ಆ.20 ರಂದು ಡಿ. ದೇವರಾಜ ಅರಸು 109ನೇ ಜನ್ಮದಿನಾಚರಣೆ

| Published : Aug 12 2024, 12:45 AM IST

ಆ.20 ರಂದು ಡಿ. ದೇವರಾಜ ಅರಸು 109ನೇ ಜನ್ಮದಿನಾಚರಣೆ
Share this Article
  • FB
  • TW
  • Linkdin
  • Email

ಸಾರಾಂಶ

ಹಿಂದುಳಿದ ವರ್ಗಗಳ ಅಭಿವೃದ್ಧಿಯ ಹರಿಕಾರ ಹಾಗೂ ರಾಜ್ಯದ ಮಾಜಿ ಮುಖ್ಯಮಂತ್ರಿ ದಿ. ಡಿ. ದೇವರಾಜು ಅರಸು ಅವರ ಜನ್ಮ ದಿನಾಚರಣೆಯನ್ನು ಆ. 20 ರಂದು ಜಿಲ್ಲಾಡಳಿತದಿಂದ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೊಳ ಅವರು ಹೇಳಿದರು.

ಕನ್ನಡಪ್ರಭ ವಾರ್ತೆ ಯಾದಗಿರಿ

ಹಿಂದುಳಿದ ವರ್ಗಗಳ ಅಭಿವೃದ್ಧಿಯ ಹರಿಕಾರ ಹಾಗೂ ರಾಜ್ಯದ ಮಾಜಿ ಮುಖ್ಯಮಂತ್ರಿ ದಿ. ಡಿ. ದೇವರಾಜು ಅರಸು ಅವರ ಜನ್ಮ ದಿನಾಚರಣೆಯನ್ನು ಆ. 20 ರಂದು ಜಿಲ್ಲಾಡಳಿತದಿಂದ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೊಳ ಅವರು ಹೇಳಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಡಿ. ದೇವರಾಜು ಅರಸು ಅವರ 109ನೇ ಜನ್ಮದಿನಾಚರಣೆ ಅಂಗವಾಗಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲಾ ಮಟ್ಟದ ಅಧಿಕಾರಿಗಳು, ಎಲ್ಲಾ ಸಂಘ-ಸಂಸ್ಥೆಯ ಮುಖಂಡರು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು. ಹಿಂದುಳಿದ ವರ್ಗಗಳ ಹರಿಕಾರರಾಗಿರುವ ಡಿ. ದೇವರಾಜು ಅರಸು ಜನ್ಮದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ಎಲ್ಲ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಸೂಚಿಸಿದರು.

ಶಿಷ್ಟಾಚಾರದಂತೆ ಆಹ್ವಾನ ಪತ್ರಿಕೆಯನ್ನು ಮುದ್ರಿಸಿ ಗಣ್ಯರನ್ನು ಆಹ್ವಾನಿಸಬೇಕು. ಕುಡಿಯುವ ನೀರಿನ ವ್ಯವಸ್ಥೆ , ಸ್ವಚ್ಛತೆ ಕೈಗೊಳ್ಳಬೇಕು ಎಂದು ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದರು. ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳ ಮಕ್ಕಳಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಿ ವಿಜೇತರಿಗೆ ಬಹುಮಾನ ವಿತರಿಸಲಾಗುವುದು. ಕಳೆದ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಎಸ್‍ಎಸ್‍ಎಲ್‍ಸಿ, ಪಿಯುಸಿ, ಪದವಿ ಮತ್ತು ಪಿಹೆಚ್ಡಿ ಪದವಿಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಗುವುದು ಎಂದರು.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಸತಿ ಶಾಲೆಗಳಲ್ಲಿ ಅರಸು ಜಯಂತಿ ಅಂಗವಾಗಿ ಪ್ರಬಂಧ ಸ್ಪರ್ಧೆ ಹಾಗೂ ಇತರ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ವಿಜೇತರಿಗೆ ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನ ವಿತರಿಸಬೇಕು ಎಂದು ತಿಳಿಸಿದರು.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಗಂಗಾಧರ ದೊಡ್ಡಮನಿ, ಹಿಂದುಳಿದ ವರ್ಗಗಳ ಒಕ್ಕೂಟದ ಅಧ್ಯಕ್ಷ ಅಪ್ಪಣ್ಣ ಚಿನ್ನಾಕರ್, ಮುಖಂಡರಾದ ಮರೆಪ್ಪ ಚಟ್ಟೇರಕರ್, ಭೀಮರಾಯ ಠಾಣಗುಂದಿ, ವಿಶ್ವನಾಥ ನೀಲಹಳ್ಳಿ, ಮಡಿವಾಳಪ್ಪ, ತಾಯಪ್ಪ ಯಾದವ್, ಅಶೋಕ ವಾಟ್ಕರ್ , ನಾಗಪ್ಪ ಯಾದವ, ಭೀಮರಾಯ ಹಳಿಮನಿ, ಬಸಲಿಂಗಪ್ಪ ನಾಯಕ ನೀಲಹಳ್ಳಿ, ಮಹೇಂದ್ರ ಕುಮಾರ್ ಅನಪುರ, ಮಲ್ಲಿಕಾರ್ಜುನ ಮೇಟಿ, ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಸಂತೋಷರೆಡ್ಡಿ, ಕಚೇರಿಯ ವ್ಯವಸ್ಥಾಪಕ ಸಾಬಯ್ಯ ಗುತ್ತೇದಾರ ಇತರರಿದ್ದರು.