8 ರಂದು ಮಲ್ಲಿಕಾರ್ಜುನ ಶ್ರೀಗಳ 30 ನೇ ಸ್ಮರಣೋತ್ಸವ

| Published : Aug 07 2024, 01:03 AM IST

ಸಾರಾಂಶ

On the 8th is the 30th anniversary of Mallikarjun Sri

ಚಿತ್ಕಳೆ ಗ್ರಂಥ ಲೋಕಾರ್ಪಣೆ

-----

-ಹೊಳಲ್ಕೆರೆ ಒಂಟಿ ಕಂಬದ ಮಠದಲ್ಲಿ ಆಯೋಜನೆ । ಸುದ್ದಿಗೋಷ್ಠಿಯಲ್ಲಿ ಡಾ.ಬಸವಕುಮಾರ ಸ್ವಾಮೀಜಿ ಮಾಹಿತಿ

-------

ಕನ್ನಡಪ್ರಭವಾರ್ತೆ ಚಿತ್ರದುರ್ಗ

ಮುರುಘಾಮಠದ ಲಿಂಗೈಕ್ಯ ಜಗದ್ಗುರು ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿಗಳ 30ನೇ ಸ್ಮರಣೋತ್ಸವವನ್ನು ಹೊಳಲ್ಕೆರೆ ಒಂಟಿ ಕಂಬದ ಮುರುಘಾಮಠದಲ್ಲಿ ಆಗಸ್ಟ್ 8 ರಂದು ಬೆಳಗ್ಗೆ 10.30 ಹಮ್ಮಿಕೊಳ್ಳಲಾಗಿದೆ. ಇದೇ ಸಂದರ್ಭದಲ್ಲಿ ಚಿನ್ಮೂಲಾದ್ರಿಯ ಚಿತ್ಕಳೆ ಸ್ಮರಣೋತ್ಸವ ಸಂಪುಟ ಲೋಕಾರ್ಪಣೆ ನಡೆಯಲಿದೆ ಎಂದು ಡಾ.ಬಸವಕುಮಾರ ಸ್ವಾಮಿಗಳು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಶ್ರೀಗಳು, ಜಯದೇವ ಜಗದ್ಗುರುಗಳು ಹಸಿವನ್ನು ಇಂಗಿಸಿದರೆ ಮಲ್ಲಿಕಾರ್ಜುನ ಜಗದ್ಗುರುಗಳು ಜ್ಞಾನದ ಹಸಿವನ್ನು ತಣಿಸಿದವರು. ಅನುಭಾವದ ನೆಲೆಯಲ್ಲಿ ಮಾತನಾಡುತ್ತಿದ್ದರು. ಮಲ್ಲಿಕಾರ್ಜುನ ಶ್ರೀಗಳವರದು ಸಾರ್ವಜನಿಕ ವಲಯದಲ್ಲಿ ಸರಳ ಮತ್ತು ವಿದ್ವತ್‍ ಪೂರ್ಣವಾದ ಬದುಕಾಗಿತ್ತು ಎಂದರು.

1966ರಲ್ಲಿ ಎಸ್ ಜೆಎಂ ವಿದ್ಯಾಪೀಠವನ್ನು ಸ್ಥಾಪಿಸಿ, ಎಂಜಿನಿಯರ್ ಕಾಲೇಜಿನಿಂದ ಹಿಡಿದು ಅನೇಕ ಶಿಕ್ಷಣ ಸಂಸ್ಥೆಗಳನ್ನು ತೆರೆದರು. ತುಮಕೂರು ಸಿದ್ಧಗಂಗಾ ಮಹಾಸ್ವಾಮಿಗಳು ಮಲ್ಲಿಕಾರ್ಜುನ ಶ್ರೀಗಳನ್ನು ಕುರಿತು ಸಾಕ್ಷಾತ್ ಮುರಿಗಿ ಸ್ವಾಮಿಗಳು ಎಂದು ಹೇಳುತ್ತಿದ್ದರು. ಅವರ ಬಗ್ಗೆ ಮಾತನಾಡುವುದಕ್ಕಿಂತ ಅವರ ವ್ಯಕ್ತಿತ್ವ ದೊಡ್ಡದು. ಶ್ರೀಗಳು ಪಟ್ಟಕ್ಕೆ ಬಂದು ಮೂವತ್ತು ವರ್ಷ ಮತ್ತು ಅವರು ಲಿಂಗೈಕ್ಯರಾಗಿ 30ವರ್ಷ ಆಗುತ್ತಿರುವ ಈ ಸಂದರ್ಭವನ್ನು ಸ್ಮರಣೀಯವಾಗಿಸುವ ಹಿನ್ನೆಲೆಯಲ್ಲಿ ಅರ್ಥಪೂರ್ಣವಾಗಿ ಆಚರಿಸಲು ತೀರ್ಮಾನಿಸಲಾಗಿದೆ. ಶ್ರ್ರೀಗಳವರ ಅಪರೂಪದ ಛಾಯಾಚಿತ್ರ ಪ್ರದರ್ಶನ ಮತ್ತು ಶ್ರೀಗಳ ಕುರಿತು ಡಾ.ಲಕ್ಷ್ಮಣ ತೆಲಗಾವಿ ಪ್ರಧಾನ ಸಂಪಾದಕತ್ವದಲ್ಲಿ ಚಿನ್ಮೂಲಾದ್ರಿ ಚಿತ್ಕಳೆ ಬೃಹತ್ ಗ್ರಂಥವನ್ನು ಲೋಕಾರ್ಪಣೆಗೊಳಿಸಲಾಗುವುದು ಎಂದರು.

ನಿಡುಮಾಮಿಡಿ ಮಠದ ಶ್ರೀ ವೀರಭದ್ರ ಚನ್ನಮಲ್ಲದೇಶೀಕೇಂದ್ರ ಮಹಾಸ್ವಾಮಿಗಳು,ಇಳಕಲ್‍ನ ಶ್ರೀ ಗುರುಮಹಾಂತ ಮಹಾಸ್ವಾಮಿಗಳು, ಬೇಲಿಮಠದ ಶ್ರೀ ಶಿವರುದ್ರ ಮಹಾಸ್ವಾಮಿಗಳು, ಕಬೀರಾನಂದಾಶ್ರಮದ ಶ್ರೀ ಶಿವಲಿಂಗಾನಂದ ಸ್ವಾಮಿಗಳು, ಧಾರವಾಡ ಮುರುಘಾಮಠದ ಶ್ರೀ ಮಲ್ಲಿಕಾರ್ಜುನ ಮಹಾಸ್ವಾಮಿಗಳು, ಹೆಬ್ಬಾಳು ವಿರಕ್ತಮಠದ ಶ್ರೀ ಮಹಾಂತರುದ್ರೇಶ್ವರ ಸ್ವಾಮಿಗಳು, ರಾವಂದೂರು ವಿರಕ್ತಮಠದ ಶ್ರೀ ಮೋಕ್ಷಪತಿ ಮಹಾಸ್ವಾಮಿಗಳು, ಸರ್ಪಭೂಷಣ ಮಠದ ಶ್ರೀ ಮಲ್ಲಿಕಾರ್ಜುನ ಮಹಾಸ್ವಾಮಿಗಳು ಕಾರ್ಯಕ್ರಮದ ಸಾನ್ನಿಧ್ಯ ವಹಿಸುವರು.

ಹರಿಹರ ಪಂಚಮಸಾಲಿ ಜಗದ್ಗುರು ಗುರುಪೀಠದ ಜಗದ್ಗುರು ವಚನಾನಂದ ಸ್ವಾಮಿಗಳು, ಮಾದಾರಚೆನ್ನಯ್ಯ ಗುರುಪೀಠದ ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮಿಗಳು, ಬೋವಿಗುರುಪೀಠದ ಇಮ್ಮಡಿ ಸಿದ್ಧರಾಮೇಶ್ವರ ಮಹಾಸ್ವಾಮಿಗಳು, ಕೂಡಲಸಂಗಮದ ಪಂಚಮಸಾಲಿ ಗುರುಪೀಠದ ಜಗದ್ಗುರು ಬಸವ ಜಯಮೃತ್ಯುಂಜಯ ಸ್ವಾಮಿಗಳು, ಹೊಸದುರ್ಗ ಕುಂಚಿಟಿಗ ಮಹಾಸಂಸ್ಥಾನ ಮಠದ ಶಾಂತವೀರ ಮಹಾಸ್ವಾಮಿಗಳು, ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಜಗದ್ಗುರು ಪ್ರಸನ್ನ ವಾಲ್ಮೀಕಿ ಸ್ವಾಮಿಗಳು, ಹೊಸದುರ್ಗ ಕನಕಗುರುಪೀಠದ ಈಶ್ವರಾನಂದಪುರಿ ಸ್ವಾಮಿಗಳು, ಭಗೀರಥ ಪೀಠದ ಪುರುಷೋತ್ತಮಾನಂದ ಪುರಿ ಸ್ವಾಮಿಗಳು, ಪಾಂಡೋಮಟ್ಟಿಯ ಗುರುಬಸವ ಸ್ವಾಮಿಗಳು, ಬೇಲೂರು ವಿರಕ್ತಮಠದ ಶಿವಬಸವ ಸ್ವಾಮಿಗಳು, ಮಡಿವಾಳ ಮಾಚಿದೇವ ಗುರುಪೀಠದ ಜಗದ್ಗುರು ಬಸವ ಮಾಚಿದೇವ ಮಹಾಸ್ವಾಮಿಗಳು ಸಮ್ಮುಖ ವಹಿಸುವರು.

ಎಸ್ ಜೆಎಂ ವಿದ್ಯಾಪೀಠದ ಆಡಳಿತ ಮಂಡಳಿ ಅಧ್ಯಕ್ಷ ಶಿವಯೋಗಿ ಸಿ.ಕಳಸದ ಅಧ್ಯಕ್ಷತೆ ವಹಿಸುವರು. ಆಡಳಿತ ಮಂಡಳಿ ಸದಸ್ಯ ಎಸ್.ಎನ್. ಚಂದ್ರಶೇಖರ್ ಬಸವಮಂಟಪದ ನೂತನ ವಸತಿಗೃಹಗಳನ್ನು ಉದ್ಘಾಟಿಸುವರು. ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್, ಲೋಕಾಸಭೆ ಸದಸ್ಯ ಗೋವಿಂದ ಎಂ.ಕಾರಜೋಳ, ಶಾಸಕರಾದ ಎಂ.ಚಂದ್ರಪ್ಪ, ಕೆ.ಸಿ ವೀರೇಂದ್ರ ಪಪ್ಪಿ,ಟಿ.ರಘುಮೂರ್ತಿ, ಬಿ.ಜಿ ಗೋವಿಂದಪ್ಪ, ಎನ್.ವೈ. ಗೋಪಾಲಕೃಷ್ಣ, ವಿಧಾನಪರಿಷತ್ ಸದಸ್ಯರಾದ ಕೆ.ಎಸ್ ನವೀನ್, ಡಿ.ಟಿ. ಶ್ರೀನಿವಾಸ್, ಚಿದಾನಂದಗೌಡ, ಮಾಜಿ ಸಚಿವ ಹೆಚ್.ಆಂಜನೇಯ, ಮಾಜಿ ಶಾಸಕರಾದ ಪಿ.ರಮೇಶ್, ಎಂ.ಬಿ.ತಿಪ್ಪೇರುದ್ರಪ್ಪ, ಎ.ವಿ. ಉಮಾಪತಿ, ಟಿ.ಹೆಚ್. ಬಸವರಾಜು ಭಾಗವಹಿಸುವರು.

----------

ಪೋಟೋ: ಬಸವಕುಮಾರ ಸ್ವಾಮೀಜಿ ಪೋಸ್ಟರ್ ಬಿಡುಗಡೆ ಮಾಡಿದರು.

ಪೋಟೋ: ಬಸವಕುಮಾರ