ಡಾ. ಮೋಹನ ಆಳ್ವಗೆ ಕರುನಾಡ ಕ್ರೀಡಾರತ್ನ ಪ್ರಶಸ್ತಿ ಪ್ರದಾನ

| Published : Dec 07 2023, 01:15 AM IST

ಡಾ. ಮೋಹನ ಆಳ್ವಗೆ ಕರುನಾಡ ಕ್ರೀಡಾರತ್ನ ಪ್ರಶಸ್ತಿ ಪ್ರದಾನ
Share this Article
  • FB
  • TW
  • Linkdin
  • Email

ಸಾರಾಂಶ

ಬೆಂಗಳೂರು ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ಸಂಘದ ವತಿಯಿಂದ ಡಾ. ಮೋಹನ ಆಳ್ವರಿಗೆ ಕರುನಾಡ ಕ್ರೀಡಾರತ್ನ ಪ್ರಶಸ್ತಿ ಪ್ರದಾನ

ಮೂಡುಬಿದಿರೆ: ಕ್ರೀಡಾ ಪೋಷಕ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಮೋಹನ್ ಆಳ್ವ ಅವರಿಗೆ ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಬೆಂಗಳೂರು ವತಿಯಿಂದ ಕರುನಾಡ ಕ್ರೀಡಾರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ರಾಜ್ಯ ಅಧ್ಯಕ್ಷ ಚೌಡಪ್ಪ ಅಧ್ಯಕ್ಷತೆಯಲ್ಲಿ‌ ನಡೆದ ಕಾರ್ಯಕ್ರಮದಲ್ಲಿ ನಿವೃತ್ತ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಗುರುನಾಥ ಬಾಗೇವಾಡಿ ಅಭಿನಂದನಾ‌ ಭಾಷಣ ಮಾಡಿದರು. ಮೋಹನ ಆಳ್ವ ಅವರು ಕೇವಲ ಕ್ರೀಡೆ ಮಾತ್ರವಲ್ಲದೇ ಆಳ್ವಾಸ್ ವಿರಾಸತ್, ಆಳ್ವಾಸ್ ನುಡಿಸಿರಿ, ರಾಷ್ಟೀಯ ಜಂಬೂರಿಯಂತಹ ಹಲವಾರು ಕಾರ್ಯಕ್ರಮಗಳನ್ನು ಶಿಸ್ತು ಬದ್ಧವಾಗಿ ಸಂಘಟನೆ ಮಾಡಿ ರಾಷ್ಟ್ರಮಟ್ಟದಲ್ಲಿ ನಮ್ಮ ರಾಜ್ಯದ ಹೆಸರನ್ನು ಬೆಳಗಿಸಿದವರು ಎಂದರು.

ನಿವೃತ್ತ ಪ್ರಭಾರ ಮುಖ್ಯ ಶಿಕ್ಷಕರು, ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೀ ನಿವಾಸ್ ಎಚ್.ಬಿ, ಸಂಘದ ಪದಾಧಿಕಾರಿಗಳಾದ ನವೀನ್ ಅಂಬೂರಿ, ಪುಷ್ಪಾವತಿ, ನಮಿತಾ ಮತ್ತಿತರಿದ್ದರು. .

ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷೆ ಲಿಲ್ಲಿ ಪಾಯ್ಸ್ ಸನ್ಮಾನ ಪತ್ರ ವಾಚಿಸಿದರು. ಸಂಘದ ಪ್ರಧಾನ ಕಾರ್ಯದರ್ಶಿ ಹರೀಶ್ ರೈ ಸ್ವಾಗತಿಸಿದರು. ಕೋಶಾಧಿಕಾರಿ ತ್ಯಾಗಮ್ ಹರೇಕಳ ಕಾರ್ಯಕ್ರಮ ನಿರೂಪಿಸಿದರು.