ಸಾರಾಂಶ
ಇಲ್ಲಿನ ಶ್ರೀ ಸಿದ್ಧಾರೂಢ ಮಠಕ್ಕೆ ಭಕ್ತಸಾಗರವೇ ಹರಿದು ಬಂದಿದೆ. ಬೆಳಗ್ಗೆಯಿಂದ ಸಂಜೆ ವರೆಗೂ 20 ಸಾವಿರಕ್ಕೂ ಅಧಿಕ ಭಕ್ತರು ಉಭಯ ಶ್ರೀಗಳು ದರ್ಶನ ಪಡೆದರು.
ಹುಬ್ಬಳ್ಳಿ: ಹೊಸ ವರ್ಷದ ಮೊದಲ ದಿನವಾದ ಬುಧವಾರ ಇಲ್ಲಿನ ಶ್ರೀ ಸಿದ್ಧಾರೂಢ ಮಠಕ್ಕೆ ಭಕ್ತಸಾಗರವೇ ಹರಿದು ಬಂದಿದೆ. ಬೆಳಗ್ಗೆಯಿಂದ ಸಂಜೆ ವರೆಗೂ 20 ಸಾವಿರಕ್ಕೂ ಅಧಿಕ ಭಕ್ತರು ಉಭಯ ಶ್ರೀಗಳು ದರ್ಶನ ಪಡೆದರೆ, ಇದರಲ್ಲಿ 8 ಸಾವಿರ ಭಕ್ತರು ಪ್ರಸಾದ ಸ್ವೀಕರಿಸಿದ್ದಾರೆ.
ಹೊಸ ವರ್ಷದ ಮೊದಲ ದಿನ ದೇವಸ್ಥಾನ, ಮಠ ಮಂದಿರಗಳಿಗೆ ಕುಟುಂಬ ಸಮೇತರಾಗಿ ಹೋಗಿ ದರ್ಶನ ಪಡೆಯುವುದು ಮಾಮೂಲಿ. ಈ ಹಿನ್ನೆಲೆಯಲ್ಲಿ ಉತ್ತರ ಕರ್ನಾಟಕ ಆರಾಧ್ಯ ದೈವ ಎಂದೆ ಹೆಸರು ಪಡೆದಿರುವ ಆರೂಢರ ಮಠಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭೇಟಿ ನೀಡಿ ದರ್ಶನ ಪಡೆದಿದ್ದಾರೆ.ಬೆಳಗ್ಗೆಯಿಂದ ರಾತ್ರಿ ವರೆಗೂ ಸರತಿ ಸಾಲಿನಲ್ಲಿ ನಿಂತು ಭಕ್ತರು ದರ್ಶನ ಪಡೆದರು. ಗದಗ, ಹಾವೇರಿ, ಬಳ್ಳಾರಿ, ಕೊಪ್ಪಳ, ಬಾಗಲಕೋಟ ಜಿಲ್ಲೆ ಸೇರಿದಂತೆ ಹಲವೆಡೆಯಿಂದಲೂ ಭಕ್ತರು ಆಗಮಿಸಿದ್ದರು.