ಡಿ.8ರಂದು ಕಾನೂನು ಸೇವಾ, ಕೃಷಿ, ವೈದ್ಯಕೀಯ ಸೇವಾ ಪ್ರಶಸ್ತಿ ಪ್ರದಾನ

| Published : Dec 05 2024, 12:35 AM IST

ಡಿ.8ರಂದು ಕಾನೂನು ಸೇವಾ, ಕೃಷಿ, ವೈದ್ಯಕೀಯ ಸೇವಾ ಪ್ರಶಸ್ತಿ ಪ್ರದಾನ
Share this Article
  • FB
  • TW
  • Linkdin
  • Email

ಸಾರಾಂಶ

ಪ್ರಭಾವತಿ ಹನುಮೇಗೌಡ ಕಾನೂನು ಸೇವಾ ಪ್ರಶಸ್ತಿಯನ್ನು ವಿಶ್ರಾಂತ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ್ ದಾಸ್ ಅವರಿಗೆ, ಶಾರದಮ್ಮ ಎಂ.ಎಲ್.ಸುಬ್ಬಣ್ಣ ಕೃಷಿ ಪ್ರಶಸ್ತಿಯನ್ನು ಪ್ರಗತಿಪರ ಕೃಷಿ ಚಂದ್ರಶೇಖರ್ ಅವರಿಗೆ, ವೀಣಾ ಡಾ.ಎಂ.ಮಂಚಯ್ಯ ವೈದ್ಯಕೀಯ ಪ್ರಶಸ್ತಿಯನ್ನು ಆಯುಷ್ ವೈದ್ಯಾಧಿಕಾರಿ ಡಾ.ಅಂಬಿಕಾ ಅವರಿಗೆ ಪ್ರದಾನ ಮಾಡಲಾಗುವುದು.

ಕನ್ನಡಪ್ರಭ ವಾರ್ತೆ ಮಂಡ್ಯ

ಕರ್ನಾಟಕ ಸಂಘದಿಂದ ನಗರದ ಕೆ.ವಿ.ಶಂಕರಗೌಡ ರೈತ ಸಭಾಗಂಣದಲ್ಲಿ ಡಿ.8ರಂದು ಕಾನೂನು ಸೇವಾ, ಕೃಷಿ, ವೈದ್ಯಕೀಯ ಸೇವಾ ಪ್ರಶಸ್ತಿ ಪ್ರದಾನ ಮತ್ತು ವಿದ್ಯಾರ್ಥಿ ಪ್ರತಿಭಾ ಪುರಸ್ಕಾರ ಸಮಾರಂಭ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಪ್ರೊ.ಜಯಪ್ರಕಾಶ್‌ಗೌಡ ತಿಳಿಸಿದರು.

ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಶಸ್ತಿ ಪುರಸ್ಕೃತರಿಗೆ ನ್ಯಾಯಮೂರ್ತಿ ಟಿ.ಜಿ.ಶಿವಶಂಕರೇಗೌಡ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ.ಜಯಪ್ರಕಾಶ್‌ಗೌಡ ಅಧ್ಯಕ್ಷತೆ ವಹಿಸುವರು ಎಂದರು.

ಸಮಾರಂಭದಲ್ಲಿ ಪ್ರಶಸ್ತಿ ಪುರಸ್ಕೃತರ ಕುರಿತು ವಿಶ್ರಾಂತ ಪ್ರಾಂಶುಪಾಲ ಡಾ.ಮ.ರಾಮಕೃಷ್ಣ ಅಭಿನಂದನಾ ನುಡಿಗಳನ್ನಾಡಲಿದ್ದು, ಅತಿಥಿಗಳಾಗಿ ಕನಕಪುರದ ರೂರಲ್ ಎಜುಕೇಷನ್ ಸೊಸೈಟಿ ಅಧ್ಯಕ್ಷ ಎಚ್.ಕೆ.ಶ್ರೀಕಂಠ ಭಾಗವಹಿಸುವರು. ಪ್ರಭಾವತಿ ಹನುಮೇಗೌಡ ಉಪಸ್ಥಿತರಿರುವರು ಎಂದು ವಿವರಿಸಿದರು.

ಪ್ರಭಾವತಿ ಹನುಮೇಗೌಡ ಕಾನೂನು ಸೇವಾ ಪ್ರಶಸ್ತಿಯನ್ನು ವಿಶ್ರಾಂತ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ್ ದಾಸ್ ಅವರಿಗೆ, ಶಾರದಮ್ಮ ಎಂ.ಎಲ್.ಸುಬ್ಬಣ್ಣ ಕೃಷಿ ಪ್ರಶಸ್ತಿಯನ್ನು ಪ್ರಗತಿಪರ ಕೃಷಿ ಚಂದ್ರಶೇಖರ್ ಅವರಿಗೆ, ವೀಣಾ ಡಾ.ಎಂ.ಮಂಚಯ್ಯ ವೈದ್ಯಕೀಯ ಪ್ರಶಸ್ತಿಯನ್ನು ಆಯುಷ್ ವೈದ್ಯಾಧಿಕಾರಿ ಡಾ.ಅಂಬಿಕಾ ಅವರಿಗೆ ಪ್ರದಾನ ಮಾಡಲಾಗುವುದು ಎಂದರು.

ರತ್ನಮ್ಮ ಕುನ್ನಮರಿಗೌಡ ಕೃಷಿ ಪ್ರಶಸ್ತಿಯನ್ನು ಕನಕಪುರದ ಮಹಿಳಾ ಪ್ರಗತಿಪರ ಕೃಷಿಕರಾದ ಬಿ.ಕೆ.ಪದ್ಮ ಅವರಿಗೆ, ಡಾ.ಸಿ.ಶಿವರಾಮಯ್ಯ ಕೃಷಿ ಪ್ರಶಸ್ತಿಯನ್ನು ಪ್ರೊ.ಎಂ.ಸಿ.ಬೋರೇಗೌಡರಿಗೆ, ಕಾನೂನು ವಿದ್ಯಾರ್ಥಿಗಳಾದ ಪಿ.ಮಂಜುನಾಥ್ ಮತ್ತು ಜಿ.ಎಸ್.ಚೈತ್ರ ಅವರಿಗೆ ವಿದ್ಯಾರ್ಥಿ ಪ್ರತಿಭಾ ಪುರಸ್ಕಾರ ನೀಡಲಾಗುವುದು ಎಂದರು.

ಸುದ್ದಿಗೋಷ್ಠಿಯಲ್ಲಿ ಡಾ.ಎಚ್.ಅನೀಲ್‌ಕುಮಾರ್, ಸಂಘದ ಪ್ರಧಾನ ಕಾರ್ಯದರ್ಶಿ ಹರೀಶ್ ಕುಮಾರ್, ಕಾರ್ಯದರ್ಶಿ ಸೋಮಶೇಖರ್, ನಿರ್ದೇಶಕ ನಾಗಪ್ಪ ಇದ್ದರು.

ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಮಂಡ್ಯ: ಕೇಂದ್ರ ಸರ್ಕಾರವು ಖೇಲೋ ಇಂಡಿಯಾ ಯೋಜನೆಯಡಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಧೀನದಲ್ಲಿ ಇರುವ ಬೆಂಗಳೂರು ವಿದ್ಯಾನಗರದ ಶ್ರೀಜಯಪ್ರಕಾಶ ನಾರಾಯಣ ರಾಷ್ಟ್ರೀಯ ಯುವ ಕೇಂದ್ರವನ್ನು ರಾಜ್ಯ ಉತ್ಕೃಷ್ಟತಾ ಕೇಂದ್ರ (ಈಜು, ಅಥ್ಲೆಟಿಕ್ಸ್, ಶೂಟಿಂಗ್) ಎಂದು ಘೋಷಿಸಿ ಮಂಜೂರು ಮಾಡಿದ್ದು, ಈ ಕೇಂದ್ರಕ್ಕೆ ಖೇಲೋ ಇಂಡಿಯಾ ನಿಯಮಗಳನುಸಾರ ಗುತ್ತಿಗೆ ಆಧಾರದ ಮೇಲೆ Young Protesional ಮತ್ತು Masseur ನೇಮಕಾತಿಗಾಗಿ ಆಯಾ ಜಿಲ್ಲೆಗಳ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಜಿಲ್ಲೆಯ ಅರ್ಹ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ವಿವರಗಳನ್ನು ಭರ್ತಿ ಮಾಡಿ ಸಂಬಂಧಿಸಿದ ದಾಖಲೆಗಳನ್ನು ನೋಟರಿ ಮಾಡಿಸಿ ಇವುಗಳನ್ನು ಪಡೆದುಕೊಂಡು ಕೇಂದ್ರ ಕಚೇರಿಗೆ ಡಿ.7 ರಂದು ಮಧ್ಯಾಹ್ನ 3 ಗಂಟೆಯೊಳಗೆ ತಲುಪುವಂತೆ ಕಳುಹಿಸಿಕೊಡುವುದು. ನಿಗದಿತ ದಿನಾಂಕದ ನಂತರ ಸ್ವೀಕೃತಿಗೊಳ್ಳುವ ಯಾವುದೇ ಅರ್ಜಿಗಳನ್ನು ಪರಿಗಣಿಸುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ಮಂಡ್ಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯನ್ನು ಸಂಪರ್ಕಿಸಬಹುದು ಎಂದು ಮಂಡ್ಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.