9ರಂದು ವಿಶ್ವ ಆದಿವಾಸಿ ದಿನಾಚರಣೆ, ಕಲಾ ಮೇಳ, ಸನ್ಮಾನ

| Published : Aug 06 2024, 12:39 AM IST

9ರಂದು ವಿಶ್ವ ಆದಿವಾಸಿ ದಿನಾಚರಣೆ, ಕಲಾ ಮೇಳ, ಸನ್ಮಾನ
Share this Article
  • FB
  • TW
  • Linkdin
  • Email

ಸಾರಾಂಶ

30ನೇ ವಿಶ್ವ ಆದಿವಾಸಿ ದಿನಾಚರಣೆ ಹಾಗೂ ಆದಿವಾಸಿಗಳ ಕಲಾ ಮೇಳವು ಆ.9ರಂದು ನಗರದ ಬಂಬೂ ಬಜಾರ್ ರಸ್ತೆಯ ಶ್ರೀ ಮಲ್ಲಿಕಾರ್ಜುನ ಕಲ್ಯಾಣ ಮಂದಿರದಲ್ಲಿ ಕರ್ನಾಟಕ ಆದಿವಾಸಿ ರಕ್ಷಣಾ ಪರಿಷತ್ತು, ರಾಯಚೂರು ಜಿಲ್ಲೆ ಕನಕ ಗುರುಪೀಠದ ಶ್ರೀ ಕಾಗಿನೆಲೆ ಮಹಾಸಂಸ್ಥಾನ ಆಶ್ರಯದಲ್ಲಿ ಆ.9ರಂದು ಹಮ್ಮಿಕೊಳ್ಳಲಾಗಿದೆ ಎಂದು ಪರಿಷತ್ತು ಪ್ರಧಾನ ಕಾರ್ಯದರ್ಶಿ ಪಿ.ರಾಜೇಶ ಹೇಳಿದ್ದಾರೆ.

- ದಾವಣಗೆರೆಯಲ್ಲಿ 30ನೇ ಆದಿವಾಸಿ ದಿನಾಚರಣೆಗೆ ಸಿದ್ಧತೆ: ಪಿ.ರಾಜೇಶ

- - - ಕನ್ನಡಪ್ರಭ ವಾರ್ತೆ, ದಾವಣಗೆರೆ

30ನೇ ವಿಶ್ವ ಆದಿವಾಸಿ ದಿನಾಚರಣೆ ಹಾಗೂ ಆದಿವಾಸಿಗಳ ಕಲಾ ಮೇಳವು ಆ.9ರಂದು ನಗರದ ಬಂಬೂ ಬಜಾರ್ ರಸ್ತೆಯ ಶ್ರೀ ಮಲ್ಲಿಕಾರ್ಜುನ ಕಲ್ಯಾಣ ಮಂದಿರದಲ್ಲಿ ಕರ್ನಾಟಕ ಆದಿವಾಸಿ ರಕ್ಷಣಾ ಪರಿಷತ್ತು, ರಾಯಚೂರು ಜಿಲ್ಲೆ ಕನಕ ಗುರುಪೀಠದ ಶ್ರೀ ಕಾಗಿನೆಲೆ ಮಹಾಸಂಸ್ಥಾನ ಆಶ್ರಯದಲ್ಲಿ ಆ.9ರಂದು ಹಮ್ಮಿಕೊಳ್ಳಲಾಗಿದೆ ಎಂದು ಪರಿಷತ್ತು ಪ್ರಧಾನ ಕಾರ್ಯದರ್ಶಿ ಪಿ.ರಾಜೇಶ ಹೇಳಿದರು.

ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗ್ಗೆ 9.30ಕ್ಕೆ ಆದಿವಾಸಿ ಕಲಾ ಮೇಳಗಳ ಮೆರವಣಿಗೆ ಗಾಂಧಿ ವೃತ್ತದ ಮಾರ್ಗವಾಗಿ ಆರಂಭವಾಗಿ ಪಿ.ಬಿ. ರಸ್ತೆ, ಈರುಳ್ಳಿ ಮಾರುಕಟ್ಟೆ, ಬಂಬೂ ಬಜಾರ್ ರಸ್ತೆ ಮಾರ್ಗವಾಗಿ ಸಮಾರಂಭ ಸ್ಥಳವಾದ ಶ್ರೀ ಮಲ್ಲಿಕಾರ್ಜುನ ಸ್ವಾಮಿ ಕಲ್ಯಾಣ ಮಂದಿರವನ್ನು ತಲುಪಲಿದೆ ಎಂದರು.

11.30ಕ್ಕೆ ವೇದಿಕೆ ಕಾರ್ಯಕ್ರಮವು ದೇವದುರ್ಗದ ಶ್ರೀ ಕಾಗಿನೆಲೆ ಮಹಾ ಸಂಸ್ಥಾನದ ಶ್ರೀ ಸಿದ್ದರಾಮಾನಂದ ಸ್ವಾಮೀಜಿ, ಚಿತ್ರದುರ್ಗದ ಶ್ರೀ ಇಮ್ಮಡಿ ಬಸವ ಮೇದಾರ ಕೇತೇಶ್ವರ ಸ್ವಾಮೀಜಿ ಸಾನಿಧ್ಯದಲ್ಲಿ ಪರಿಷತ್ತು ಅಧ್ಯಕ್ಷ ಎಂ.ಕೃಷ್ಣಯ್ಯ ಅಧ್ಯಕ್ಷತೆಯಲ್ಲಿ ಸಮಾರಂಭ ಉದ್ಘಾಟನೆಗೊಳ್ಳಲಿದೆ ಎಂದು ಹೇಳಿದರು.

ಮೂಲ ಆದಿವಾಸಿ ಪಿಎಚ್‌.ಡಿ ಪದವೀಧರರಿಗೆ ಆದಿವಾಸಿ ಸಿರಿ ಪ್ರಶಸ್ತಿಯನ್ನು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ, ಹೆಗ್ಗೋಡೆ ದೇವನಕೋಟೆ ಮೋಥಾ ಹಾಡಿ ವಾಸಿ, ಪದ್ಮಶ್ರೀ ಪುರಸ್ಕೃತ ಸೋಮಣ್ಣ ಪ್ರದಾನ ಮಾಡುವರು. ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ, ಶಾಸಕ ಡಾ.ಶಾಮನೂರು ಶಿವಶಂಕರಪ್ಪ, ವಿಪ ಸದಸ್ಯ ಶಾಂತಾರಾಮ್ ಸಿದ್ದಿ ಭಾಗವಹಿಸುವರು. ಹಂಪಿ ಕನ್ನಡ ವಿವಿ ಬುಡಕಟ್ಟು ಅಧ್ಯಯನ ವಿಭಾಗದ ಮುಖ್ಯಸ್ಥ ಡಾ. ಕೆ.ಎಂ. ಮೈತ್ರಿ ಸನ್ಮಾನ ಸಮಾರಂಭ ನಡೆಸಿಕೊಡುವರು ಎಂದು ತಿಳಿಸಿದರು.

ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೇಶ್‌ ಪ್ರಾಸ್ತಾವಿಕವಾಗಿ ಮಾತನಾಡುವರು. ಶಾಸಕರಾದ ಬಸವರಾಜ ವಿ.ಶಿವಗಂಗಾ, ಕೆ.ಎಸ್.ಬಸವಂತಪ್ಪ, ಬಿ.ಪಿ.ಹರೀಶ, ಡಿ.ಜಿ.ಶಾಂ

ತನಗೌಡ, ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ, ಎಸ್ಪಿ ಉಮಾ ಪ್ರಶಾಂತ, ಎಸ್ಟಿ ಇಲಾಖೆ ಅಧಿಕಾರಿ ಬೇಬಿ ಸುನಿತಾ, ಮೇದಾರ ಸಮಾಜದ ಮುಖಂಡ ಬಸವರಾಜ, ರವಿಕುಮಾರ ಎಂ.ಮೇದಾರ, ಶ್ರೀನಿವಾಸ ಗೌಡ, ಕುಮುತಾ, ಜಿ.ಸ್ವಾಮಿ ಭಾಗವಹಿಸುವರು. ಇದೇ ವೇಳೆ ವರದಿಗಾರರ ಕೂಟದ ಅಧ್ಯಕ್ಷ, ಕನ್ನಡಪ್ರಭದ ಹಿರಿಯ ಪ್ರಧಾನ ವರದಿಗಾರ ನಾಗರಾಜ ಎಸ್. ಬಡದಾಳ, ಪ್ರಧಾನ ಕಾರ್ಯದರ್ಶಿ ಎಂ.ವೈ.ಸತೀಶರನ್ನು ಸನ್ಮಾನಿಸಲಾಗುವುದು ಎಂದು ಅವರು ಮಾಹಿತಿ ನೀಡಿದರು.

ಸಮಾಜದ ಮುಖಂಡರಾದ ನಾಗರಾಜ ಮೇದಾರ, ರವಿಕುಮಾರ, ಭಾಸ್ಕರ್ ಇತರರು ಇದ್ದರು.

- - - -5ಕೆಡಿವಿಜಿ7:

ದಾವಣಗೆರೆಯಲ್ಲಿ ಸೋಮವಾರ ಕರ್ನಾಟಕ ಆದಿವಾಸಿ ರಕ್ಷಣಾ ಪರಿಷತ್‌ ಪ್ರಧಾನ ಕಾರ್ಯದರ್ಶಿ ಪಿ.ರಾಜೇಶ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.