ರಾಜ್ಯ ಸರ್ಕಾರದ ವತಿಯಿಂದ ಸಿಎಂ ಡಿ.ಕೆ. ಶಿವಕುಮಾರ ಅವರ ನೇತೃತ್ವದಲ್ಲಿ ರಾಜ್ಯಾದ್ಯಂತ ಹಮ್ಮಿಕೊಂಡಿರುವ ಪ್ರಜಾಸೇವಾ ಆಂದೋಲನ ಕಾರ್ಯಕ್ರಮವು ತಾಲೂಕು ಹಾಗೂ ಹೋಬಳಿ ಮಟ್ಟದಲ್ಲಿ ಯಶಸ್ವಿಯಾಗಿ ನಡೆಯುತ್ತಿದೆ. ವಿವಿಧ ಗ್ರಾಮಗಳಿಂದ ಆಗಮಿಸುವ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ, ಸಾಧ್ಯವಾದಷ್ಟು ಸ್ಥಳದಲ್ಲಿಯೇ ಪರಿಹರಿಸುವ ಉದ್ದೇಶದಿಂದ ಸರ್ಕಾರ ಈ ಕಾರ್ಯಕ್ರಮವನ್ನು ಜಾರಿಗೆ ತಂದಿದೆ ಎಂದು ಶಾಸಕ ಯು.ಬಿ. ಬಣಕಾರ ಹೇಳಿದರು.
ಹಿರೇಕೆರೂರು: ರಾಜ್ಯ ಸರ್ಕಾರದ ವತಿಯಿಂದ ಸಿಎಂ ಡಿ.ಕೆ. ಶಿವಕುಮಾರ ಅವರ ನೇತೃತ್ವದಲ್ಲಿ ರಾಜ್ಯಾದ್ಯಂತ ಹಮ್ಮಿಕೊಂಡಿರುವ ಪ್ರಜಾಸೇವಾ ಆಂದೋಲನ ಕಾರ್ಯಕ್ರಮವು ತಾಲೂಕು ಹಾಗೂ ಹೋಬಳಿ ಮಟ್ಟದಲ್ಲಿ ಯಶಸ್ವಿಯಾಗಿ ನಡೆಯುತ್ತಿದೆ. ವಿವಿಧ ಗ್ರಾಮಗಳಿಂದ ಆಗಮಿಸುವ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ, ಸಾಧ್ಯವಾದಷ್ಟು ಸ್ಥಳದಲ್ಲಿಯೇ ಪರಿಹರಿಸುವ ಉದ್ದೇಶದಿಂದ ಸರ್ಕಾರ ಈ ಕಾರ್ಯಕ್ರಮವನ್ನು ಜಾರಿಗೆ ತಂದಿದೆ ಎಂದು ಶಾಸಕ ಯು.ಬಿ. ಬಣಕಾರ ಹೇಳಿದರು.
ತಾಲೂಕಿನ ಹಂಸಭಾವಿ ಗ್ರಾಮದ ಹೊಳಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಶನಿವಾರ ತಾಲೂಕು ಆಡಳಿತದ ವತಿಯಿಂದ ಆಯೋಜಿಸಿದ್ದ ಹೋಬಳಿ ಮಟ್ಟದ ಪ್ರಜಾಸೇವಾ ಅಭಿಯಾನ ಉದ್ಘಾಟಿಸಿ ಅವರು ಮಾತನಾಡಿದರು.ರಾಜ್ಯ ಸರ್ಕಾರದ ವತಿಯಿಂದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ರಾಜ್ಯಾದ್ಯಂತ ಹಮ್ಮಿಕೊಂಡಿರುವ ಪ್ರಜಾಸೇವಾ ಆಂದೋಲನ ಕಾರ್ಯಕ್ರಮವು ತಾಲೂಕು ಹಾಗೂ ಹೋಬಳಿ ಮಟ್ಟದಲ್ಲಿ ಯಶಸ್ವಿಯಾಗಿ ನಡೆಯುತ್ತಿದೆ. ಸಾರ್ವಜನಿಕರಿಂದ ನೇರವಾಗಿ ಅಹವಾಲುಗಳನ್ನು ಸ್ವೀಕರಿಸಿ, ಅಗತ್ಯ ಕ್ರಮಕ್ಕಾಗಿ ಮುಖ್ಯಮಂತ್ರಿಗಳ ಕಚೇರಿಯ ಗಮನಕ್ಕೂ ತರುವ ವ್ಯವಸ್ಥೆ ಮಾಡಲಾಗಿದೆ. ಪ್ರಜಾಸೇವಾ ಇಲಾಖೆ ಅಡಿಯಲ್ಲಿ ಸಮಗ್ರ ಸಾರ್ವಜನಿಕ ಕುಂದುಕೊರತೆ ಪರಿಹಾರ ವ್ಯವಸ್ಥೆ ಅಭಿವೃದ್ಧಿಪಡಿಸಲಾಗಿದೆ. ಸಾರ್ವಜನಿಕರು ಇದರ ಪ್ರಯೋಜನ ಪಡೆದುಕೊಂಡು ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕು ಎಂದರು.
ತಾಲೂಕು ಮಟ್ಟದ ಪ್ರಜಾಸೇವಾ ಅಭಿಯಾನವನ್ನು ಹಿರೇಕೆರೂರಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಆಯೋಜಿಸಿ, ಜಿಲ್ಲಾ ಉಸ್ತುವಾರಿ ಸಚಿವರನ್ನು ಕರೆಸಿ ಸಾರ್ವಜನಿಕರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.ಪ್ರಾಸ್ತಾವಿಕವಾಗಿ ಮಾತನಾಡಿದ ತಹಸೀಲ್ದಾರ್ ಎಂ. ರೇಣುಕಾ, ಪ್ರಜೆಗಳ ಸಮಸ್ಯೆಗಳನ್ನು ಪರಿಹರಿಸುವ ಉದ್ದೇಶವೇ ಪ್ರಜಾಸೇವೆ ಅಭಿಯಾನದ ಉದ್ದೇಶವಾಗಿದೆ. ಸಾರ್ವಜನಿಕರ ಸಮಸ್ಯೆಗಳ ಪರಿಹಾರ ಮತ್ತು ಅರ್ಹರಿಗೆ ಸರಕಾರಿ ಸೌಲಭ್ಯಗಳನ್ನು ಕಲ್ಪಿಸಿಕೊಡುವುದಾಗಿದೆ. ಈ ಅಭಿಯಾನ ತಾಲೂಕು ಮಟ್ಟ ಹೋಬಳಿ ಹಾಗೂ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಆಯೋಜನೆ ಮಾಡುವ ಮೂಲಕ ಪ್ರಜೆಗಳ ಅಹವಾಲುಗಳನ್ನು ಸ್ವೀಕರಿಸಿ ಸ್ಥಳದಲ್ಲಿ ಪರಿಹರಿಸುವ ಕಾರ್ಯ ಮಾಡಲಾಗುತ್ತದೆ. ಇಲ್ಲಿ ಆಗದೇ ಇದ್ದ ಸಂದರ್ಭದಲ್ಲಿ ಮುಂದಿನ ಕ್ರಮಕ್ಕೆ ಕಳುಹಿಸುವ ಮೂಲಕ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುವ ಕಾರ್ಯಮಾಡಲಾಗುತ್ತದೆ. ಜನತೆ ಸರ್ಕಾರದ ನೂತನ ಯೋಜನೆಯ ಪ್ರಯೋಜನ ಪಡೆದುಕೊಳ್ಳಬೇಕು ಎಂದರು.
ಈ ವೇಳೆ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷರಾದ ಮಲ್ಲಿಕಾರ್ಜುನ ಬುರಡೀಕಟ್ಟಿ, ನಾರಾಯಣಪ್ಪ ಗೌರಕ್ಕನವರ, ಜಿಲ್ಲಾ ಉಪಾಧ್ಯಕ್ಷ ರಮೇಶ ಮಡಿವಾಳರ, ಬಿಇಒ ಎನ್. ಶ್ರೀಧರ, ಇಒ ರವಿ ಎನ್., ಸಿಪಿಐ ಮಂಜುನಾಥ ಪಂಡಿತ, ಉಪತಹಸೀಲ್ದಾರ್ ಎಸ್.ಆರ್. ಆಪಿನಕೊಪ್ಪ, ಷಣ್ಮುಖಯ್ಯ ಮಳಿಮಠ, ಮಂಜುನಾಥ ಶಿವಪ್ಪ ಕಚವಿ, ಮೋಹನಗೌಡ ಪಾಟೀಲ, ಮಾರುತಿ ಅಂಗರಗಟ್ಟಿ, ನೂರ್‌ಅಹಮ್ಮದ್, ಜಡ್.ಆರ್.ಮಕಾಂದಾರ ಸೇರಿದಂತೆ ವಿವಿಧ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿಯವರು, ಸಾರ್ವಜನಿಕರು ಹಾಜರಿದ್ದರು