ಜ. 6ರಂದು ಮಿಯ್ಯಾರು ಲವ ಕುಶ ಜೋಡುಕರೆ ಕಂಬಳ

| Published : Dec 31 2023, 01:30 AM IST

ಸಾರಾಂಶ

ಮಿಯ್ಯಾರು ಲವ ಕುಶ ಜೋಡುಕರೆ ಕಂಬಳ ಜ. 6 ರಂದು ಮಿಯ್ಯರು ಕಂಬಳ ಸಮಿತಿ ಮತ್ತು ಮಂಗಳೂರು ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ಸಹಯೋಗದೊಂದಿಗೆ ಮಿಯ್ಯಾರಿನಲ್ಲಿ ನಡೆಯಲಿದೆ

ಕಾರ್ಕಳ: 20ನೇ ವರ್ಷದ ಮಿಯ್ಯಾರು ಲವ ಕುಶ ಜೋಡುಕರೆ ಕಂಬಳ ಜ. 6 ರಂದು ಮಿಯ್ಯರು ಕಂಬಳ ಸಮಿತಿ ಮತ್ತು ಮಂಗಳೂರು ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ಸಹಯೋಗದೊಂದಿಗೆ ಮಿಯ್ಯಾರಿನಲ್ಲಿ ನಡೆಯಲಿದೆ ಎಂದು ಕಂಬಳ ಸಮಿತಿ ಅಧ್ಯಕ್ಷ ಕಾರ್ಕಳ ಶಾಸಕ ಹಾಗೂ ಮಾಜಿ ಸಚಿವ ವಿ ಸುನೀಲ್ ಕುಮಾರ್ ಹೇಳಿದರು. ‌

ಅವರು ಕಾರ್ಕಳ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠೀಯನ್ನುದ್ದೇಶಿಸಿ ಮಾತನಾಡಿದರು.

ರಾಜ್ಯದಲ್ಲೆ ಮಿಯ್ಯಾರು ಕಂಬಳ ಸುಸಜ್ಜಿತ ವಾದ ಕಂಬಳ ವಾಗಿದ್ದು ಸಕಲ ವ್ಯವಸ್ಥೆ ಗಳನ್ನು ಒಳಗೊಂಡಿದೆ. ಕಂಬಳ ಪ್ರೇಕ್ಷಕರಿಗೆ ಅನುಕೂಲವಾಗುವಂತೆ ಗ್ಯಾಲರಿಗಳು, ಚಾವಡಿಗಳು ವ್ಯವಸ್ಥೆ ಕಲ್ಪಿಸಲಾಗಿದೆ. ಈ ಬಾರಿ ಕಂಬಳವನ್ನು 24 ಗಂಟೆಯಲ್ಲಿ ಮುಗಿಸಲು ಸಕಲ ಪ್ರಯತ್ನ ಮಾಡಲಾಗುತ್ತಿದೆ. ಅದರೊಂದಿಗೆ ಸಮಿತಿಯ ಸದಸ್ಯರು ‌ಹಗಲಿರುಳು ಶ್ರಮಿಸಲಿದ್ದಾರೆ ಎಂದರು.

ಸಂಜೆ ನಡೆಯಲಿರುವ ಸಭಾ ಕಾರ್ಯಕ್ರಮದಲ್ಲಿ ಶಾಸಕ ಸುನಿಲ್ ಕುಮಾರ್, ಕಾರ್ಯಕ್ರಮ ಅಧ್ಯಕ್ಷತೆ ವಹಿಸಲಿದ್ದಾರೆ‌

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಹಾಗು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್‌ಕರ್, ಕೃಷಿ ಮತ್ತು ರೈತ ಕಲ್ಯಾಣ ಸಚಿವೆ ಶೋಭಾ ಕರಂದ್ಲಾಜೆ, ಮೂಡುಬಿದಿರೆ ಶಾಸಕ ಉಮಾನಾಥ ಕೋಟ್ಯಾನ್, ವಿಧಾನ ಪರಿಷತ್ ಸದಸ್ಯ ಎಸ್. ಎಲ್. ಬೋಜೇಗೌಡ, ಮಾಜಿ ಮುಖ್ಯ ಮಂತ್ರಿ ಡಾ. ಎಂ. ವೀರಪ್ಪ ಮೊಯಿಲಿ, , ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಕಾಪು ವಿಧಾನಸಭಾ ಕ್ಷೇತ್ರ ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಲ ಬೆಂಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಹಾಗೂ ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್, ಮಂಗಳೂರು ಇದರ ಅಧ್ಯಕ್ಷ ಡಾ. ಎಂ. ಎನ್. ರಾಜೇಂದ್ರ ಕುಮಾರ್, ಗೇರು ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಮಣಿರಾಜ ಶೆಟ್ಟಿ, ಮಾಜಿ ಸಚಿವ ಕೆ. ಅಭಯಚಂದ್ರ ಜೈನ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರ ಮಟ್ಟಾರ್ ರತ್ನಾಕರ ಹೆಗ್ಡೆ, ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾ ಕುಮಾರಿ, , ಜಿ.ಪಂ. ಕಾರ್ಯನಿರ್ವಾಹಣಾಧಿಕಾರಿ ಪ್ರಸನ್ನ ಎಚ್., ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ. ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ಕುಮಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಪೂರ್ಣಿಮಾ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರೋಶನ್ ಶೆಟ್ಟಿ, ಕಾರ್ಕಳ ತಹಸೀಲ್ದಾರ್‌ ನರಸಪ್ಪ ತಾ.ಪಂ ಕಾರ್ಯನಿರ್ವಹಣಾಧಿಕಾರಿ ಗುರುದತ್ ಎಂ. ಎನ್., ಡಿ.ವೈ.ಎಸ್.ಪಿ.ಅರವಿಂದ ಕಲಗುಜ್ಜಿ ಉಪಸ್ಥಿತರಿರುವರು ಎಂದರು.

ಸುದ್ದಿಗೋಷ್ಠಿಯಲ್ಲಿ ಮಿಯ್ಯರು ಕಂಬಳ ಸಮಿತಿ ಕಾರ್ಯಾಧ್ಯಕ್ಷ ಜೀವನ ದಾಸ್ ಅಡ್ಯಂತಾಯ, ಸಂಘಟನ ಪ್ರಧಾನ ಕಾರ್ಯದರ್ಶಿ ಗುಣಪಾಲ ಕಡಂಬ, ಕೋಶಾಧಿಕಾರಿ ಶ್ಯಾಮ್ ಎನ್. ಶೆಟ್ಟಿ, ಸಹ ಕೋಶಾಧಿಕಾರಿ ರವೀಂದ್ರ ಕುಮಾರ್, ದಯಾನಂದ ಬಂಗೇರ, ಸುನೀಲ್ ಕುಮಾರ್ ಬಜಗೋಳಿ, ಪ್ರಕಾಶ್ ಬಲಿಪ, ಅಂತೋನಿ ಡಿಸೋಜ, ಶಾಂತಿರಾಜ್ ಜೈನ್, ಉದಯ ಎಸ್ ಕೋಟ್ಯಾನ್ ಮೊದಲಾದವರು ಉಪಸ್ಥಿತರಿದ್ದರು.