ಸಾರಾಂಶ
ವಿಜಯಪುರದ ಚಾಣಕ್ಯ ಅಕಾಡೆಮಿಯ ಮುಖ್ಯಸ್ಥ, ಕನ್ನಡಪ್ರಭ ಹಾಗೂ ಸುವರ್ಣ ನ್ಯೂಸ್‌ನ ರಜತ ಸಾಧಕರು ಪ್ರಶಸ್ತಿ ಪುರಸ್ಕೃತರಾದ ಎನ್.ಎಂ.ಬಿರಾದಾರ ಅವರಿಗೆ ಅಪ್ಪ ಪ್ರಶಸ್ತಿ ಪ್ರದಾನ ಮಾಡಲಾಗುವುದು.
ಸಿಂದಗಿ: ತಾಲೂಕಿನ ಬೋರಗಿ ಗ್ರಾಮದ ನಬಿರೋಷನ್ ಪ್ರಕಾಶನ ವತಿಯಿಂದ ಬೆಂಗಳೂರಿನಲ್ಲಿ ಆ.9 ರಂದು ನಡೆಯುವ ಪೊಲೀಸ್ ಕಲಾಸಂಗಮ ಆರಕ್ಷಕ ಸೇವಾರತ್ನ ಪ್ರಶಸ್ತಿ ಹಾಗೂ ಅಪ್ಪ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅವರು ಉದ್ಘಾಟನೆ ಮಾಡಲಿದ್ದಾರೆ ಎಂದು ನಬಿರೋಷನ್ ಪ್ರಕಾಶನದ ಸಂಚಾಲಕ ಪೊಲೀಸ್ ಪೇದೆ ಮೌಲಾಲಿ ಆಲಗೂರ ತಿಳಿಸಿದ್ದಾರೆ. ಈ ಸಮಾರಂಭದಲ್ಲಿ ವಿವಿಧ ಜಿಲ್ಲೆಯ 15 ಜನ ಪೊಲೀಸ್ ಕಲಾವಿದರಿಗೆ ಆರಕ್ಷಕ ಸೇವಾರತ್ನ ಪ್ರಶಸ್ತಿ ಮತ್ತು ವಿಜಯಪುರದ ಚಾಣಕ್ಯ ಅಕಾಡೆಮಿಯ ಮುಖ್ಯಸ್ಥ, ಕನ್ನಡಪ್ರಭ ಹಾಗೂ ಸುವರ್ಣ ನ್ಯೂಸ್‌ನ ರಜತ ಸಾಧಕರು ಪ್ರಶಸ್ತಿ ಪುರಸ್ಕೃತರಾದ ಎನ್.ಎಂ.ಬಿರಾದಾರ ಅವರಿಗೆ ಅಪ್ಪ ಪ್ರಶಸ್ತಿ ಪ್ರದಾನ ಮಾಡಲಾಗುವುದು.ಕಾರ್ಯಕ್ರಮದಲ್ಲಿ ಬೆಂಗಳೂರು ಪೊಲೀಸ್ ಇಲಾಖೆಯ ಎಜಿಡಿಪಿ ಹರೀಶ್ ಶೇಖರನ್ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ ಹಾಗೂ ವಿವಿಧ ಪೊಲೀಸ್ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಸಂಚಾಲಕ ಮೌಲಾಲಿ ಆಲಗೂರ ಪ್ರಕಟಣೆಲ್ಲಿ ತಿಳಿಸಿದ್ದಾರೆ.