ಸಾರಾಂಶ
ಕನ್ನಡಪ್ರಭ ವಾರ್ತೆ ಶಿರಾಕರ್ನಾಟಕ ಜನಪದ ಅಕಾಡೆಮಿ ವತಿಯಿಂದ ಆ.17 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಜಿಲ್ಲಾ ಜಾನಪದ ಸಂಭ್ರಮ ಜನರ ನಡೆ ಮರಳಿ ಜನಪದದ ಕಡೆ ಎಂಬ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ ಎಂದು ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷ ಗೊಲ್ಲಹಳ್ಳಿ ಶಿವಪ್ರಸಾದ್ ಹೇಳಿದರು. ಅವರು ನಗರದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು. ದಕ್ಷಿಣ ಭಾರತದಲ್ಲಿ ಜನಪದ ಕಲೆ ಕ್ಷೀಣಿಸುತ್ತಿದ್ದು ಮತ್ತೆ ಜಾನಪದ ಕಲೆಗಳ ಬಗ್ಗೆ ಯುವಕರಲ್ಲಿ, ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಜಿಲ್ಲಾ ಜಾನಪದ ಸಂಭ್ರಮ ಕಾರ್ಯಕ್ರಮ ಏರ್ಪಡಿಸಲಾಗಿದೆ. ಈ ಕಾರ್ಯಕ್ರಮವನ್ನು ಕರ್ನಾಟಕ ಸರಕಾರದ ದೆಹಲಿ ವಿಶೇಷ ಪ್ರತಿನಿಧಿ ಡಾ.ಟಿ.ಬಿ.ಜಯಚಂದ್ರ ಉದ್ಘಾಟಿಸುವರು. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಪ್ರೋ. ಎಸ್.ಜಿ.ಸಿದ್ದರಾಮಯ್ಯ ಕಲಾ ತಂಡಗಳ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯ ಚಿದಾನಂದ್ ಎಂ.ಗೌಡ, ತುಮಕೂರು ವಿವಿ ಕುಲಸಚಿವರಾದ ನಾಹಿದಾ ಜಮ್ ಜಮ್, ಸೇರಿದಂತೆ ಹಲವು ಗಣ್ಯರು ಭಾಗವಹಿಸುವರು ಎಂದು ತಿಳಿಸಿದರು. ಕರ್ನಾಟಕ ಜಾನಪದ ಅಕಾಡೆಮಿಯ ರಿಜಿಸ್ಟಾರ್ ನಮ್ರತ ಮಾತನಾಡಿ ಜಿಲ್ಲಾ ಜಾನಪದ ಸಂಭ್ರಮ ಕಾರ್ಯಕ್ರಮದಲ್ಲಿ ಕರ್ನಾಟಕ ಜಾನಪದ ವಿಶಿಷ್ಟ ಕಲೆಗಳಾದ ನಂದಿ ಧ್ವಜ ಕುಣಿತ, ವೀರಗಾಸೆ, ಗಾರುಡಿ ಗೊಂಬೆ, ಚಿಕ್ಕಿ ಮೇಳ, ಕಹಳೆ, ಮಹಿಳಾ ಡೊಳ್ಳು ಕುಣಿತ, ನಾಸಿಕ್ ಡೋಲು, ಗೊರವರ ಕುಣಿತ, ಅರೇವಾದ್ಯ, ಸೋಮನ ಕುಣಿತ , ಕೋಲಾಟ ಕಲಾ ತಂಡಗಳು ಭಾಗವಹಿಸಲಿವೆ. ಹತ್ತು ಜಾನಪದ ಕಲಾವಿದರಿಗೆ ಸನ್ಮಾನ ಕಾರ್ಯಕ್ರಮ ಏರ್ಪಡಿಸಲಾಗಿದೆ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಿ ಎಂದು ತಿಳಿಸಿದರು. ಕರ್ನಾಟಕ ಜಾನಪದ ಅಕಾಡೆಮಿಯ ಸದಸ್ಯ ಸಂಚಾಲಕರಾದ ಮಲ್ಲಿಕಾರ್ಜುನ ಕೆಂಕೆರೆ ಅವರು ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಮೊಬೈಲ್ ವ್ಯಾಮೋಹ ಹೆಚ್ಚಾಗಿ ಜಾನಪದ ಕಲೆಗಳನ್ನು ವಿದ್ಯಾರ್ಥಿಗಳು ಮರೆಯುತ್ತಿದ್ದಾರೆ. ಆದ್ದರಿಂದ ಜಿಲ್ಲಾ ಜಾನಪದ ಸಂಭ್ರಮ ಕಾರ್ಯಕ್ರಮವನ್ನು ಜಾನಪದರ ನಡೆ ವಿದ್ಯಾರ್ಥಿಗಳ ಕಡೆ ಎಂಬ ಘೋಷವಾಕ್ಯದೊಂದಿಗೆ ಆಚರಿಸಲಾಗುತ್ತಿದೆ. ಈ ಕಾರ್ಯಕ್ರಮವನ್ನು ಈಗಾಗಲೇ ರಾಜ್ಯಾದ್ಯಂತ ಆಚರಿಸುತ್ತಿದ್ದು ಎಲ್ಲೆಡೆ ಉತ್ತಮ ಪ್ರೋತ್ಸಾಹ ದೊರಕಿದೆ. ಅದೇ ರೀತಿ ಶಿರಾದಲ್ಲೂ ಕಾರ್ಯಕ್ರಮ ಯಶಸ್ವಿಗೆ ಎಲ್ಲರೂ ಭಾಗವಹಿಸಿ ಎಂದರು. ಈ ಸಂದರ್ಭದಲ್ಲಿ ಬಾಲಕಿಯರ ಸರಕಾರಿ ಪ.ಪೂ. ಕಾಲೇಜಿನ ಪ್ರಾಂಶುಪಾಲ ಚಂದ್ರಯ್ಯ, ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ನರೇಶ್ ಬಾಬು, ಅರೇವಾದ್ಯ ಕಲಾವಿದ ಬಿ.ಕೆ.ನರಸಿಂಹರಾಜು, ಗೊರವರ ಕುಣಿತದ ಹುಣಸೆಹಳ್ಳಿ ರಾಜಣ್ಣ, ವೀರಗಾಸೆ ಭುವನ್, ನಾಸಿಕ್ ಡೋಲು ತಂಡದ ಭಾನುಪ್ರಕಾಶ್, ತತ್ವಪದ ಗಾಯಕ ದ್ವಾವರಪ್ಪ, ಸಿ.ಎಸ್.ಲೋಕೇಶ್ ಸೇರಿದಂತೆ ಹಲವರು ಹಾಜರಿದ್ದರು. 14ಶಿರಾ1: ಶಿರಾ ನಗರದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ಜಾನಪದ ಅಕಾಡೆಮಿ ವತಿಯಿಂದ ನಡೆದ ಪತ್ರಿಕಾಗೋಷ್ಠಿಯಲ್ಲಿ ಅಧ್ಯಕ್ಷ ಗೊಲ್ಲಹಳ್ಳಿ ಶಿವಪ್ರಸಾದ್ ಮಾತನಾಡಿದರು.