ಸಾರಾಂಶ
ರಾಜ್ಯದಲ್ಲಿ ಬರಗಾಲ ಹಿನ್ನೆಲೆ ರೈತರಿಗೆ ಎಕರೆಗೆ ₹20 ಸಾವಿರ ಸಹಾಯಧನ ನೀಡಬೇಕು. ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಬೇಕು. ಮನೆ ಇಲ್ಲದವರಿಗೆ ಮನೆ ನೀಡಬೇಕು. ಎಲ್ಲ ನೀರಾವರಿ ಯೋಜನೆಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು. ಪಹಣಿ ಸೇರಿದಂತೆ ವಿವಿಧ ಪ್ರಮಾಣ ಪತ್ರ ಪಡೆಯಲು ಹೆಚ್ಚಿಸಿರುವ ಶುಲ್ಕವನ್ನು ಇಳಿಸಬೇಕು ಎಂದು ಒತ್ತಾಯಿಸಿದರು. ರಕ್ತದಾನ ಮಾಡುವವರು ಮೊ.9449968599, 9945525480, 8971868408 ಈ ಮೊಬೈಲ್ ಸಂಖ್ಯೆಗಳಿಗೆ ಸಂಪರ್ಕಿಸಬಹುದು ಎಂದರು.
ಕನ್ನಡಪ್ರಭ ವಾರ್ತೆ ಶಿವಮೊಗ್ಗ
ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ರೋಟರಿ ರಕ್ತನಿಧಿ ಸಭಾಂಗಣದಲ್ಲಿ ಡಿ.21ರಂದು ಬೆಳಗ್ಗೆ 10 ಗಂಟೆಗೆ ರೈತ ಸಂಘ ಸಂಸ್ಥಾಪಕ ಎನ್.ಡಿ. ಸುಂದರೇಶ್ ನೆನಪಿನ ಸಭೆ ಹಾಗೂ ರಕ್ತದಾನ ಶಿಬಿರ ಆಯೋಜಿಸಲಾಗಿದೆ ಎಂದು ರೈತ ಸಂಘ ರಾಜ್ಯಾಧ್ಯಕ್ಷ ಎಚ್.ಆರ್. ಬಸವರಾಜಪ್ಪ ಹೇಳಿದರು. ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಎನ್.ಡಿ. ಸುಂದರೇಶ ಅವರು ರೈತ ಸಂಘ ಸಂಸ್ಥಾಪಕರಾಗಿದ್ದಾರೆ. ಆ ಕಾಲಘಟ್ಟದಲ್ಲಿ ರೈತರಿಗೆ, ಕೃಷಿ ಕಾರ್ಮಿಕರಿಗೆ ಆಗುತ್ತಿದ್ದ ಅನ್ಯಾಯ, ಅಸಮಾಧಾನದ ವಿರುದ್ಧ ಯುವಕರನ್ನು ಸಂಘಟಿಸಿದ್ದರು. ರಾಜ್ಯದ ಮೂಲೆ ಮೂಲೆಗೂ ತಿರುಗಿ ಸುಮಾರು 13 ವರ್ಷಗಳ ಕಾಲ ಅವಿಶ್ರಾಂತವಾಗಿ ದುಡಿದು, ಸಂಘಟನೆಯನ್ನು ಬೆಳೆಸಿದವರು. ಅವರ ನೆನಪಿನ ಮೂಲಕ ರೈತ ಸಂಘಟನೆ ಮೂಲ ಆಶಯ ಹೊಸ ಸಮುದಾಯಕ್ಕೆ ತಿಳಿಸುವ ಕೆಲಸ ಮಾಡುತ್ತಿದ್ದೇವೆ ಎಂದರು.ಈ ಕಾರ್ಯಕ್ರಮ ಮೂಲಕ ರೈತ ಸಂಘ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಲಿದೆ. ಈ ಹಿಂದಿನ ಸರ್ಕಾರ ತಂದಿದ್ದ ರೈತವಿರೋಧಿ ಮೂರು ಕೃಷಿ ತಿದ್ದುಪಡಿ ಕಾಯಿದೆಗಳನ್ನು ವಾಪಸ್ ಪಡೆಯಬೇಕು. ವಿದ್ಯುತ್ ಖಾಸಗೀಕರಣ ಮಾಡಬಾರದು. ರೈತರ ಐಪಿ ಸೆಟ್ಟುಗಳಿಗೆ ಸ್ವಯಂ ವೆಚ್ಚದಲ್ಲಿ ಕಂಬ, ತಂತಿ, ಟಿಸಿ ಹಾಕಿಸಿಕೊಳ್ಳಬೇಕೆಂಬ ಆದೇಶ ತೆಗೆದುಹಾಕಬೇಕು ಎಂದು ಆಗ್ರಹಿಸಲಾಗುವುದು ಎಂದರು.
ರಾಜ್ಯದಲ್ಲಿ ಬರಗಾಲ ಹಿನ್ನೆಲೆ ರೈತರಿಗೆ ಎಕರೆಗೆ ₹20 ಸಾವಿರ ಸಹಾಯಧನ ನೀಡಬೇಕು. ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಬೇಕು. ಮನೆ ಇಲ್ಲದವರಿಗೆ ಮನೆ ನೀಡಬೇಕು. ಎಲ್ಲ ನೀರಾವರಿ ಯೋಜನೆಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು. ಪಹಣಿ ಸೇರಿದಂತೆ ವಿವಿಧ ಪ್ರಮಾಣ ಪತ್ರ ಪಡೆಯಲು ಹೆಚ್ಚಿಸಿರುವ ಶುಲ್ಕವನ್ನು ಇಳಿಸಬೇಕು ಎಂದು ಒತ್ತಾಯಿಸಿದರು. ರಕ್ತದಾನ ಮಾಡುವವರು ಮೊ.9449968599, 9945525480, 8971868408 ಈ ಮೊಬೈಲ್ ಸಂಖ್ಯೆಗಳಿಗೆ ಸಂಪರ್ಕಿಸಬಹುದು ಎಂದರು.ಸುದ್ದಿಗೋಷ್ಟಿಯಲ್ಲಿ ಪದಾಧಿಕಾರಿಗಳಾದ ಎಸ್.ಶಿವಮೂರ್ತಿ, ಹಿಟ್ಟೂರು ರಾಜ್, ಕಸೆಟ್ಟಿ ರುದ್ರೇಶ್, ಕೆ.ರಾಘವೇಂದ್ರ, ಪಿ.ಡಿ. ಮಂಜಪ್ಪ, ಗುರುಶಾಂತಪ್ಪ, ಚೇತನ್ ಇದ್ದರು.
- - --ಫೋಟೋ:
ರಾಜ್ಯ ರೈತ ಸಂಘ ಅಧ್ಯಕ್ಷ ಎಚ್.ಆರ್. ಬಸವರಾಜಪ್ಪ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದರು.