಳೆಯ ವೈಷಮ್ಯವೇ ಈ ಘಟನೆಗೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ನೇಸರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.--------