ಫೆ.13, 14 ರಂದು ಆಶಾ ಕಾರ್ಯಕರ್ತೆಯರ ವಿಧಾನಸೌಧ ಚಲೋ

| Published : Feb 04 2024, 01:32 AM IST

ಸಾರಾಂಶ

ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ವತಿಯಿಂದ ಫೆ. 13-14ರಂದು ರಾಜ್ಯ ಮಟ್ಟದ ಆಶಾ ಕಾರ್ಯಕರ್ತೆಯರ ವಿಧಾನಸೌಧ ಚಲೋ ಹಮ್ಮಿಕೊಳ್ಳಲಾಗಿದೆ ಎಂದು ಕರಾಸಂ ಆಶಾ ಕಾರ್ಯಕರ್ತರ ಸಂಘದ ರಾಜ್ಯ ಉಪಾಧ್ಯಕ್ಷೆ ಎಂ. ಉಮಾದೇವಿ ಅವರು ತಿಳಿಸಿದರು.

ಕನ್ನಡಪ್ರಭ ವಾರ್ತೆ ಚಾಮರಾಜನಗರ

ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ವತಿಯಿಂದ ಫೆ. 13-14ರಂದು ರಾಜ್ಯ ಮಟ್ಟದ ಆಶಾ ಕಾರ್ಯಕರ್ತೆಯರ ವಿಧಾನಸೌಧ ಚಲೋ ಹಮ್ಮಿಕೊಳ್ಳಲಾಗಿದೆ ಎಂದು ಕರಾಸಂ ಆಶಾ ಕಾರ್ಯಕರ್ತರ ಸಂಘದ ರಾಜ್ಯ ಉಪಾಧ್ಯಕ್ಷೆ ಎಂ. ಉಮಾದೇವಿ ಅವರು ತಿಳಿಸಿದರು.ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 8 ವರ್ಷಗಳಿಂದ ಆಶಾ ಕಾರ್ಯಕರ್ತೆಯರಿಗೆ ಕೇಂದ್ರ ಸರ್ಕಾರ ನೀಡುತ್ತಿರುವ ಪ್ರೊತ್ಸಾಹ ಧನ ಆಶಾ ಸಾಪ್ಟ್‌ ಲಿಂಕ್‌ನಿಂದ ಸರಿಯಾಗಿ ಬಾರದೇ ನಷ್ಠ ಅನುಭವಿಸುತ್ತಿದ್ದೇವೆ ಆದ್ದರಿಂದ ಆಶಾ ಸಾಪ್ಟ್‌ ಅನ್ನು ಡಿಲಿಂಕ್‌ ಮಾಡಬೇಕು ಎಂದರು.ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಆಶಾ ಕಾರ್ಯಕರ್ತೆಯರಿಗೆ ಮಾಸಿಕ ಕನಿಷ್ಠ 15 ಸಾವಿರ ಪ್ರೊತ್ಸಾಹ ಧನ ನೀಡಬೇಕು, ಮೊಬೈಲ್‌ ಕೆಲಸಗಳನ್ನು ಒತ್ತಾಯಪೂರಕವಾಗಿ ಮಾಡಿಸಿಕೊಳ್ಳುತ್ತಿರುವುದನ್ನು ಕೈ ಬಿಡಬೇಕು, ಪರ್ಯಾಯ ವ್ಯವಸ್ಥೆ ಮಾಡಬೇಕು, ಆಶಾ ಕಾರ್ಯಕರ್ತೆಯರನ್ನು ಕಾರ್ಮಿಕರೆಂದು ಪರಿಗಣಿಸಿ ಕನಿಷ್ಠ ವೇತನ ಗ್ರಾಜ್ಯುಟಿ ಪಿಎಫ್‌-ಇಎಸ್‌ಐ ಸೌಲಭ್ಯ ನೀಡಬೇಕು. ಇನ್ನು ಹಲವು ಬೇಡಿಕೆಗಳ ಈಡೇರಿಕೆಗೆ ವಿಧಾನಸೌಧ ಚಲೋ ಹಮ್ಮಿಕೊಂಡಿದ್ದೇವೆ ಎಂದರು.ಸುದ್ದಿಗೋಷ್ಠಿಯಲ್ಲಿ ಜಿಲ್ಲಾಧ್ಯಕ್ಷೆ ಕವಿತಾ, ಚಾಮರಾಜನಗರ ತಾಲೂಕು ಅಧ್ಯಕ್ಷೆ ರಾಣಿ, ಕಾರ್ಯದರ್ಶಿ ಶಶಿಕಲಾ, ಯಳಂದೂರು ತಾಲೂಕು ಅಧ್ಯಕ್ಷೆ ಉಮಾಮಹೇಶ್ವರಿ, ಕೊಳ್ಳೇಗಾಲ ತಾಲೂಕು ಅಧ್ಯಕ್ಷೆ ಮಂಜುಳ, ಹನೂರು ತಾಲೂಕು ಅಧ್ಯಕ್ಷೆ ಸುಜಾತಾ ಇದ್ದರು.