ಮೂಡ್ಲಕಟ್ಟೆ ಕಾಲೇಜ್ ಆಫ್ ನರ್ಸಿಂಗ್‌ನಲ್ಲಿ ಸಂಭ್ರಮದ ಓಣಂ ಆಚರಣೆ

| Published : Sep 14 2024, 01:55 AM IST

ಮೂಡ್ಲಕಟ್ಟೆ ಕಾಲೇಜ್ ಆಫ್ ನರ್ಸಿಂಗ್‌ನಲ್ಲಿ ಸಂಭ್ರಮದ ಓಣಂ ಆಚರಣೆ
Share this Article
  • FB
  • TW
  • Linkdin
  • Email

ಸಾರಾಂಶ

ನರ್ಸಿಂಗ್ ವಿದ್ಯಾರ್ಥಿನಿಯರು ಓಣಂ ಹಬ್ಬದ ಸಾಂಪ್ರದಾಯಿಕ ಉಡುಗೆ ತೊಡುಗೆಗಳನ್ನು ತೊಟ್ಟು ನೃತ್ಯ ಮಾಡಿದರು. ಕೇರಳದ ಚಂಡೆ ವಾದನ ಆಕರ್ಷಕವಾಗಿತ್ತು.

ಕನ್ನಡಪ್ರಭ ವಾರ್ತೆ ಕುಂದಾಪುರ

ಇಲ್ಲಿನ ಮೂಡ್ಲಕಟ್ಟೆ ಕಾಲೇಜ್ ಆಫ್ ನರ್ಸಿಂಗ್‌ನ ಆವರಣದಲ್ಲಿ ಶುಕ್ರವಾರ ಓಣಂ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲೆ ಪ್ರೊ. ಜೆನ್ನಿಫರ್ ಫ್ರೀಡಾ ಮೆನೇಜಸ್ ಓಣಂ ಆಚರಣೆಗೆ ಚಾಲನೆ ನೀಡಿದರು.ನಂತರ ನರ್ಸಿಂಗ್ ವಿದ್ಯಾರ್ಥಿನಿಯರು ಓಣಂ ಹಬ್ಬದ ಸಾಂಪ್ರದಾಯಿಕ ಉಡುಗೆ ತೊಡುಗೆಗಳನ್ನು ತೊಟ್ಟು ನೃತ್ಯ ಮಾಡಿದರು. ಕೇರಳದ ಚಂಡೆ ವಾದನ ಆಕರ್ಷಕವಾಗಿತ್ತು. ಈ ಸಂದರ್ಭ ವಿದ್ಯಾರ್ಥಿಗಳೇ ಹೂವಿನಿಂದ ಬಿಡಿಸಿದ ರಂಗೋಲಿ ಗಮನ ಸೆಳೆಯಿತು. ಒಟ್ಟಿನಲ್ಲಿ ವಿದ್ಯಾರ್ಥಿನಿಯರು ಸಂತಸದಿಂದ ಕುಣಿದು ಕುಪ್ಪಳಿಸಿದರು.ಕಾರ್ಯಕ್ರಮದಲ್ಲಿ ಕಾಲೇಜಿನ ಉಪ ಪ್ರಾಂಶುಪಾಲರಾದ ರೂಪಶ್ರೀ ಕೆ. ಎಸ್., ಐ.ಎಂ.ಜೆ. ಬ್ರಾಂಡ್ ಬಿಲ್ಡಿಂಗ್ ನಿರ್ದೇಶಕ ಡಾ. ರಾಮಕೃಷ್ಣ ಹೆಗಡೆ ಹಾಗೂ ಐ.ಎಂ.ಜಿ.ಐ.ಎಸ್‌.ಸಿ. ಕಾಲೇಜಿನ ಪ್ರಾಂಶುಪಾಲೆ ಡಾ. ಪ್ರತಿಭಾ ಎಂ. ಪಾಟೀಲ್, ಕಾಲೇಜಿನ ಎಲ್ಲಾ ಸಿಬ್ಬಂದಿ ವರ್ಗದವರು ಮತ್ತು ಎಲ್ಲ ವಿದ್ಯಾರ್ಥಿಗಳು ಭಾಗವಹಿಸಿದ್ದರು.ಓಣಂ ಹಬ್ಬದ ಆಚರಣೆಯ ಮಹತ್ವವನ್ನು ವಿದ್ಯಾರ್ಥಿನಿಯರಾದ ಶೆರಿಲ್ ಸಾರ, ಸೆಲಿನಾ ಹಾಗೂ ಗಾಯತ್ರಿ ವಿವಿಧ ಭಾಷೆಗಳಲ್ಲಿ ತಿಳಿಸಿದರು. ಕಾರ್ಯಕ್ರಮವನ್ನು ವಿದ್ಯಾರ್ಥಿನಿಯರಾದ ಸಿನ್ಸಿ ಸ್ವಾಗತಿಸಿದರು. ಆಸಿಫ್ ವಂದಿಸಿದರು. ತೆಸ್ಕಾ ಮತ್ತು ನಿತ್ಯ ಕಾರ್ಯಕ್ರಮ ನಿರೂಪಿಸಿದರು.